ಮಂಗಳೂರು | ಗಾಂಜಾ ಮಾರಾಟ ಪ್ರಕರಣ: ವೈದ್ಯ ವಿದ್ಯಾರ್ಥಿ ಸಹಿತ ಮತ್ತೆ ಮೂವರ ಬಂಧನ
ಬಂಧಿತರ ಒಟ್ಟು ಸಂಖ್ಯ 13ಕ್ಕೆ ಏರಿಕೆ
ಮಂಗಳೂರು, ಜ.12: ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜಿನ ವೈದ್ಯರು(Doctor), ವೈದ್ಯಕೀಯ ವಿದ್ಯಾರ್ಥಿಗಳು (Medical students) ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ(Ganja) ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರನ್ನು ಬಂಧಿಸಲಾಗಿದೆ (Arrest) ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ Pathology MD ಮಾಡುತ್ತಿರುವ ತುಮಕೂರು ಮೂಲದ ಡಾ.ಹರ್ಷ ಕುಮಾರ್, D Pharm ವಿದ್ಯಾರ್ಥಿ ಕೇರಳದ ಕೊಚ್ಚಿನ್ ಮೂಲದ ಅಧುನ್ ದೇವ್ ಮತ್ತು ಮಂಗಳೂರು ಕಸಬ ಬೆಂಗ್ರೆ ನಿವಾಸಿ, ಹಣ್ಣುಹಂಪಲು ಮಾರಾಟ ಅಂಗಡಿಯಲ್ಲಿ ಕೆಲಸ ಮಾಡುವ ಮುಹಮ್ಮದ್ ಅಫ್ರಾರ್(23) ಬಂಧಿತ ಆರೋಪಿಗಳೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಜಾಲವೊಂದನ್ನು ಭೇದಿಸಿರುವ ಮಂಗಳೂರು ಪೊಲೀಸರು ನಗರದ ಪ್ರತಿಷ್ಠಿತ 2 ವೈದ್ಯಕೀಯ ಕಾಲೇಜಿನ ಇಬ್ಬರು ವೈದ್ಯರು, 7 ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 10 ಮಂದಿಯನ್ನು ಈಗಾಗಲೇ ಬಂಧಿಸಿದ್ದಾರೆ. ಈ ಪೈಕಿ ನಾಲ್ವರು ಯುವತಿಯರೂ ಸೇರಿದ್ದಾರೆ. ಓರ್ವ ಯು.ಕೆ. ಮೂಲದ ಸಾಗರೋತ್ತರ ಭಾರತೀಯ ಪ್ರಜೆಯಾಗಿದ್ದಾನೆ. ಈ ಬಗ್ಗೆ ತನಿಖೆ ಮುಂದುವರಿಸಿರುವ ಪೊಲೀಸರು ಮತ್ತೆ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಮಂಗಳೂರು | ಗಾಂಜಾ ಮಾರಾಟ: ಖಾಸಗಿ ವೈದ್ಯಕೀಯ ಕಾಲೇಜಿನ ವೈದ್ಯರು, ವಿದ್ಯಾರ್ಥಿಗಳು ಸಹಿತ 10 ಮಂದಿಯ ಬಂಧನ