ಕಡಬ | ಬೆಡ್ ಶೀಟ್ ಮಾರಾಟದ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಮಾನಭಂಗಕ್ಕೆ ಯತ್ನ: ದೂರು ದಾಖಲು
ಕಡಬ, ಅ.21: ಬೆಡ್ ಶೀಟ್ ಮಾರಾಟದ ನೆಪದಲ್ಲಿ ಮನೆಗೆ ಬಂದ ಇಬ್ಬರು ಮಹಿಳೆಯ ಮಾನಭಂಗಕ್ಕೆ ಯತ್ನಿಸಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಫೀಕ್ ಹಾಗೂ ರಮೀಝುದ್ದೀನ್ ಆರೋಪಿಗಳಾಗಿದ್ದಾರೆ. ತಾಲೂಕಿನ ದೋಲ್ಪಾಡಿ ಗ್ರಾಮದ ಕಾಯರ್ ಮನೆ ಎಂಬಲ್ಲಿನ ಮಹಿಳೆಯೊಬ್ಬರು ನೀಡಿರು ದೂರಿನಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಗುರುವಾರ ಸಂಜೆ ಬೆಡ್ ಶೀಟ್ ಮಾರಾಟದ ನೆಪದಲ್ಲಿ ಮನೆ ಬಾಗಿಲಿಗೆ ಬಂದ ಆರೋಪಿಗಳು ಮಹಿಳೆಯ ಮೈಮೇಲೆ ಕೈ ಹಾಕಿ ಮಾನಭಂಗಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಮಹಿಳೆ ಬೊಬ್ಬೆ ಹೊಡೆದಾಗ ಆರೋಪಿಗಳು ಪರಾರಿಯಾಗಿದ್ದಾರೆ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
Next Story