ಆ.12ರವರೆಗೆ ದ.ಕ.ಜಿಲ್ಲೆಗೆ ಯೆಲ್ಲೋ ಅಲರ್ಟ್
ಸಾಂದರ್ಭಿಕ ಚಿತ್ರ
ಮಂಗಳೂರು, ಆ.9:ದ.ಕ.ಜಿಲ್ಲೆಯ ಕೆಲವು ಕಡೆ ಮಂಗಳವಾರ ಸಾಧಾರಣ ಮಳೆಯಾಗಿದ್ದು, ಉಳಿದಂತೆ ಬಹುತೇಕ ಕಡೆ ದಿನವಿಡೀ ಬಿಸಿಲ ವಾತಾವರಣವಿತ್ತು. ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾದ ಕಾರಣ ಘಟ್ಟದ ತಪ್ಪಲು ಪ್ರದೇಶದಲ್ಲಿ ಸ್ವಲ್ಪ ಮಳೆಯಾಗಿದೆ. ದ.ಕ.ಜಿಲ್ಲೆಯಲ್ಲಿ ಅ.12ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, ಮಳೆ ಮತ್ತಷ್ಟು ಇಳಿಮುಖವಾಗುವ ಸಾಧ್ಯತೆ ಇದೆ.
ಸಮುದ್ರದಲ್ಲಿ ಬವಾದ ಗಾಳಿ ಬೀಸುತ್ತಿರುವುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಕಡಬ ತಾಲೂಕಿನಲ್ಲಿ 5 ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ 2 ಸಹಿತ ಜಿಲ್ಲೆಯಲ್ಲಿ ಮಂಗಳವಾರ 7 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಇದರೊಂದಿಗೆ ಈವರೆಗೆ ಜಿಲ್ಲೆಯಲ್ಲಿ 753 ಮನೆಗಳಿಗೆ ಭಾಗಶಃ ಹಾನಿ ಮತ್ತು 205 ಮನೆಗಳು ಸಂಪೂರ್ಣ ಹಾನಿಯಾಗಿದೆ.
Next Story