Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಆಟೋ ರಿಕ್ಷಾದಲ್ಲಿ ಸ್ಫೋಟ...

ಮಂಗಳೂರು| ಆಟೋ ರಿಕ್ಷಾದಲ್ಲಿ ಸ್ಫೋಟ ಪ್ರಕರಣದ ಆರೋಪಿ ಶಾರಿಕ್: ಎಡಿಜಿಪಿ

►'ಈತ ಪ್ರಚೋದನಕಾರಿ ಗೋಡೆ ಪ್ರಕರಣದ ಆರೋಪಿ' ► ಗುರುತು ಪತ್ತೆಹಚ್ಚಿದ ಕುಟುಂಬಸ್ಥರು ► ನಾಲ್ವರು ಪೊಲೀಸ್ ವಶಕ್ಕೆ

21 Nov 2022 12:31 PM IST
share
ಮಂಗಳೂರು| ಆಟೋ ರಿಕ್ಷಾದಲ್ಲಿ ಸ್ಫೋಟ ಪ್ರಕರಣದ ಆರೋಪಿ ಶಾರಿಕ್: ಎಡಿಜಿಪಿ
►'ಈತ ಪ್ರಚೋದನಕಾರಿ ಗೋಡೆ ಪ್ರಕರಣದ ಆರೋಪಿ' ► ಗುರುತು ಪತ್ತೆಹಚ್ಚಿದ ಕುಟುಂಬಸ್ಥರು ► ನಾಲ್ವರು ಪೊಲೀಸ್ ವಶಕ್ಕೆ

ಮಂಗಳೂರು, ನ.20: ರಾಷ್ಟ್ರೀಯ ಹೆದ್ದಾರಿ 75ರ ಪಂಪ್ವೆಲ್ ಸಮೀಪದ ನಾಗುರಿ ಎಂಬಲ್ಲಿ ಶನಿವಾರ ಸಂಜೆ ಆಟೊ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ವೇಳೆ ರಿಕ್ಷಾದಲ್ಲಿದ್ದ ಆರೋಪಿ ಪ್ರಯಾಣಿಕನ ಗುರುತನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಮುಹಮ್ಮದ್ ಶಾರಿಕ್(24) ಆರೋಪಿಯಾಗಿದ್ದಾನೆ. ಈತ 2020ರಲ್ಲಿ ಮಂಗಳೂರು ನಗರದಲ್ಲಿ ಎರಡು ಕಡೆ ಕಂಡು ಬಂದ ಪ್ರಚೋದನಕಾರಿ ಗೋಡೆ ಬರಹ ಪ್ರಕರಣದ ಆರೋಪಿಗಳಲ್ಲಿ ಓರ್ವನಾಗಿದ್ದ. ಎರಡು ಪ್ರಕರಣಗಳಲ್ಲಿ ದಸ್ತಗಿರಿಯಾಗಿ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರು ಪೊಲೀಸ್‌ಕಮಿಷನರ್ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದರು.

ಇದಲ್ಲದೆ ಆರೋಪಿ, 2022ರ ಸೆಪ್ಟಂಬರ್ 19ರಂದು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಕಾನೂನುಬಾಹಿರ ಚಟುವಟಿಕೆ ಪ್ರಕರಣದ 1ನೇ ಆರೋಪಿ. ಪ್ರಕರಣ ದಾಖಲಾದ ನಂತರ ಈತ ತಲೆಮರೆಸಿಕೊಂಡು ಮೈಸೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ನ.19ರಂದು ಮೈಸೂರಿನಿಂದ ಹೊರಟು ಹುಣಸೂರು, ಮಡಿಕೇರಿ, ಪುತ್ತೂರು, ಬಿ.ಸಿ.ರೋಡ್ ಮೂಲಕ ಬಸ್ಸಿನಲ್ಲಿ ಆಗಮಿಸಿ ಮಂಗಳೂರು ಹೊರ ವಲಯದಲ್ಲಿ ಬಸ್ಸಿನಿಂದ ಇಳಿದು ಆಟೋದಲ್ಲಿ ಪಂಪ್‌ವೆಲ್ ಕಡೆಗೆ ಹೋಗುತ್ತಿದ್ದಾಗ ನಾಗುರಿ ಬಳಿ ಆಟೋದಲ್ಲಿ ಸ್ಫೋಟ ನಡೆದಿದೆ. ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೈಸೂರಿನಲ್ಲಿ ಇಬ್ಬರು, ಮಂಗಳೂರಿನಲ್ಲಿ ಓರ್ವ ಹಾಗೂ ಊಟಿಯಿಂದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಗೊಳಪಡಿಸಲಾಗಿದೆ ಎಂದು ಎಡಿಜಿಪಿ ತಿಳಿಸಿದರು.

ಆರೋಪಿಯಿಂದ ವಶಪಡಿಸಿಕೊಂಡ ಮೊಬೈಲ್ ಫೋನ್ ಹಾಗೂ ಕುಟುಂಬದವರು ಇಂದು ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿ ಆತ ಶಾರಿಕ್ ಎಂಬುದಾಗಿ ಗುರುತಿಸಿದ್ದಾರೆ. ಆತನ ಮಲತಾಯಿ ಶಬಾನ, ಸಹೋದರಿ ಆಯಿಷಾ ಹಾಗೂ ತಾಯಿಯ ತಂಗಿ ಯಾಸ್ಮೀನ್ ಇಂದು ಆಸ್ಪತ್ರೆಗೆ ಭೇಟಿ ನೀಡಿದ್ದರು ಎಂದು ಅವರು ಹೇಳಿದರು.

ಸ್ಫೋಟ ಸಂಭವಿಸಿದ ಜಾಗದಲ್ಲಿ ಆಧಾರ್ ಕಾರ್ಡೊಂದು ದೊರಕಿತ್ತು. ಅದರಲ್ಲಿ ಹೆಸರು ಮತ್ತು ವಿಳಾಸ ಧಾರವಾಡದ್ದಾಗಿತ್ತು. ಅಲ್ಲಿನ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಕಲೆ ಹಾಕಲಾಗಿತ್ತು. ಅದು ನಕಲಿ ಆಧಾರ್ ಕಾರ್ಡ್ ಆಗಿದ್ದು, ಅದರಲ್ಲಿದ್ದ ಹೆಸರಿನ ವ್ಯಕ್ತಿಯ ಗುರುತು ಪತ್ತೆಯಾಗಿತ್ತು. ಆಧಾರ್ ಕಾರ್ಡ್‌ನಲ್ಲಿ ಫೋಟೋ ಆ ವಿಳಾಸದ ವ್ಯಕ್ತಿಯದ್ದಾಗಿರಲಿಲ್ಲ. ಆತನ ಆಧಾರ್ ಕಾರ್ಡ್ ಆರು ತಿಂಗಳ ಹಿಂದೆ ಕಳೆದು ಹೋಗಿರುವ ಬಗ್ಗೆ ವಿಚಾರವೂ ತಿಳಿದು ಬಂತು. ಇದೇ ವೇಳೆ ಆಟೋದಲ್ಲಿದ್ದ ಆರೋಪಿ ಪ್ರಯಾಣಿಕ ಎಲ್ಲಿಂದ ಬಂದಿದ್ದ ಎಂಬ ಮಾಹಿತಿ ಕಲೆ ಹಾಕಲಾಗಿತ್ತು. ಮೈಸೂರು ಆಯುಕ್ತ ರಮೇಶ್ ಅವರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿತ್ತು. ಅವರು ಕೇಂದ್ರ ತನಿಖಾ ಸಂಸ್ಥೆಯ ಸಹಾಯ ಪಡೆದು ಆರೋಪಿ ವಾಸವಿದ್ದ ಸ್ಥಳವನ್ನು ಪತ್ತೆ ಹಚ್ಚಲಾಯಿತು. ಶಿವಮೊಗ್ಗದಲ್ಲಿ ನಡೆದ ಗಲಾಟೆ ಪ್ರಕರಣವೊಂದಕ್ಕೆ ಸಂಬಂಧಿಸಿ ಜಬೀವುಲ್ಲಾ ಎಂಬಾತನನ್ನು ದಸ್ತಗಿರಿ ಮಾಡಲಾಗಿತ್ತು. ಆ ಸಂದರ್ಭ ಈ ಆರೋಪಿ ಎಚ್ಚೆತ್ತುಕೊಂಡು ಊರು ಬಿಟ್ಟು, ಶಿವಮೊಗ್ಗದಿಂದ ಪರಾರಿಯಾಗಿ, ಕೊಯಮತ್ತೂರು, ಕೇರಳ, ಮೈಸೂರು ಮೊದಲಾದ ಕಡೆ ಸುತ್ತಾಡಿ ಮೈಸೂರಿನಲ್ಲಿ ವಾಸವಾಗಿದ್ದುಕೊಂಡು ಮೊಬೈಲ್ ರಿಪೇರಿ ಸಂಸ್ಥೆಯಲ್ಲಿ ತರಗತಿ ಮಾಡಿಕೊಂಡಿದ್ದ. ಇದೆಲ್ಲಾ ಮಾಹಿತಿ ಅಂದು ರಾತ್ರಿ ನಮಗೆ ಸಿಕ್ಕಿತ್ತು. ಹಾಗಾಗಿ ಆಧಾರ್ ಕಾರ್ಡ್ ಕೂಡಾ ನಕಲಿ ಆಗಿರುವುದು ತಿಳಿದು ಬಂದ ಹಿನ್ನೆಲೆಯಲ್ಲಿ ಗಾಯಾಳು ಪ್ರಯಾಣಿಕ ಶಾರಿಕ್ ಎಂಬ ಅನುಮಾನ ಬಂದಿತ್ತು. ಆದರೆ, ಆತನ ಹಳೆ ಫೋಟೋ ಹಾಗೂ ಈಗಿನ ಮುಖದಲ್ಲಿ ಬದಲಾವಣೆ ಇದ್ದ ಕಾರಣ, ಅವರ ಕುಟುಂಬಿಕರನ್ನು ಕರೆಸಿ ಗುರುತಿಸುವ ಕೆಲಸ ಮಾಡಲಾಗಿದೆ. ಅವರು ಇದೀಗ ಆರೋಪಿಯನ್ನು ಶಾರೀಕ್ ಎಂದು ಗುರುತಿಸಿದ್ದಾರೆ ಎಂದು ಎಡಿಜಿಪಿ ತಿಳಿಸಿದರು.

ಆಟೋದಲ್ಲಿ ಕುಕ್ಕರ್ ಬಾಂಬ್‌ನೊಂದಿ ತೆರಳುತ್ತಿದ್ದ ಆರೋಪಿ ಸಾಕಷ್ಟು ಪರಿಣತಿ ಹೊಂದಿಲ್ಲದ ಕಾರಣ, ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಎಡಿಜಿಪಿ ಪ್ರತಿಕ್ರಿಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿಗಳಾದ ಅಂಶು ಕುಮಾರ್, ದಿನೇಶ್ ಕುಮಾರ್ ಉಪಸ್ಥಿತರಿದ್ದರು.


ಸದ್ಯದ ತನಿಖೆಯ ವೇಳೆ ಆರೋಪಿ ಸುಮಾರು 10 ದಿನಗಳ ಹಿಂದೆ ಮಂಗಳೂರಿಗೆ ಆಗಮಿಸಿರುವ ಮಾಹಿತಿ ಲಭ್ಯವಾಗಿದೆ. ಈತ ಸ್ಫೋಟಕ ತಯಾರಿಸುತ್ತಿದ್ದ ಬಗ್ಗೆ ಸಾಕ್ಷಿ ದೊರಕಿದೆ. ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಈತನ ಮೇಲೆ ಯುಎಪಿಎ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಸಾದತ್, ಮಾಝ್, ಅರಾಫತ್ ಅಲಿ ಎಂಬವರ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಅರಾಫತ್ ಅಲಿ ತರೆಮರೆಸಿಕೊಂಡು ದುಬೈನಲ್ಲಿರುವ ಮಾಹಿತಿ ಇದೆ. ಈ ಎಲ್ಲಾ ಆರೋಪಿಗಳು ಜಾಗತಿಕ ಭಯೋತ್ಪಾದನಾ ಸಂಘಟನೆಯಿಂದ ಪ್ರೇರಣೆಗೊಂಡು ಈ ಕೃತ್ಯದಲ್ಲಿ ತೊಡಗಿಸಿರುವುದು ತಿಳಿದು ಬಂದಿದೆ. ರಾಜ್ಯದ ಏಳು ಕಡೆಗಳಲ್ಲಿ ಶೋಧನಾ ಕಾರ್ಯ ಮುಂದುವರಿಸಲಾಗಿದೆ. ಗಾಯಾಳು ಆರೋಪಿ ಚೇತರಿಸಿಕೊಂಡಾಕ್ಷಣ ವಿಚಾರಣೆಗೊಳಪಡಿಸಿ ಸಮಗ್ರ ತನಿಖೆ ಮುಂದುವರಿಯಲಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.


ಮೈಸೂರಿನಲ್ಲಿ ಆರೋಪಿ ವಾಸವಿದ್ದ ಬಾಡಿಗೆ ಮನೆಯಿಂದ ಸಲ್ಪೆಕ್ಸ್ ಸಲ್ಫರ್ ಪೌಡರ್, ನಟ್ ಬೋಲ್ಟ್‌ಗಳು, ಸರ್ಕ್ಯೂಟ್‌ಗಳು, ಮಲ್ಟಿ ಫಂಕ್ಷನ್ ಡಿಲೆ ಟೈಮರ್, ಗ್ರೈಂಡರ್, ಮಿಕ್ಸರ್, ಮ್ಯಾಚ್ ಬಾಕ್ಸ್, ಬ್ಯಾಟರಿ, ಮೈಕ್ಯಾನಿಕಲ್ ಟೈಮರ್, ಆಧಾರ್ ಕಾರ್ಡ್, ಅಲ್ಯೂಮಿನಿಯಂ ಫೈಲ್ ಸಿಮ್ ಕಾರ್ಡ್‌ಗಳು, ಮೊಬೈಲ್‌ನ ಡಿಸ್ಪ್ಲೆಗಳು, ಸ್ಫೋಟಕಕ್ಕೆ ಬಳಸುವ ವಿವಿಧ ಬಗೆಯ ಕೆಮಿಕಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಟಿಕೆ ರೂಪದ ಎಕೆ 47 ಕೂಡಾ ಲಭ್ಯವಾಗಿದೆ. ಸ್ಫೋಟ ನಡೆದ ಸ್ಥಳದ ಪರಿಶೀಲನೆ ವೇಳೆ ಸಿಕ್ಕ ವಸ್ತುಗಳು ಹಾಗೂ ಈವರೆಗೆ ಸಂಗ್ರಹಿಸಿದ ಸಾಕ್ಷಾಧಾರದ ಮೇಲೆ ಯುಎಪಿಎ ಕಾಯ್ದೆ ಹಾಗೂ ಆಧಾರ್ ಕಾರ್ಡನ್ನು ನಕಲಿ ಮಾಡಿದ ಕುರಿತು ಫೋರ್ಜರಿ ಕಲಂಗಳನ್ನು ಅಳವಡಿಸಿ ತನಿಖೆ ಮುಂದುವರಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಆಧಿಕಾರಿಗಳು, ಸಿಬ್ಬಂದಿ ತಂಡ ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಶಿವಮೊಗ್ಗ, ಮೈಸೂರು ಪೊಲೀಸ್ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿ ತನಿಖಾ ಕಾರ್ಯದಲ್ಲಿ ಸಹಕರಿಸುತ್ತಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.


ಭಾರೀ ಅನಾಹುತ ತಪ್ಪಿದೆ
ಆರೋಪಿಯ ವಾಸವಿದ್ದ ಮನೆಯಲ್ಲಿ ಸಾಕಷ್ಟು ಸ್ಫೋಟಕ ಸಾಮಗ್ರಿಗಳು ದೊರಕಿದ್ದು, ಸಂಭವನೀಯ ಭಾರೀ ಅನಾಹುತ ತಪ್ಪಿದಂತಾಗಿದೆ. ಇಲ್ಲದಿದ್ದಲ್ಲಿ ಕರಾವಳಿಯಲ್ಲಿ ಉದ್ವಿಗ ವಾತಾವರಣ ಸೃಷ್ಟಿಯಾಗಿರುತ್ತಿತ್ತು. ನಾಗುರಿ ಬಳಿ ನಡೆದ ಸ್ಫೋಟದಲ್ಲಿ ಅಮಾಯಕ ರಿಕ್ಷಾ ಚಾಲಕ ನೋವು ಅನುಭವಿಸುವಂತಾಗಿದೆ. ಅವರು ದುಡಿಯುತ್ತಿದ್ದ ರಿಕ್ಷಾಕ್ಕೆ ಹಾನಿಯಾಗಿದೆ. ಅವರ ಚಿಕಿತ್ಸೆಗೆ ಅಗತ್ಯ ಕ್ರಮ ವಹಿಸಲಾಗಿದೆ. ಜಿಲ್ಲಾಧಿಕಾರಿ ಮೂಲಕ ಸರಕಾರದ ವತಿಯಿಂದ ಅವರಿಗೆ ಸೂಕ್ತ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು. ಸುಟ್ಟ ಗಾಯಗೊಂಡಿರುವ ಆರೋಪಿ ಗುಣಮುಖನಾದ ನಂತರ ಆತನನ್ನು ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ಮಾಡಲಾಗುವುದು. ಈ ಪ್ರಕರಣದ ತನಿಖೆಗೆ ಎಸಿಪಿ ಪರಮೇಶ್ವರ ಹೆಗಡೆಯವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

share
Next Story
X