ತೋಡಾರು: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಚೂರಿ ಮತ್ತು ಕಲ್ಲಿನಿಂದ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆಗೆ ಯತ್ನ
ಮಂಗಳೂರು : ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿ ಮೂಡುಬಿದಿರೆ ತಾಲೂಕಿನ ತೋಡಾರು ಗ್ರಾಮದ ಫೈಝಲ್ ಯಾನೆ ಕ್ಯಾಬರೆ ಫೈಝಲ್ (33) ಎಂಬಾತನನ್ನು ಮೂಡುಬಿದಿರೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಆರೋಪಿಯ ವಿರುದ್ಧ ಮೂಡುಬಿದಿರೆ, ವೇಣೂರು, ಬಜ್ಪೆ, ಮಂಗಳೂರು ಗ್ರಾಮಾಂತರ, ಅಜೆಕಾರು, ಲಿಂಗದಹಳ್ಳಿ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು.
ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನಕ್ಕಾಗಿ ನ್ಯಾಯಾಲಯವು ವಾರೆಂಟ್ ಹೊರಡಿಸಿತ್ತು. ಅದರಂತೆ ಶುಕ್ರವಾರ ಈತ ಮನೆಯಲ್ಲಿರುವ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಲಾಗಿತ್ತು. ಈ ವೇಳೆ ಆರೋಪಿ ಮನೆಯಿಂದ ಓಡಿ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. ಬೆನ್ನಟ್ಟಿದಾಗ ಆರೋಪಿಯು ಚೂರಿ ಮತ್ತು ಕಲ್ಲಿನಿಂದ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಆದಾಗ್ಯೂ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Next Story