Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎನ್ಎಂಪಿಎಯಲ್ಲಿ 75,400 ಮೆ.ಟನ್ ಮಲೇಶ್ಯಾ...

ಎನ್ಎಂಪಿಎಯಲ್ಲಿ 75,400 ಮೆ.ಟನ್ ಮಲೇಶ್ಯಾ ಮರಳು ವಿತರಣೆಗೆ ಕ್ರಮ: ಡಿಸಿ ರವಿ ಕುಮಾರ್

8 Dec 2022 1:58 PM IST
share
ಎನ್ಎಂಪಿಎಯಲ್ಲಿ 75,400 ಮೆ.ಟನ್ ಮಲೇಶ್ಯಾ ಮರಳು ವಿತರಣೆಗೆ ಕ್ರಮ: ಡಿಸಿ ರವಿ ಕುಮಾರ್

ಮಂಗಳೂರು, ಡಿ.8: ನವ ಮಂಗಳೂರು ಬಂದರಿನಲ್ಲಿ (ಎನ್ಎಂಪಿಎಯಲ್ಲಿ) ಕೆಲ ವರ್ಷಗಳ ಹಿಂದೆ ಮಲೇಶ್ಯಾದಿಂದ ಆಮದು ಮಾಡಲಾಗಿರುವುದೆನ್ನಲಾದ 75,400 ಮೆಟ್ರಿಕ್ ಟನ್ ಮರಳು ಲಭ್ಯವಿರುವುದು ಪತ್ತೆಯಾಗಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಅದನ್ನು ಜಿಲ್ಲೆಯ ಖರೀದಿದಾರರಿಗೆ ವಿತರಿಸಲು ಕ್ರಮ ವಹಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಅವರು, ನಾಲ್ಕು ದಿನಗಳ ಹಿಂದೆ ಎನ್ಎಂಪಿಎಯಲ್ಲಿ ಅಷ್ಟು ಪ್ರಮಾಣದ ಮರಳು ಸಂಗ್ರಹ ಇರುವ ಬಗ್ಗೆ ತಿಳಿದು ಅಚ್ಚರಿಯಾಗಿತ್ತು. ಇದು ಎಂಸ್ಯಾಂಡ್ ಅಲ್ಲವಾಗಿದ್ದರೂ, ಅದಕ್ಕೆ ಸಮಾನವಾದ ಉತ್ತಮ ಗುಣಮಟ್ಟದ ಮರಳಾಗಿದೆ ಎಂದು ಹೇಳಿದರು.

ಈ ಮರಳನ್ನು 10 ಟನ್‌ಗೆ 10,000 ರೂ.ನಂತೆ ಜಿಲ್ಲೆಯಲ್ಲಿ ಪೂರೈಕೆ ಮಾಡಲಾಗುವುದು. ಇದಲ್ಲದೆ ಜಿಲ್ಲೆಯಲ್ಲಿ ಈಗಾಗಲೇ ವಿವಿಧ ಕಡೆಗಳಲ್ಲಿ ವಶಪಡಿಸಿಕೊಳ್ಳಲಾದ 1,000 ಮೆಟ್ರಿಕ್ ಟನ್ ಮರಳು ಲಭ್ಯವಿದೆ. ಆ ಮರಳನ್ನು ಕೂಡಾ ಲೋಡ್ ಒಂದಕ್ಕೆ 7,000 ರೂ.ಗಳಲ್ಲಿ ವಿತರಣೆಗೆ ಕ್ರಮ ವಹಿಸಲಾಗುವುದು ಎಂದರು.

ಎನ್ಎಂಪಿಎಯಲ್ಲಿ ಮರಳು ಸಂಗ್ರಹದ ಜಾಗದಲ್ಲಿ ಸೂಕ್ತ ಸಿಸಿ ಕ್ಯಾಮರಾಗಳ ಕಣ್ಗಾವಲಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಂಡು ಆರ್‌ಟಿಒದಿಂದ ಪರವಾನಿಗೆ ಹೊಂದಿರುವ ಲಾರಿಗಳ ಮೂಲಕ ಜಿಲ್ಲೆಯಲ್ಲಿ ಮರಳು ಅಗತ್ಯವಿದ್ದವರಿಗೆ ನಿಗದಿತ ದರದಲ್ಲಿ ವಿತರಣೆಗೆ ಕ್ರಮ ವಹಿಸಲಾವುದು. ಪ್ರತಿನಿತ್ಯ ವಿತರಣೆಯಾಗುವ ಮರಳು, ಮರಳು ಸಾಗಿಸುವ ಲಾರಿಗಳ ಕುರಿತಂತೆ ಸೂಕ್ತ ಮಾಹಿತಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಜತೆಗೆ ಜಿಲ್ಲಾಡಳಿತ, ಪೊಲೀಸ್ ಆಯುಕ್ತರು, ಅಧೀಕ್ಷಕರು ಹಾಗೂ ಮಾದ್ಯಮದ ಮೂಲಕ ಸಾರ್ವಜನಿಕರಿಗೂ ಮಾಹಿತಿ ಲಭ್ಯವಾಗುವಂತೆ ಕ್ರಮ ವಹಿಸಲು ಸೂಚಿಸಲಾಗುವುದು ಎಂದರು.

ಇದಲ್ಲದೆ ದ.ಕ. ಜಿಲ್ಲೆಯಲ್ಲಿ ಸಿಆರ್‌ಝೆಡ್ ಹಾಗೂ ಸಿಆರ್‌ಝೆಡೇತರ ವಲಯದಲ್ಲಿ ಅರ್ಹ ಗುತ್ತಿಗೆದಾರರ ಆಯ್ಕೆ ಪ್ರಕ್ರಿಯೆ ಅಂತಿಮಗೊಂಡಿದೆ. ಕೆಲವೊಂದು ಪ್ರಕ್ರಿಯೆಗಳು ನಡೆಯುತ್ತಿದ್ದು, ಶೀಘ್ರವೇ ಅಂತಿಮ ಆದೇಶ ಹೊರಡಿಸಲಾಗುವುದು ಎಂದು ಅವರು ಹೇಳಿದರು.

share
Next Story
X