ಸೆ.29: ಮಂಗಳೂರು ವಿ.ವಿ.ಯ 43ನೇ ಸಂಸ್ಥಾಪನಾ ದಿನಾಚರಣೆ
ಮಂಗಳೂರು, ಸೆ.27: ಮಂಗಳೂರು ವಿಶ್ವವಿದ್ಯಾನಿಲಯದ 43ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ಸೆ.29ರ ಮಧ್ಯಾಹ್ನ 2:30ಕ್ಕೆ ಮಂಗಳಗಂಗೋತ್ರಿಯ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಯು.ಟಿ. ಖಾದರ್, ವೇದವ್ಯಾಸ್ ಕಾಮತ್, ಎಸ್.ಎಲ್. ಭೋಜೆ ಗೌಡ ಭಾಗವಹಿಸುವರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸುವರು.
ಅಂತರಾಷ್ಟ್ರೀಯ ತರಬೇತುದಾರ ಡಾ. ಭರತ್ ಚಂದ್ರ ಸಂಸ್ಥಾಪನಾ ದಿನಾಚರಣೆಯ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಈ ಸಂದರ್ಭ ದ.ಕ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.
Next Story