ಮಂಗಳೂರು: ಚಿನ್ನ ಅಕ್ರಮ ಸಾಗಾಟ: ಆರೋಪಿ ಸೆರೆ
ಮಂಗಳೂರು, ಸೆ.25: ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಓರ್ವನನ್ನು ಮಂಗಳೂರು ಅಂತಾರಾಷ್ಟೀಯ ವಿಮಾನ ನಿಲ್ದಾಣದ ಕ್ಟಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತನನ್ನು ಬಂಟ್ವಾಳ ತಾಲೂಕಿನವರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ಈತನಿಂದ 24 ಕ್ಯಾರೇಟ್ ನ 306 ಗ್ರಾಂ ತೂಕದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಯು ಸೆ.24ರಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಇಳಿದಿದ್ದು, ಆತ ಧರಿಸಿದ್ದ ಒಳ ಉಡುಪಿನಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಕಳ್ಳ ಸಾಗಣೆ ಮಾಡಲು ಯತ್ನಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈತನ ಚಲನವಲನ ಕಂಡು ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಆತನ್ನು ತಪಾಸಣೆಗೆ ಒಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಪಿಯನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದಾರೆ.
Next Story