Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫಾಝಿಲ್ ಕೊಲೆ ಆರೋಪಿಗಳಿಗೆ ಠಾಣೆಯಲ್ಲಿ...

ಫಾಝಿಲ್ ಕೊಲೆ ಆರೋಪಿಗಳಿಗೆ ಠಾಣೆಯಲ್ಲಿ ರಾಜಾತಿಥ್ಯ ನೀಡಿಲ್ಲ: ಎನ್. ಶಶಿಕುಮಾರ್

ವಾರ್ತಾಭಾರತಿವಾರ್ತಾಭಾರತಿ9 Aug 2022 2:04 PM IST
share
ಫಾಝಿಲ್ ಕೊಲೆ ಆರೋಪಿಗಳಿಗೆ ಠಾಣೆಯಲ್ಲಿ ರಾಜಾತಿಥ್ಯ ನೀಡಿಲ್ಲ: ಎನ್. ಶಶಿಕುಮಾರ್

ಮಂಗಳೂರು, ಆ.9: ಮುಹಮ್ಮದ್ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಸುರತ್ಕಲ್ ಠಾಣೆಯಲ್ಲಿ ವಿಶೇಷ ಆತಿಥ್ಯ ನೀಡಲಾಗಿಲ್ಲ. ಈ ಬಗ್ಗೆ ಸುರತ್ಕಲ್ ಠಾಣೆಗೆ ಭೇಟಿ ನೀಡಿ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ. ಆ ರೀತಿ ಯಾವುದೇ ಆರೋಪಿಗೆ ಠಾಣೆಯಲ್ಲಿ ವಿಶೇಷ ಆತಿಥ್ಯ ನೀಡಿಲ್ಲ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ.

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಎನ್. ಶಶಿಕುಮಾರ್,  ಈ ಬಗ್ಗೆ ಕೆಲವು ಪ್ರಮುಖರು ನೀಡಿರುವ ಹೇಳಿಕೆಗಳನ್ನು ಗಮನಿಸಿದ್ದೇನೆ. ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳನ್ನು ನಿಯಮಾನುಸಾರವೇ ವ್ಯವಹರಿಸಲಾಗಿದೆ. ಯಾವ ಆಧಾರದಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆಂದು ಗೊತ್ತಾಗಿಲ್ಲ ಎಂದರು.

 ಇದನ್ನೂ ಓದಿ: ಬಿಹಾರ ರಾಜಕೀಯ ಬಿಕ್ಕಟ್ಟು: ತೇಜಸ್ವಿ ಯಾದವ್‌ರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಲಿರುವ ನಿತೀಶ್‌ ಕುಮಾರ್

ನಾನು ಸೋಮವಾರ ಬೆಳಗ್ಗೆಯೂ ಮುಹಮ್ಮದ್ ಫಾಝಿಲ್ ಮನೆ ಬಳಿ ಹೋಗಿದ್ದೆ. ಈ ವೇಳೆ ಅಲ್ಲಿ ಮಾತನಾಡಲು ಗಂಡಸರು ಯಾರೂ ಇರಲಿಲ್ಲ. ಅವರ ಕುಟುಂಬದ ಬಹುತೇಕ ಸದಸ್ಯರಲ್ಲಿ ನನ್ನ ಹಾಗೂ ಹಿರಿಯ ಅಧಿಕಾರಿಗಳ ಮೊಬೈಲ್ ನಂಬರ್‌ಗಳಿವೆ. ಹಾಗಾಗಿ ಇಂತಹ ಆಧಾರರಹಿತ ಹೇಳಿಕೆ ನೀಡುವ ಬದಲು, ಅಂತಹದ್ದೇನಾದರೂ ಇದ್ದಲ್ಲಿ ನಮ್ಮ ಗಮನಕ್ಕೆ ತರಬಹುದು. ಮುಹಮ್ಮದ್ ಫಾಝಿಲ್ ಕೊಲೆ ನಗರದಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ಪ್ರಕರಣವಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ. ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳನ್ನು ರಾಜಾರೋಷವಾಗಿ ತಿರುಗಾಡಲು ಬಿಡುವ ಪ್ರಮೇಯವೇ ಇಲ್ಲ ಎಂದು ಕಮಿಷನರ್ ಹೇಳಿದರು.

ಮುಹಮ್ಮದ್ ಫಾಝಿಲ್ ಹತ್ಯೆಗೆ ಸಂಬಂಧಿಸಿ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದ್ದು, ಪೊಲೀಸ್ ಕಸ್ಟಡಿಯಲ್ಲಿರುವ ಅವರಿಂದ ಹತ್ಯೆಗೆ ಕಾರಣ ಸೇರಿದಂತೆ ಇತರ ವಿಷಯ ಬಗ್ಗೆ ತನಿಖೆ ಮುಂದುವರಿದಿದೆ. ಪಂಚನಾಮೆ, ಸಾಕ್ಷಗಳ ಸಂಗ್ರಹ, ಈ ಪ್ರಕರಣದಲ್ಲಿ ಆರೋಪಿಗಳು ಇನ್ನೂ ಎರಡು ಹೆಚ್ಚುವರಿ ವಾಹನಗಳನ್ನು ಬಳಸಿರುವುದು ತಿಳಿದು ಬಂದಿದ್ದು, ಅವುಗಳನ್ನು ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X