Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಿಸೆಂಬರ್‌ಗೆ ಕೆಸಿಎಫ್‌ನಡಿ ಪಠ್ಯಕ್ರಮ...

ಡಿಸೆಂಬರ್‌ಗೆ ಕೆಸಿಎಫ್‌ನಡಿ ಪಠ್ಯಕ್ರಮ ಸಿದ್ಧ: ಸಚಿವ ಬಿ.ಸಿ. ನಾಗೇಶ್

19 Nov 2022 6:50 PM IST
share
ಡಿಸೆಂಬರ್‌ಗೆ ಕೆಸಿಎಫ್‌ನಡಿ ಪಠ್ಯಕ್ರಮ ಸಿದ್ಧ: ಸಚಿವ ಬಿ.ಸಿ. ನಾಗೇಶ್

ಮಂಗಳೂರು: ಪ್ರಾಥಮಿಕ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಸಂಬಂಧಿಸಿ ಎಲ್ಲಾ ಸಿದ್ಧತೆ ಕೈಗೊಳ್ಳಲಾ ಗುತ್ತಿದ್ದು, ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (ಎನ್‌ಸಿಎಫ್) ಆಧರಿಸಿ ರಾಜ್ಯದಲ್ಲಿಯೂ ಪಠ್ಯಕ್ರಮ ಚೌಕಟ್ಟು (ಕೆಸಿಎಫ್) ರಚಿಸಲಾಗಿದೆ. ಇದರಂತೆ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳು ಡಿಸೆಂಬರ್ ವೇಳೆಗೆ ಸಿದ್ಧವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಖಾತೆ ಸಚಿವರಾದ ಬಿ.ಸಿ.ನಾಗೇಶ್ ಹೇಳಿದರು.

ನಗರದ ಸಂಘನಿಕೇತನದಲ್ಲಿ ಕೇಶವ ಸ್ಮೃತಿ ಸಂವರ್ಧನ ಸಮಿತಿಯ ನೇತೃತ್ವದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ‘ಕನ್ನಡ ಶಾಲಾ ಮಕ್ಕಳ ಹಬ್ಬ’ ಬೃಹತ್ ವಿದ್ಯಾರ್ಥಿ ಸಮಾವೇಶಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

ಮಾತೃಭಾಷೆಯಲ್ಲಿಯೇ ಶಿಕ್ಷಣ ನೀಡುವ ಸಂಬಂಧ ಅಂತಿಮ ತೀರ್ಮಾನವಾಗಿದೆ. ವಿಶೇಷವಾಗಿ ಆಯಾಯ ಭಾಗದ ಸಂಸ್ಕೃತಿ, ವಿಚಾರ ಆಧಾರಿತವಾಗಿ ಕಲಿಕೆಗೆ ಪ್ರೋತ್ಸಾಹ ಸಿಗಲಿದೆ. ಮಂಗಳೂರು ಭಾಗದ ವಿದ್ಯಾರ್ಥಿಗಳಿಗೆ ಇಲ್ಲಿನ ಕನ್ನಡ, ಸಮುದ್ರ, ಪರಿಸರ ಸಂಬಂಧಿತ ವಿಚಾರದಲ್ಲಿ ಅಧ್ಯಯನಕ್ಕೆ ಎನ್‌ಇಪಿಯಲ್ಲಿ ಆದ್ಯತೆ ನೀಡಲಾಗುವುದು ಎಂದರು.

ಕನ್ನಡ ಶಾಲೆಗಳನ್ನು ಉಳಿಸುವ ಮತ್ತು ಭಾಷೆಯ ಬಗ್ಗೆ ಅಭಿಮಾನದಿಂದ ಕೇಶವ ಸ್ಮೃತಿ ಸಂವರ್ಧನ ಸಮಿತಿ ಮಾದರಿ ಮತ್ತು ಅರ್ಥಪೂಣ ಕಾರ್ಯಕ್ರಮವನ್ನು ಆಯೋಜಿಸಿದೆ. ಈಗಾಗಲೇ ಜಾರಿಯಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ ಕೂಡ ಮಾತೃ ಭಾಷೆಯಲ್ಲಿಯೇ ಶಿಕ್ಷಣ ನೀಡಬೇಕೆಂಬುದಕ್ಕೆ ಮೊದಲ ಆದ್ಯತೆ ನೀಡಿದೆ ಎಂದವರು ಹೇಳಿದರು.

ಮಕ್ಕಳಲ್ಲಿ ಕನ್ನಡಾಭಿಮಾನ ಬೆಳೆಸುವ ಕಾರ್ಯವನ್ನು ಹೆತ್ತವರು ಮತ್ತು ಶಿಕ್ಷಕರು ಮಾಡಬೇಕು. ಇದುವರೆಗಿನ ಪಠ್ಯಗಳಲ್ಲಿ ಇತಿಹಾಸದ ಬಗೆಗೆ ಸುಳ್ಳು ಮಾಹಿತಿಗಳೇ ತುಂಬಿದ್ದವು. ಎನ್‌ಇಪಿ ಮೂಲಕ ಇದೆಲ್ಲವನ್ನು ದೂರ ಮಾಡಿ, ಈ ದೇಶದ ನಿಜವಾದ ಇತಿಹಾಸ ತಿಳಿಸುವ ಪ್ರಯತ್ನವಾಗಿದೆ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಮತ್ತು ಕನ್ನಡ ಶಾಲಾ ಮಕ್ಕಳ ಹಬ್ಬ ಸ್ವಾಗತ ಸಮಿತಿಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮಾತನಾಡಿ, ಕನ್ನಡ ಶಾಲೆಯ ಸೋಲು ಅದು ನಮ್ಮ ಭಾಷೆ, ಸಂಸ್ಕೃತಿಯ ಸೋಲು. ಹಾಗಾಗಿ ಕನ್ನಡ ಶಾಲೆಗಳು ಎಂದೂ ಸೋಲದಂತೆ ನೋಡಿಕೊಳ್ಳಬೇಕು ಎಂದರು.

ಐಎಎಸ್ ಅಧಿಕಾರಿ, ಯುಪಿಎಸ್‌ಸಿಯಲ್ಲಿ ದೇಶಕ್ಕೆ ಪ್ರಥಮ ರ‍್ಯಾಂಕ್‌ ಪಡೆದ ನಂದಿನಿ ಕೆ.ಆರ್. ಮಾತನಾಡಿ, ಮೊದಲು ನಮಗೆ ನಮ್ಮ ಭಾಷೆಯ ಮೇಲೆ ಅಭಿಮಾನ ಇರಬೇಕು. ಸಾಧನೆಗೆ ಭಾಷೆ ಅಥವಾ ಕಲಿಯುವ ಮಾಧ್ಯಮ ಎಂದೂ ಅಡ್ಡಿಯಾಗದು. ನಮ್ಮಲ್ಲಿರುವ ಶಕ್ತಿ ಏನೆಂಬುದನ್ನು ಮೊದಲು ಅರಿತುಕೊಳ್ಳಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ, ಕೇಶವ ಸ್ಮೃತಿ ಸಂವರ್ಧನ ಸಮಿತಿ ಅಧ್ಯಕ್ಷ ಡಾ.ವಾಮನ ಶೆಣೈ, ಕನ್ನಡ ಶಾಲಾ ಮಕ್ಕಳ ಹಬ್ಬ ಸ್ವಾಗತ ಸಮಿತಿ ಉಪಾಧ್ಯಕ್ಷ ಡಾ.ಕೆ.ಸಿ.ನಾಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಂಗಳೂರು ವಿವಿಯ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಆಶಯ ಭಾಷಣ ಮಾಡಿದರು. ಕನ್ನಡ ಶಾಲಾ ಮಕ್ಕಳ ಹಬ್ಬ ಸ್ವಾಗತ ಸಮಿತಿ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿ, ಸಹ ಕಾರ್ಯದಶಿ ರಮೇಶ್ ಕೆ ವಂದಿಸಿದರು.

ಸಭಾ ಕಾರ್ಯಕ್ರಮಕ್ಕೆ ಮುನ್ನ ನಗರದ ಗೋಕರ್ಣನಾಥೇಶ್ವರ ಕಾಲೇಜು ಬಳಿಯಿಂದ ಸಂಘನಿಕೇತನದ ವರೆಗೆ ಜಾಥಾ ನಡೆಯಿತು. 

share
Next Story
X