Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಆರೋಪಿ ಬದಲು ಬೇರೊಬ್ಬರ ಬಂಧನ:...

ಮಂಗಳೂರು | ಆರೋಪಿ ಬದಲು ಬೇರೊಬ್ಬರ ಬಂಧನ: ಇಬ್ಬರು ಮಹಿಳಾ ಪೊಲೀಸ್‌ ಅಧಿಕಾರಿಗಳಿಗೆ 5 ಲಕ್ಷ ರೂ. ದಂಡ

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನ್ಯಾಯಾಲಯ ಆದೇಶ

2 Dec 2022 10:17 AM IST
share
ಮಂಗಳೂರು | ಆರೋಪಿ ಬದಲು ಬೇರೊಬ್ಬರ ಬಂಧನ: ಇಬ್ಬರು ಮಹಿಳಾ ಪೊಲೀಸ್‌ ಅಧಿಕಾರಿಗಳಿಗೆ 5 ಲಕ್ಷ ರೂ. ದಂಡ
ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನ್ಯಾಯಾಲಯ ಆದೇಶ

ಮಂಗಳೂರು, ಡಿ.2: ಪೊಕ್ಸೋ ಪ್ರಕರಣಕ್ಕೆ ಸಂಬಂಧಿಸಿ ನೈಜ ಆರೋಪಿಯನ್ನು ಬಂಧಿಸದೆ ಅದೇ ಹೆಸರಿನ ಬೇರೊಬ್ಬರನ್ನು ಬಂಧಿಸಿ ಸುಮಾರು ಒಂದು ವರ್ಷ ಕಾಲ ನ್ಯಾಯಾಂಗ ಬಂಧನದಲ್ಲಿರುವಂತೆ ಮಾಡಿದ ಮಹಿಳಾ ಪೊಲೀಸ್‌ ಅಧಿಕಾರಿಗಳಿಬ್ಬರು ಸಂತ್ರಸ್ತರಿಗೆ ತಮ್ಮ ಜೇಬಿನಿಂದಲೇ 5 ಲಕ್ಷ ರೂ. ಪರಿಹಾರ ನೀಡುವಂತೆ ಮಂಗಳೂರು ಎರಡನೇ ಹೆಚ್ಚುವರಿ ಎಫ್‌ಟಿಎಸ್‌ಸಿ ಪೊಕ್ಸೋ ನ್ಯಾಯಾಲಯ ಆದೇಶಿಸಿದೆ.

ಮಂಗಳೂರು ಮಹಿಳಾ ಪೊಲೀಸ್‌ ಠಾಣಾ ನಿರೀಕ್ಷಕಿ ರೇವತಿ ಮತ್ತು ಉಪನಿರೀಕ್ಷಕಿ ರೋಸಮ್ಮ ಪಿ.ಪಿ. ದಂಡ ವಿಧಿಸಲ್ಪಟ್ಟ ಪೊಲೀಸ್ ಅಧಿಕಾರಿಗಳಾಗಿದ್ದಾರೆ. ಸಂತ್ರಸ್ತ ನವೀನ್‌ ಸಿಕ್ವೇರ ಎಂಬವರಿಗೆ 5,00,000 ರೂ. ಪರಿಹಾರವನ್ನು ನೀಡಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಅಲ್ಲದೆ ಈ ಇಬ್ಬರು ಪೊಲೀಸ್‌ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಗೂ ಆದೇಶಿಸಿದ್ದಾರೆ.

ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪೊಕ್ಸೊ ಪ್ರಕರಣದಡಿ ನವೀನ್‌ ಎನ್ನುವ ವ್ಯಕ್ತಿ ಆರೋಪಿಯಾಗಿದ್ದನು.  ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆಯನ್ವಯ ಎಸ್ಸೈ ರೋಸಮ್ಮ ಪಿ.ಪಿ. ಅವರು ನವೀನ್‌ ಮೇಲೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಪೊಲೀಸ್‌ ನಿರೀಕ್ಷಕಿ ರೇವತಿಯವರಿಗೆ ಹಸ್ತಾಂತರಿಸಿದ್ದರು. ತನಿಖಾ ಸಮಯದಲ್ಲಿ ನವೀನ್‌ ಸಿಕ್ವೇರ ಎಂಬವರನ್ನು ಬಂಧಿಸಲಾಗಿತ್ತು. ನೊಂದ ಬಾಲಕಿ ತನ್ನ ದೂರಿನಲ್ಲಿ ಮತ್ತು ನ್ಯಾಯಾಧೀಶರ ಮುಂದೆ ನೀಡಿದ ಹೇಳಿಕೆಯಲ್ಲಿ ಕೇವಲ ನವೀನ್‌ ಎಂಬ ಆರೋಪಿಯ ಹೆಸರನ್ನು ಉಲ್ಲೇಖೀಸಿದ್ದಳು. ಆದರೆ ನವೀನ್‌ ಸಿಕ್ವೇರ ಅವರನ್ನೇ ಆರೋಪಿಯನ್ನಾಗಿಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಯು.ರಾಧಾಕೃಷ್ಣ ಅವರು, ನವೀನ್‌ ಸಿಕ್ವೇರ ನಿರಪರಾಧಿ ಎಂದು ಖುಲಾಸೆ ಗೊಳಿಸಿದ್ದಾರೆ. ಅಲ್ಲದೆ ಪೊಲೀಸ್‌ ಅಧಿಕಾರಿಗಳು ನಿಜವಾದ ವ್ಯಕ್ತಿಯನ್ನು ಬಂಧಿಸದೆ, ನವೀನ್‌ ಸಿಕ್ವೇರ ರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಕ್ಕೆ 5 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಿದ್ದಾರೆ.

ಆರೋಪಿ ಪರ ವಕೀಲರಾದ ರಾಜೇಶ್‌ ಕುಮಾರ್‌ ಅರ್ಮಾಡಿ ಮತ್ತು ಗಿರೀಶ್‌ ಶೆಟ್ಟಿ ವಾದ ಮಂಡಿಸಿದ್ದರು.

ಇದನ್ನೂ ಓದಿ: ಸಿಧು ಮೂಸವಾಲಾ ಹತ್ಯೆಯ ಸಂಚುಕೋರ ಗೋಲ್ಡಿ ಬ್ರಾರ್ ಕ್ಯಾಲಿಫೋರ್ನಿಯಾದಲ್ಲಿ ಬಂಧನ: ವರದಿ

share
Next Story
X