Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಮೂವರು ಕಾಲೇಜು...

ಮಂಗಳೂರು: ಮೂವರು ಕಾಲೇಜು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ ಸುಖಾಂತ್ಯ

ಹಾಸ್ಟೆಲ್‌ನಿಂದ ವಿದ್ಯಾರ್ಥಿನಿಯರು ನಾಪತ್ತೆಗೆ ಕಾರಣವೇನು ಗೊತ್ತೆ?

ವಾರ್ತಾಭಾರತಿವಾರ್ತಾಭಾರತಿ24 Sept 2022 1:02 PM IST
share
ಮಂಗಳೂರು: ಮೂವರು ಕಾಲೇಜು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ ಸುಖಾಂತ್ಯ

ಮಂಗಳೂರು, ಸೆ.24: ನಗರದ ಖಾಸಗಿ ಕಾಲೇಜಿನ ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಶುಕ್ರವಾರ ಚೆನ್ನೈಯಲ್ಲಿ ಸುರಕ್ಷಿತವಾಗಿ ಪತ್ತೆಯಾಗಿದ್ದು, ಇಂದು ಮಂಗಳೂರಿಗೆ ಆಗಮಿಸುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಕಾಲೇಜು ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಅಸಮಾಧಾನಗೊಂಡಿದ್ದ ಈ ಮೂವರು ವಿದ್ಯಾರ್ಥಿನಿಯರು ಕಳೆದ ಬುಧವಾರ ಬೆಳಗ್ಗಿನ ಹೊತ್ತು ಹಾಸ್ಟೆಲ್‌ನಿಂದ ನಾಪತ್ತೆಯಾಗಿದ್ದರು. ಅವರು ಹಾಸ್ಟೆಲ್‌ನಿಂದ ಹೊರಟು ಮಂಗಳೂರು ರೈಲ್ವೇ ಸ್ಟೇಷನ್‌ವರೆಗೆ ತೆರಳಿದ್ದ ಮಾಹಿತಿ ಲಭ್ಯವಾಗಿತ್ತು. ಅದರಂತೆ ಕಾಲೇಜು ಆಡಳಿತ ಮಂಡಳಿ ಹಾಗೂ ಪೋಷಕರ ಜತೆ ಮಾತುಕತೆ ನಡೆಸಿ ಪೊಲೀಸ್ ಅಧಿಕಾರಿಗಳು ಮಕ್ಕಳ ಹುಡುಕಾಟ ನಡೆಸಿದ್ದರು. ನಿನ್ನೆ ತಮಿಳುನಾಡಿನ ಚೆನ್ನೈ ಬಳಿ ಅವರು ಪತ್ತೆಯಾಗಿದ್ದಾರೆ. ಎಂದು ಶಶಿಕುಮಾರ್ ತಿಳಿಸಿದ್ದಾರೆ.

ಮಕ್ಕಳ ಶಿಕ್ಷಣದ ಮೇಲೆ ಪೋಷಕರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ. ಹಾಗಾಗಿ ಕಡಿಮೆ ಅಂಕ ಬಂದಾಗ ಮಕ್ಕಳು ಅದನ್ನು ಯಾರಲ್ಲೂ ಹೇಳಿಕೊಳ್ಳಲಾಗದೆ ಒತ್ತಡದಿಂದ ಈ ಕಾರ್ಯ ಮಾಡಿದ್ದಾರೆ. ಮೂವರು ವಿದ್ಯಾರ್ಥಿನಿಯರಲ್ಲಿ ಒಬ್ಬಾಕೆಯ ಸಂಬಂಧಿಕರು ಚೆನ್ನೈಯಲ್ಲಿದ್ದು, ಅಲ್ಲಿಗೆಂದು ಅವರು ಜತೆಯಾಗಿ ತೆರಳಿದ್ದರು. ಅವರು ಮೂವರು ಎಂದೂ ಒಂಟಿಯಾಗಿ ಈ ರೀತಿ ಚೆನ್ನೈ ಆಗಲಿ ಅಥವಾ ಹೊರಗಡೆ ಆಗಲಿ ಪ್ರಯಾಣಿಸಿದವರಲ್ಲ. ಮಕ್ಕಳಲ್ಲಿ ಮೊಬೈಲ್ ಫೋನ್ ಆಗಲಿ, ಇತರ ಯಾವುದೇ ರೀತಿಯ ಮಾಹಿತಿಯೂ ಇರದೆ ಬಸ್ಸು ಮತ್ತು ರೈಲಿನಲ್ಲಿ ಪ್ರಯಾಣಿಸುತ್ತಾ ವಿಳಾಸ ಕೇಳಿಕೊಂಡು ಸಾಗಿದ್ದಾರೆ. ಪೋಷಕರು ತಮಗೆ ಖರ್ಚಿಗೆ ನೀಡಿದ್ದ ಹಣವನ್ನೇ ತಮ್ಮ ಪ್ರಯಾಣಕ್ಕೆ ಬಳಸಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದರು.

ಅವರ ಪೋಷಕರು ಹಾಗೂ ಕಾಲೇಜಿನ ಮುಖ್ಯಸ್ಥರ ಜತೆ ಮಾತುಕತೆ ನಡೆಸಿ ಮಕ್ಕಳ ಜತೆ ಸಮಾಲೋಚನೆ ನಡೆಸುವಂತೆ ತಿಳಿಸಲಾಗಿದೆ. ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್‌ಗಳಲ್ಲಿ ಇರುವ ಮಕ್ಕಳಿಗೆ ಎರಡು ಅಥವಾ ಮೂರು ತಿಂಗಳಿಗೊಮ್ಮೆ ಮಾತ್ರವೇ ಪೋಷಕರ ಭೇಟಿಗೆ ಅವಕಾಶ ನೀಡಲಾಗುತ್ತದೆ. ಕನಿಷ್ಠ ಸಮಯದಲ್ಲಿ ಮಕ್ಕಳಿಗೆ ಪೋಷಕರ ಜತೆ ಇರಲು ಅವಕಾಶ ನೀಡಿದರೆ ಉತ್ತಮ ಎಂದು ಅವರು ಹೇಳಿದರು.

''ನನ್ನ ಮಗಳು ಚೆನ್ನಾಗಿ ಓದುವಳು. ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದ ಹಿನ್ನೆಲೆಯಲ್ಲಿ ಮೂರು ಮಂದಿ ಚರ್ಚಿಸಿ ಒತ್ತಡ ನಿವಾರಿಸಿಕೊಳ್ಳುವ ಸಲುವಾಗಿ ಹೋಗಿದ್ದಾಗಿ ಹೇಳಿಕೊಂಡಿದ್ದಾರೆ. ಸುರಕ್ಷಿತವಾಗಿ ತಲುಪಿದ್ದಾರೆ. ಮುಂದೆ ಅವರಿಗೆ ಯಾವರೀತಿಯಲ್ಲಿ ಸಮಾಲೋಚನೆ ಮಾಡಿಸಬಹುದು ಎಂಬ ಬಗ್ಗೆ ಆಲೋಚಿಸಿ ಕ್ರಮ ವಹಿಸಲಾಗುವುದು'' ಎಂದು ವಿದ್ಯಾರ್ಥಿನಿಯೊಬ್ಬರ ತಂದೆ ಪ್ರತಿಕ್ರಿಯಿಸಿದ್ದಾರೆ.

''10 ವರ್ಷಗಳಿಂದ ನಮ್ಮ ಸಂಸ್ಥೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶದೊಂದಿಗೆ ಶಿಕ್ಷಣ ನೀಡಲಾಗುತ್ತಿದೆ. ಮಕ್ಕಳು ಕೂಡಾ ಸಂತಸದಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿಕೊಂಡು ಉತ್ತಮ ಕಲಿಕೆಯನ್ನು ರೂಢಿಸಿಕೊಂಡಿದ್ದಾರೆ. ಇದೊಂದು ನಮ್ಮ ಸಂಸ್ಥೆಗೂ ಅನಿರೀಕ್ಷಿತ ಹೊಸ ಸವಾಲು. ಸಾಕಷ್ಟು ಭದ್ರತೆ ಇದೆ, ಕೌನ್ಸಲಿಂಗ್ ವ್ಯವಸ್ಥೆಯೂ ಇದೆ. ಈ ನಿಟ್ಟಿನಲ್ಲಿ ಮಕ್ಕಳಲ್ಲಿ ಇನ್ನಷ್ಟು ಬೆರೆಯುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು’’ ಎಂದು ಸಂಸ್ಥೆಯ ಪ್ರಾಂಶುಪಾಲೆ ಮೋಹನಾ ತಿಳಿಸಿದ್ದಾರೆ.

ಈ ಸಂದರ್ಭ ಡಿಸಿಪಿ ಅಂಶು ಕುಮಾರ್, ದಿನೇಶ್ ಕುಮಾರ್ ಹಾಗೂ ವಿದ್ಯಾರ್ಥಿನಿಯರ ಪೋಷಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X