Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಜಲೀಲ್ ಹತ್ಯೆ ಖಂಡಿಸಿ...

ಮಂಗಳೂರು: ಜಲೀಲ್ ಹತ್ಯೆ ಖಂಡಿಸಿ ‘ಕರ್ನಾಟಕ ಮುಸ್ಲಿಂ ಜಮಾಅತ್, ಎಸೆಸ್ಸೆಫ್, ಎಸ್‌ವೈಎಸ್’ನಿಂದ ಪ್ರತಿಭಟನೆ

27 Dec 2022 6:42 PM IST
share
ಮಂಗಳೂರು: ಜಲೀಲ್ ಹತ್ಯೆ ಖಂಡಿಸಿ ‘ಕರ್ನಾಟಕ ಮುಸ್ಲಿಂ ಜಮಾಅತ್, ಎಸೆಸ್ಸೆಫ್, ಎಸ್‌ವೈಎಸ್’ನಿಂದ ಪ್ರತಿಭಟನೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುವ ಅನೈತಿಕ ಪೊಲೀಸ್‌ಗಿರಿ, ಮತೀಯ ಗೂಂಡಾಗಿರಿ ಹಾಗೂ ಜಲೀಲ್ ಹತ್ಯೆಯನ್ನು ಖಂಡಿಸಿ ಮತ್ತು ಕೊಲೆಯಾದವರ ಕುಟುಂಬಗಳಿಗೆ ಪರಿಹಾರ ಧನದೊಂದಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಮುಸ್ಲಿಂ ಜಮಾಅತ್, ಎಸ್‌ವೈಎಸ್-ಎಸೆಸ್ಸೆಫ್ ವತಿಯಿಂದ ಮಂಗಳವಾರ ನಗರದ ಮಂಗಳೂರು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಿತು.

ಕೊಲೆಯಾದ ಫಾಝಿಲ್, ಜಲೀಲ್ ಮನೆಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಬೇಕು. ಹತ್ಯೆಯಾದ ಜಲೀಲ್ ಕುಟುಂಬಕ್ಕೆ 1 ಕೋ.ರೂ. ಪರಿಹಾರ ನೀಡಬೇಕು. ಕೊಲೆ ಪ್ರಕರಣದ ನಿಜವಾದ ಆರೋಪಿಗಳನ್ನು ಬಂಧಿಸಬೇಕು ಮತ್ತು ಅವರ ವಿರುದ್ಧ ಜಾಮೀನು ಸಿಗದಂತಹ ಕಠಿಣ ಸೆಕ್ಷನ್ ವಿಧಿಸಬೇಕು. ಅಪರಾಧ ಕೃತ್ಯ ಎಸಗಿದ ಆರೋಪಿಗಳು ರಾಜಾರೋಷವಾಗಿ ತಿರುಗಾಡುವುದನ್ನು ನಿಲ್ಲಿಸಬೇಕು ಎಂದು ಈ ಸಂದರ್ಭ ಹಕ್ಕೊತ್ತಾಯ ಮಂಡಿಸಲಾಯಿತು.

ಪೊಲೀಸರು ಯಾವ ಕಾರಣಕ್ಕೂ ಆಡಳಿತ ವ್ಯವಸ್ಥೆಯ ಕೈಗೊಂಬೆಯಾಗಬಾರದು. ವಿನಾಕಾರಣ ಅಮಾಯಕರ ವಿರುದ್ಧ ಪ್ರಕರಣ ದಾಖಲಿಸಿ ಅವರು ಜೀವನಪರ್ಯಂತ ಸಮಸ್ಯೆಯ ಸುಳಿಯಲ್ಲಿ ಸಿಲುಕುವಂತೆ ಮಾಡಬಾರದು. ಹದಗೆಟ್ಟಿರುವ ಕಾನೂನು ವ್ಯವಸ್ಥೆಯನ್ನು ಸುಸ್ಥಿತಿಗೆ ತರಬೇಕು. ಅನೈತಿಕ ಗೂಂಡಾಗಿರಿಗೆ ಕಡಿವಾಣ ಹಾಕಬೇಕು. ಬಂಧಿಸಲ್ಪಟ್ಟ ಕೆಲವೇ ದಿನದೊಳಗೆ ಜಾಮೀನು ಪಡೆದು ಮರಳಿ ಬರುವಂತಹ ವ್ಯವಸ್ಥೆಗೆ ಪೊಲೀಸ್ ಇಲಾಖೆ ಆಸ್ಪದ ನೀಡಬಾರದು. ಮುಖ್ಯಮಂತ್ರಿ, ಸಚಿವರು, ಶಾಸಕರು ರಾಜಧರ್ಮ ಪಾಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕೊಲೆಗೀಡಾದ ಜಲೀಲ್‌ರ ಸಹೋದರ ಮುಹಮ್ಮದ್ ಮುಸ್ಲಿಯಾರ್ ಮಾತನಾಡಿ ‘ಜಲೀಲ್ ಸೌಮ್ಯ ಸ್ವಭಾವದವ. ಯಾರ ತಂಟೆಗೂ ಹೋಗದವ. ಪತ್ನಿ ಮತ್ತು 10 ತಿಂಗಳ ಮಗು ಈಗ ಅನಾಥವಾಗಿದೆ. ಈ ಕೊಲೆಯಿಂದ ಜಲೀಲ್‌ನ ಕುಟುಂಬಕ್ಕೆ ಮಾತ್ರ ಅನ್ಯಾಯವಾಗಿಲ್ಲ. ಮಾನವಕುಲಕ್ಕೆ ಅನ್ಯಾಯವಾಗಿದೆ. ಈ ಅನ್ಯಾಯದ ವಿರುದ್ಧ ಇಲ್ಲಿ ನಡೆಸುವ ಪ್ರತಿಭಟನೆಯು ಸರಕಾರಕ್ಕೆ ಎಚ್ಚರಿಕೆಯಾಗಿದೆ ಎಂದರು.

ಎಸೆಸ್ಸೆಫ್ ಮುಖಂಡ ಮುಹಮ್ಮದ್ ನವಾಝ್ ಸಖಾಫಿ ಅಡ್ಯಾರ್ ಪದವು ಹಕ್ಕೊತ್ತಾಯ ಸಭೆಯನ್ನು ಉದ್ಘಾಟಿಸಿದರು. ಎಸ್‌ವೈಎಸ್ ಮುಖಂಡ ಸಿಎಚ್ ಮುಹಮ್ಮದಲಿ ಸಖಾಫಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಮುಸ್ಲಿಂ ಜಮಾಅತ್ ಮುಖಂಡ ಅಶ್ರಫ್ ಕಿನಾರ ಸ್ವಾಗತಿಸಿದರು.

ಎಸೆಸ್ಸೆಫ್ ರಾಷ್ಟ್ರೀಯ ನಾಯಕ ಕೆ.ಎಂ. ಅಬೂಬಕರ್ ಸಿದ್ದೀಕ್ ಮೋಂಟುಗೋಳಿ, ಕರ್ನಾಟಕ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಅಬ್ಬುಲ್ ಹಮೀದ್ ಬಜ್ಪೆ, ಎಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ, ಎಸ್‌ಜೆಯು ನಾಯಕ ಹಾಫಿಳ್ ಯಾಕೂಬ್ ಸಅದಿ ನಾವೂರು, ಎಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ, ಎಸ್‌ವೈಎಸ್ ಜಿಲ್ಲಾ ಕಾರ್ಯದರ್ಶಿ ಬಶೀರ್ ಮದನಿ ಕೂಳೂರು ಮಾತನಾಡಿದರು.

ಮಾಜಿ ಶಾಸಕ ಮೊಯ್ದಿನ್ ಬಾವಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಬಿಎಂ ಮಮ್ತಾಜ್ ಅಲಿ, ಸುಹೈಲ್ ಕಂದಕ್, ಅಶ್ರಫ್ ಸಅದಿ ಮಲ್ಲೂರು, ಸಾದಿಕ್ ಮಾಸ್ಟರ್ ಮಲೆಬೆಟ್ಟು, ಅಬ್ಬುಲ್ ಜಲೀಲ್ ಬ್ರೈಟ್, ನೇಜಾರ್ ಹಾಜಿ, ಇಕ್ಬಾಲ್ ಕೃಷ್ಣಾಪುರ,  ಮುಹಮ್ಮದ್ ಹನೀಫ್ ಬಜಪೆ,  ಇಸ್ಮಾಯೀಲ್ ಕೆಸಿ ರೋಡ್, ಎಕೆ ಹಸೈನಾರ್ ಸಕಲೇಶಪುರ, ವೆನ್ಜ್ ಅಬ್ಬುಲ್ಲ, ಮುಸ್ತಫಾ ನಯೀಮಿ, ಇಸ್ಮಾಯೀಲ್ ಮಾಸ್ಟರ್, ಫಾರೂಕ್ ಸಖಾಫಿ, ಅಶ್ರಫ್ ಕಲ್ಲೇಗ ಮತ್ತಿತರರು ಭಾಗವಹಿಸಿದ್ದರು.

share
Next Story
X