Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನವೀಕರಿಸಬಹುದಾದ ಇಂಧನ ಉತ್ಪಾದನೆಗೆ...

ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಕರಾವಳಿಯಲ್ಲಿ ದೊಡ್ಡ ಪ್ರಮಾಣದ ಹೂಡಿಕೆ: ಸಿಎಂ ಬೊಮ್ಮಾಯಿ

19 Nov 2022 12:10 PM IST
share
ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಕರಾವಳಿಯಲ್ಲಿ ದೊಡ್ಡ ಪ್ರಮಾಣದ ಹೂಡಿಕೆ: ಸಿಎಂ ಬೊಮ್ಮಾಯಿ

ಮಂಗಳೂರು, ನ.19: ಬಂಡವಾಳ ಹೂಡಿಕೆದಾರರ ಸಮಾವೇಶದಿಂದ  ನವೀಕರಿಸಬಹುದಾದ ಇಂಧನ,  ಹೈಡ್ರೋಜನ್ ಇಂಧನ ಮತ್ತು ಕಡಲನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಂದೂವರೆಯಿಂದ ಎರಡು ಲಕ್ಷ ಕೋಟಿ ಬಂಡವಾಳದ ನಿರೀಕ್ಷೆ ಇದೆ. ದೊಡ್ಡ ಪ್ರಮಾಣದ ಹೂಡಿಕೆ ಕರಾವಳಿಯಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 

ಹಸಿರು ಯೋಜನೆ
ಉತ್ಪಾದನೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ತಯಾರಿ ನಡೆಸಲಾಗಿದೆ. ಈಗಾಗಲೇ ಮೂರು ನವೀಕರಿಸಬಹುದಾದ ಇಂಧನ ಕಂಪೆನಿಗಳೊಂದಿಗೆ ರಾಜ್ಯ ಉನ್ನತ ಮಟ್ಟದ ಅನುಮೋದನಾ ಸಮಿತಿ ಯಲ್ಲಿ  ಅನುಮೋದನೆ ನೀಡಲಾಗಿದೆ. ಬಹಳ ವೇಗದಲ್ಲಿ ಕೆಲಸಗಳಾಗುತ್ತಿದ್ದು, ಮಾರ್ಚ್ ಏಪ್ರಿಲ್ ವೇಳೆಗೆ ಕೆಲಸ ಪ್ರಾರಂಭ ಮಾಡುವುದಾಗಿ 2-3 ಕಂಪನಿಗಳು ಹೇಳಿವೆ. ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಕರಾವಳಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಮುಖ್ಯ ಪಾತ್ರ ವಹಿಸಿದೆ. ಹೈಡ್ರೋಜನ್ ಹಾಗೂ ಅಮೋನಿಯಾ ಉತ್ಪಾದನೆಯ ಎರಡು ಪ್ರಮುಖ ಯೋಜನೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಬರಲಿದ್ದು,  ಗಲ್ಫ್ ದೇಶದಲ್ಲಿ  ಮತ್ತು ಮಂಗಳೂರಿನಲ್ಲಿ  ತಲೆ ಎತ್ತಲಿದೆ. ಮಂಗಳೂರಿನ ಆಸುಪಾಸಿನಲ್ಲಿ ಕಡಲ ನೀರಿನಿಂದ ಅಮೋನಿಯಾ ತಯಾರು ಮಾಡುವ ಪ್ರಮುಖ ಘಟ್ಟ ಬರಲಿದೆ. ನವೀಕರಿಸಬಹುದಾದ ಇಂಧನ ಘಟಕ್ಕೆ ಅಗತ್ಯ ವಿರುವ ಇಂಧವನ್ನೂ ನವೀಕರಿಸಬಹುದಾದ ಇಂಧನ ಮೂಲಗಳಾದ ಸೋಲಾರ್, ವಿಂಡ್ ಮಿಲ್ ಗಳಿಂದಲೇ ಪಡೆಯಲಾಗುವುದು. ಸಂಪೂರ್ಣವಾಗಿ ಹಸಿರು ಯೋಜನೆಯಾಗಲಿದೆ ಎಂದರು. 

ಉದ್ಯೋಗ ಸೃಜನೆ
ನೇರ ಹಾಗೂ ಪರೋಕ್ಷವಾಗಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಜನೆಯಾಗಿ ಈ ಭಾಗದ ಯುವಕರಿಗೆ ಅವಕಾಶಗಳ ಬಾಗಿಲು ತೆರೆಯಲಿದೆ ಎಂದರು. 

ಆದ್ಯತೆ ಮೇರೆಗೆ ಮಂಗಳೂರು- ಬೆಂಗಳೂರು ಹೆದ್ದಾರಿ ದುರಸ್ತಿ
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ  ದುರಸ್ತಿ ಕಾಮಗಾರಿ  ನಿರಂತರವಾಗಿ ಮಳೆ ಬಂದಿದ್ದರಿಂದ  ತಡವಾಗಿದೆ. ಮುಂದಿನ ವಾರ ದೆಹಲಿಗೆ ತೆರಳಲಿದ್ದು,  ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಬೇಕಿದೆ. ಈ ವಾರದಲ್ಲಿ ಅದಕ್ಕೆ ಪೂರಕವಾಗಿ ಇಡೀ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳ ಬಗ್ಗೆ ಸಭೆ ಕರೆಯಲಾಗುವುದು. ಆದ್ಯತೆ ಮೇರೆಗೆ ಮಂಗಳೂರು- ಬೆಂಗಳೂರು ಹೆದ್ದಾರಿ ದುರಸ್ತಿ ಕೆಲಸಗಳಾದ ಸುರಂಗ ಮಾರ್ಗ, ವೈಟ್ ಟಾಪಿಂಗ್ ಮುಂತಾದ ಕೆಲಸ ಕೈಗೆತ್ತಿಕೊಳ್ಳಲಾಗುವುದು. ಅಲ್ಪಾವಧಿ ಕಾಮಗಾರಿಯಲ್ಲಿ ರಸ್ತೆಯಲನ್ನು ಬಳಕೆಗೆ ಯೋಗ್ಯವಾಗಿಸುವುದು ಹಾಗೂ ದೀರ್ಘಾವಧಿ ಕಾಮಗಾರಿ ಗಳಲ್ಲಿ ಸುರಂಗ ಮಾರ್ಗ ನಿರ್ಮಾಣ ಕೈಗೊಳ್ಳಲಾಗುವುದು ಎಂದರು. 

ಮತದಾರರ ಪರಿಷ್ಕರಣೆ: ಮತದಾರರ ಪರಿಷ್ಕರಣೆ ಪ್ರತಿ ವರ್ಷ ಹಾಗೂ ಚುನಾವಣೆ ಸಂದರ್ಭದಲ್ಲಿ ಮಾಡಲಾಗುತ್ತದೆ. ಚುನಾವಣಾ ಆಯೋಗದ ನಿರಂತರ ಪ್ರಕ್ರಿಯೆಯಾಗಿದೆ ಎಂದರು. 

ತೀವ್ರಗತಿಯಲ್ಲಿ ಪೊಲೀಸ್ ತನಿಖೆ: ವಿರೋಧ ಪಕ್ಷದವರು  ನ್ಯಾಯಮೂರ್ತಿಗಳಿಂದ ತನಿಖೆಗೆ ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಎಲ್ಲದ್ದಕ್ಕೂ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಬಿಡಿಎ ವಿಚಾರದಲ್ಲಿ ನ್ಯಾಯಾಂಗ ತನಿಖೆಯಾದಾಗ ಅದರಿಂದ ಪಾರಾಗಲು ಅನುಕೂಲವಾಯಿತು. ಶೀಘ್ರವಾಗಿ ಅಪರಾಧದ ವಿರುದ್ಧ  ಪೊಲೀಸ್ ಕೆಲಸ ಮಾಡುತ್ತದೆ. ಈಗಾಗಲೇ ಬಂಧವವೂ ಆಗಿದೆ. ತೀವ್ರಗತಿಯಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

share
Next Story
X