ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ಸ್ವಾತಂತ್ರ್ಯೋತ್ಸವ
ವಿಟ್ಲ: ಮಾಣಿ ಸಮೀಪದ ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಕೆ. ಶ್ರೀಧರ ರೈ ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ಮೆನೇಜರ್ ಇಸ್ಮಾಯಿಲ್ ಹಾಜಿ ಕಂಬಳಬೆಟ್ಟು ಅಧ್ಯಕ್ಷತೆ ವಹಿಸಿದ್ದರು.
ಅನಂತಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ಬಾಸ್ ನೇರಳಕಟ್ಟೆ, ಕಡಬ ರೋಟರಿ ಕ್ಲಬ್ ಅಧ್ಯಕ್ಷ ಮುಹಮ್ಮದ್ ರಫೀಕ್ ನೇರಳಕಟ್ಟೆ, ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ಲತೀಫ್ ನೇರಳಕಟ್ಟೆ, ಪ್ರೇಮ, ಲಕ್ಷ್ಮೀ ಅತಿಥಿಗಳಾಗಿ ಭಾಗವಹಿಸಿದ್ದರು.
ಪ್ರಮುಖರಾದ ಆಶಿಕ್ ಮೂಲರಪಟ್ನ, ಉಮ್ಮರ್ ಗಣೇಶ ನಗರ, ಇಸಾಕ್ ಕೆಂಪುಗುಡ್ಡೆ, ಆಬಿದ್ ನೇರಳಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.
Next Story