ಮಂಗಳೂರು ವಿವಿ ಸಂಧ್ಯಾ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ
ಮಂಗಳೂರು : ಮಂಗಳೂರು ವಿವಿ ಸಂಧ್ಯಾ ಕಾಲೇಜಿನಲ್ಲಿ ‘ಆಜಾದಿ ಕಾ ಅಮೃತ ಮಹೋತ್ಸವ’ದ ಪ್ರಯುಕ್ತ 5ನೇ ವಾರ್ಷಿಕ ಕ್ರೀಡಾಕೂಟ ‘ಉಮಂಗ್’ನ್ನು ರವಿವಾರ ಕಾಲೇಜಿನ ಕ್ರಿಡಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ, ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ ಪ್ರದೀಪ್ ಕುಮಾರ್ ಕ್ರೀಡಾಕೂಟ ಉದ್ಘಾಟಿಸಿದರು.
ಕಾಲೇಜಿನ ಪ್ರಾಂಶುಪಾಲೆ ಡಾ. ಸುಭಾಣಿ ಶ್ರೀವತ್ಸ ಅಧ್ಯಕ್ಷತೆ ವಹಿಸಿದ್ದರು. ಕ್ರೀಡಾಕೂಟವನ್ನು ದೈಹಿಕ ನಿರ್ದೇಶಕ ಅಶ್ವಥ್ ಸಾಲಿಯಾನ್ ಆಯೋಜಿಸಿದ್ದರು. ಕಾರ್ಯಕ್ರಮವನ್ನು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಅಶ್ವಿನಿ ಸಂಯೋಜಿಸಿದ್ದರು. ಇತಿಹಾಸ ವಿಭಾಗದ ಉಪನ್ಯಾಸಕಿ ಮಧುಶ್ರೀ ಜೆ.ಶ್ರೀಯಾನ್ ಸ್ವಾಗತಿಸಿದರು, ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಲತಾ ಅತಿಥಿಗಳನ್ನು ಪರಿಚಯಿಸಿದರು.
ಕ್ರೀಡಾ ಕಾರ್ಯದರ್ಶಿ ಭಾಗ್ಯಶ್ರೀ ಕ್ರೀಡಾ ಜ್ಯೋತಿಯನ್ನು ಅತಿಥಿಗಳಿಗೆ ಹಸ್ತಾಂತರಿಸಿದರು. ಅನೂಪ್ ಮತ್ತು ತಂಡದಿಂದ ಪ್ರಾರ್ಥನೆ ನಡೆಯಿತು. ಶಿಶಿರ್ ಪ್ರಮಾಣ ವಚನ ಬೋಧಿಸಿದರು.
Next Story