ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮೂವರು ಪ್ರಮುಖ ಆರೋಪಿಗಳ ಬಂಧನ
ಪ್ರವೀಣ್ ನೆಟ್ಟಾರು
ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ.
ಸುಳ್ಯ ನಿವಾಸಿ ಶಿಯಾಬುದ್ದೀನ್ ಆಲಿ (33), ರಿಯಾಝ್ ಅಂಕತಡ್ಕ (29), ಸುಬ್ರಹ್ಮಣ್ಯ ಎಳಿಮಲೆ ನಿವಾಸಿ ಬಶೀರ್(29) ಬಂಧಿತರು ಎಂದು ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ.
ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಇಂದು ಮಧ್ಯಾಹ್ನ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಲಿದೆ.
Next Story