ಉಜಿರೆ: ಶಾರ್ಟ್ ಸರ್ಕ್ಯೂಟ್ ನಿಂದ ಹಾಸಿಗೆ ಅಂಗಡಿಯಲ್ಲಿ ಬೆಂಕಿ; ಲಕ್ಷಾಂತರ ಮೌಲ್ಯದ ಸ್ವತ್ತು ನಾಶ
ಬೆಳ್ತಂಗಡಿ; ಉಜಿರೆಯ ಮುಖ್ಯ ಪೇಟೆಯ ಚಾರ್ಮಾಡಿ ರಸ್ತೆಯಲ್ಲಿರುವ ಹಾಸಿಗೆ ಅಂಗಡಿ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ದಾಸ್ತಾನು ಇರಿಸಿದ್ದ ಹತ್ತಿಗೆ ಬೆಂಕಿ ತಗುಲಿ ಕಟ್ಟಡಕ್ಕೆ ಬೆಂಕಿ ಆವರಿಸಿದ ಘಟನೆ ಮಂಗಳವಾರ ಮದ್ಯಾಹ್ನ ಸಂಭವಿಸಿದೆ.
ಸಮೀಪದ ತರಕಾರಿ,ಮೊಬೈಲ್,ಜ್ಯೂಸ್ ಹಾಗೂ ಬಟ್ಟೆ ಅಂಗಡಿಗಳಿಗೆ ಬೆಂಕಿ ಆವರಿಸಿ ಲಕ್ಷಾಂತರ ಮೌಲ್ಯದ ಸೊತ್ತು ನಾಶವಾಗಿದೆ ಎಂದು ಹೇಳಲಾಗಿದೆ.
ಬೆಂಕಿ ಕಾಣಿಸಿಕೊಂಡಿರುವುದನ್ನು ತಕ್ಷಣವೇ ಸ್ಥಳೀಯರು ಗಮನಿಸಿದ್ದು, ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಆಗಮಿಸಿ ಬೆಂಕಿನಂದಿಸುವ ಕಾರ್ಯ ಮಾಡಿದ್ದಾರೆ ಇದರಿಂದಾಗಿ ಹೆಚ್ಚಿನ ಅನಾಹುತ ತಪ್ಪಿದೆ ಎಂದು ತಿಳಿದು ಬಂದಿದೆ.
Next Story