Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರಧಾನಿ ನರೇಂದ್ರ ಮೋದಿ ಭೇಟಿಯ...

ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನೆಲೆ; ಬಂಗ್ರಕೂಳೂರಿನ ಟೆಂಟ್ ನಿವಾಸಿಗಳ ಎತ್ತಂಗಡಿ

►9 ಕುಟುಂಬಗಳ 30ಕ್ಕೂ ಅಧಿಕ ಅಲೆಮಾರಿಗಳು ಬೀದಿಪಾಲು ►ಪರ್ಯಾಯ ವ್ಯವಸ್ಥೆ ಕಲ್ಪಿಸದ ಬಗ್ಗೆ ತೀವ್ರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ28 Aug 2022 7:18 PM IST
share
ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನೆಲೆ; ಬಂಗ್ರಕೂಳೂರಿನ ಟೆಂಟ್ ನಿವಾಸಿಗಳ ಎತ್ತಂಗಡಿ

ಮಂಗಳೂರು, ಆ.28: ನಗರ ಹೊರವಲಯದ ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಸೆ.2ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಬಂಗ್ರ ಕೂಳೂರಿನ ಗುರುದ್ವಾರದಲ್ಲಿ ಟೆಂಟ್ ಹಾಕಿ ವಾಸಿಸುತ್ತಿದ್ದ ಅಲೆಮಾರಿಗಳನ್ನು ಆಡಳಿತ ವ್ಯವಸ್ಥೆಯು ಬೀದಿಪಾಲು ಮಾಡಿವೆ ಎಂಬ ಆರೋಪ ಕೇಳಿ ಬಂದಿವೆ.

ಶನಿವಾರ ರಾತ್ರಿ ಮತ್ತು ರವಿವಾರ ಬೆಳಗ್ಗೆ ಪೊಲೀಸರು ಬಂಗ್ರಕೂಳೂರು ಪ್ರದೇಶಕ್ಕೆ ತೆರಳಿ ಅಲ್ಲಿ ಟೆಂಟ್ ಹಾಕಿ ಬದುಕು ಸಾಗಿಸುತ್ತಿದ್ದ 9 ಕುಟುಂಬಗಳನ್ನು ಎತ್ತಂಗಡಿ ಮಾಡಿವೆ ಎನ್ನಲಾಗಿದೆ. ಇದರಿಂದ ಸುಮಾರು 30ಕ್ಕೂ ಅಧಿಕ ಮಂದಿ ಬೀದಿಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಭದ್ರತೆಯ ನೆಪವೊಡ್ಡಿ ಬಸವ ಆಡಿಸುವ ಬಡಪಾಯಿಗಳನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ. ಈ ಬಗ್ಗೆ ನಾವು ಸಂಸದರು, ಶಾಸಕರು, ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ್ದೇವೆ. ಆದರೆ ಈವರೆಗೆ ಅವರಿಂದ ಸ್ಪಂದನೆ ಸಿಕ್ಕಿಲ್ಲ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಿಂದ ಸುಮಾರು 1 ಕಿಮೀ. ದೂರದಲ್ಲಿರುವ ಗುರುದ್ವಾರದ ಬಳಿ ಬಸವ ಆಡಿಸುವ 9 ಕುಟುಂಬಗಳ 30ಕ್ಕೂ ಅಧಿಕ ಮಂದಿ ಕಳೆದ 8-9 ವರ್ಷದಿಂದ ಟೆಂಟ್ ಹಾಕಿ ವಾಸಿಸುತ್ತಿದ್ದರು. ಇದೀಗ ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಈ ಟೆಂಟ್‌ಗಳನ್ನು ತೆರವುಗೊಳಿಸಿ ಈ ಕುಟುಂಬದ ಸದಸ್ಯರನ್ನು ಆಡಳಿತ ವ್ಯವಸ್ಥೆಯು ನಿರಾಶ್ರಿತರನ್ನಾಗಿಸಿದೆ ಎಂಬ ಆರೋಪ ವ್ಯಕ್ತವಾಗಿದೆ.

ಪ್ರಧಾನಿ ನರೇಂದ್ರ ಮೋದಿಯ ಭೇಟಿಯ ಪ್ರಯುಕ್ತ ಮುಂಜಾಗರೂಕತಾ ಕ್ರಮವಾಗಿ ಕಾರ್ಯಕ್ರಮ ನಡೆಯುವ ಪರಿಸರದಲ್ಲಿ ನಿಗಾ ಇಡಬೇಕಾದ ಕಾರಣ ಸೆಪ್ಟಂಬರ್ 2ರವರೆಗೆ ಸಂಬಂಧಪಟ್ಟ ಕಟ್ಟಡದಲ್ಲಿ ಯಾವುದೇ ಚಟುವಟಿಕೆ ಸ್ಥಗಿತಗೊಳಿಸಲು ಈ ಮೂಲಕ  ಕೋರಲಾಗಿದೆ ಎಂದು ಕಾವೂರು ಠಾಣೆಯ ಇನ್‌ಸ್ಪೆಕ್ಟರ್‌ರ ಸಹಿಯುಳ್ಳ ಪೊಲೀಸ್ ನೋಟಿಸೊಂದು ಗುರುದ್ವಾರದ ಬಳಿಯ ಜೋಪಡಿ ನಿವಾಸಿಗಳಿಗೆ ನೀಡಲಾಗಿದೆ. ಆದರೆ ಈ ಜೋಪಡಿ ನಿವಾಸಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಜಿಲ್ಲಾಡಳಿತ, ಮನಪಾ ಅನ್ಯಾಯ ಎಸಗಿದೆ ಎಂದು ಆರೋಪಿಸಲಾಗಿದೆ.

‘ನಿನ್ನೆ ರಾತ್ರಿ ಮತ್ತು ಈವತ್ತು ಬೆಳಗ್ಗೆ ಪೋಲೀಸರು ಬಂದು ಬೆತ್ತ ತೋರಿಸಿ ಬೇಗ ತೆರವುಗೊಳಿಸಬೇಕು ಎಂದು ಏರಿದ ಧ್ವನಿಯಲ್ಲಿ ಹೇಳಿದ್ದಾರೆ. ಇಲ್ಲದಿದ್ದರೆ ನಿಮ್ಮನ್ನೆಲ್ಲ 15 ದಿನಗಳ ಕಾಲ ಬಂಧನದಲ್ಲಿಡಲಾಗುವುದು ಎಂದು ಬೆದರಿಸಿದ್ದಾರೆ. ಪ್ರಧಾನಿ ಬರುವಾಗ ನಿಮ್ಮ ಶೆಡ್‌ಗಳು ಅವರಿಗೆ ಕಾಣಿಸಬಾರದು. ಬೇಗನೇ ಟೆಂಟುಗಳನ್ನು ತೆರವುಗೊಳಿಸಿ ಎನ್ನುತ್ತಾ ಒತ್ತಾಯ ಪೂರ್ವಕವಾಗಿ ನಮ್ಮ ಟೆಂಟ್‌ಗಳನ್ನೆಲ್ಲಾ  ಬಿಚ್ಚಿಸಿದ್ದಾರೆ’ ಎಂದು ಬೀದಿಪಾಲಾದ ಅಲೆಮಾರಿಗಳು ಆರೋಪಿಸಿದ್ದಾರೆ.

‘ನಾವು ಮೂಲತಃ ಆಂಧ್ರಪ್ರದೇಶ ಮೂಲದವರು. ಕಳೆದ 8-9 ವರ್ಷದಿಂದ ಇಲ್ಲಿ ಟೆಂಟ್ ಹಾಕಿಸಿಕೊಂಡು ಬದುಕು ಸಾಗಿಸುತ್ತಿದ್ದೆವು. ನಮ್ಮಲ್ಲಿ ಬಾಣಂತಿಯರಲ್ಲದೆ ಸಣ್ಣ ಮಕ್ಕಳು ಕೂಡಾ ಇದ್ದಾರೆ. ಏಕಾಎಕಿ ನಮ್ಮನ್ನು ಇಲ್ಲಿಂದ ಎಬ್ಬಿಸಿದ್ದಾರೆ. ಬೇರೆ ವ್ಯವಸ್ಥೆಯನ್ನೂ ಮಾಡಿಲ್ಲ. ಹಾಗಾಗಿ ನಾವೀಗ ಬೀದಿ ಪಾಲಾಗಿದ್ದೇವೆ. ನಮ್ಮ ಮನೆ ಸಾಮಗ್ರಿಗಳನ್ನಿಡಲು ಸ್ಥಳೀಯ ವ್ಯಕ್ತಿಯೊಬ್ಬರು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ನಮಗೆ ಇನ್ನೂ ಉಳಕೊಳ್ಳಲು ವ್ಯವಸ್ಥೆ ಆಗಿಲ್ಲ ಎಂದು ಮೀರೇಶ್ ಎಂಬವರು ಅಲವತ್ತುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X