ರಸ್ತೆ ಅಪಘಾತ; ಗಾಯಾಳು ಬೈಕ್ ಸವಾರ ಮೃತ್ಯು
ಪುತ್ತೂರು: 6 ದಿನಳಗ ಹಿಂದೆ ಬೈಕ್ ಅಪಘಾತದಿಂದ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಪುತ್ತೂರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಪಲ್ಲತ್ತಾರು ನಿವಾಸಿ ನಿತಿನ್ (27) ಮೃತರು ಎಂದು ಗುರುತಿಸಲಾಗಿದೆ. ಸೆ. 29ರಂದು ರಾತ್ರಿ ನಿತಿನ್ ಅವರು ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ನಗರದ ಸಾಲ್ಮರ ಎಂಬಲ್ಲಿ ಅಪಘಾತದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು.
ಬಳಿಕ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story