ಪಬ್ಲಿಕ್ ಸ್ಕೂಲ್ ಉಕ್ಕುಡದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಉಕ್ಕುಡ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಧ್ವಜಾರೋಹಣವನ್ನು ಪಬ್ಲಿಕ್ ಸ್ಕೂಲಿನಲ್ಲಿ ನೆರವೇರಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಉಪ್ಪಿನಂಗಡಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಅಬೂಬಕ್ಕರ್ ಪುತ್ತು ಉಪ್ಪಿನಂಗಡಿ ಇವರು ಧ್ವಜಾರೋಹಣವನ್ನು ನಡೆಸಿಕೊಟ್ಟರು.
ಶಾಲ ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆ ಹಾಡಿದರು. ಶಾಲಾ ಸಹ ಶಿಕ್ಷಕಿಯಾದ ನಿಖಿಲ ಅವರು ಸ್ವಾತಂತ್ರ್ಯ ದಿನಾಚರಣೆಯ ಕುರಿತು ಮಾತನಾಡಿದು.
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ರಶೀದ್ ವಿಟ್ಲ, ಉಪಾಧ್ಯಕ್ಷರಾದ ಅಬ್ಬಾಸ್, ಸಂಚಾಲಕರಾದ ಅಬೂಬಕ್ಕರ್, ಆಡಳಿತ ಮಂಡಳಿಯ ಸದಸ್ಯರಾದ ಹಮೀದ್, ಮನೀರ್ ದರ್ಬೆ, ಸಿದ್ದೀಕ್ ಆಲಂಗಾರ್, ಹನೀಫ್ ಕುದ್ದುಪದವು, ಅತಿಥಿಗಳಾಗಿ ಉಬೈದ್, ಪೋಷಕರಾದ ಹಸನ್, ಕಲಂದರ್ ಹಾಗು ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಹ ಶಿಕ್ಷಕಿ ಜ್ಯೋತ್ಸ್ನಾಸ್ವಾಗತಿಸಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು.ಮಕ್ಕಳ ಶಾಲಾ ಡೈರಿ ಪುಸ್ತಕವನ್ನು ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಆಗಮಿಸಿದ ಅಬೂಬಕ್ಕರ್ ಪುತ್ತು ಅವರು ಬಿಡುಗಡೆಗೊಳಿಸಿದರು.
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ರಶೀದ್ ವಿಟ್ಲ ರವರು ಸ್ವಾತಂತ್ರ್ಯ ದಿನಾಚರಣೆಯ ಕುರಿತು ಮಾತಾನಾಡಿದರು. ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕಿಯಾದ ಆರೀಫ ಸ್ವಾಗತಿಸಿದರು, ಸಹ ಶಿಕ್ಷಕಿ ರಶೀದ ಬೇಗಂ ವಂದಿಸಿದರು. ಸಹ ಶಿಕ್ಷಕಿಯರಾದ ಹೇಮಲತ, ನಿಖಿಲ, ಜ್ಯೋತ್ಸ್ನಾ ರವರು ಜೊತೆಗಿದ್ದು ಸಹಕರಿಸಿದರು.
ರಮ್ಯ ಕಾರ್ಯಕ್ರಮ ನಿರೂಪಿಸಿದರು.