Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಚಿಕನ್ ಖಾದ್ಯದಲ್ಲಿ ಹುಳ: ಸಾಮಾಜಿಕ...

ಚಿಕನ್ ಖಾದ್ಯದಲ್ಲಿ ಹುಳ: ಸಾಮಾಜಿಕ ಜಾಲತಾಣದಲ್ಲಿ ವೈರಲ್

ಉಪ್ಪಿನಂಗಡಿಯ ಹೊಟೇಲೊಂದಕ್ಕೆ ಬೀಗ ಮುದ್ರೆ

13 Jan 2023 12:08 AM IST
share
ಚಿಕನ್ ಖಾದ್ಯದಲ್ಲಿ ಹುಳ: ಸಾಮಾಜಿಕ ಜಾಲತಾಣದಲ್ಲಿ ವೈರಲ್
ಉಪ್ಪಿನಂಗಡಿಯ ಹೊಟೇಲೊಂದಕ್ಕೆ ಬೀಗ ಮುದ್ರೆ

ಉಪ್ಪಿನಂಗಡಿ:  ಹುಳವಿದ್ದ ಚಿಕನ್ ಖಾದ್ಯವನ್ನು ಗ್ರಾಹಕರಿಗೆ ನೀಡಿದ್ದಾರೆಂಬ ಆಪಾದನೆಯ ಸಚಿತ್ರ ಮಾಹಿತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡತೊಡಗಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ದ.ಕ. ಜಿಲ್ಲಾಧಿಕಾರಿಯವರ ನಿರ್ದೇಶನದಂತೆ  ಪುತ್ತೂರು ತಹಶೀಲ್ದಾರ್ ನೇತೃತ್ವದ ತಂಡ  ದಾಳಿ ನಡೆಸಿ ಹೊಟೇಲನ್ನು ಮುಚ್ಚಿಸಿದ  ಘಟನೆ  ಉಪ್ಪಿನಂಗಡಿಯಿಂದ ವರದಿಯಾಗಿದೆ.

ಉಪ್ಪಿನಂಗಡಿಯ ಹಳೇ ಬಸ್ ನಿಲ್ದಾಣದ ಪರಿಸರದಲ್ಲಿನ ಮಾಂಸಾಹಾರಿ ಹೊಟೇಲೊಂದರಲ್ಲಿ ಗ್ರಾಹಕನಾಗಿ ಹೋಗಿದ್ದ ವೇಳೆ ನೀಡಲಾದ ಚಿಕನ್ ಫ್ರೈಯಲ್ಲಿ ಹುಳವೊಂದು ಕಾಣಿಸಿಕೊಂಡಿತ್ತೆನ್ನಲಾಗಿದೆ. ಈ ಮಾಹಿತಿಯು ಭಾರೀ ಪ್ರಮಾಣದಲ್ಲಿ ವೈರಲ್ ಆದಾಗ ಎಚ್ಚೆತ್ತ ಜಿಲ್ಲಾಡಳಿತ ಈ ಬಗ್ಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಸತ್ಯ ಶೋಧನೆ ನಡೆಸಲು ನಿರ್ದೇಶನ ನೀಡಿತು.

ಅದರಂತೆ ಪುತ್ತೂರು ತಹಶೀಲ್ದಾರ್ ನಿಸರ್ಗ ಪ್ರಿಯ, ಉಪ್ಪಿನಂಗಡಿ ಉಪ ತಹಶೀಲ್ದಾರ್ ಚೆನ್ನಪ್ಪಗೌಡ, ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್, ಪೊಲೀಸ್ ಸಬ್‌ಇನ್‌ಸ್ಪೆೆಕ್ಟರ್ ರಾಜೇಶ್ ಕೆ.ವಿ., ವಿಎ ಮಹೇಶ್, ಕಂದಾಯ ಇಲಾಖಾ ಸಿಬ್ಬಂದಿ ಯತೀಶ್ ಮಡಿವಾಳ್, ಮತ್ತಿತರನ್ನು ಒಳಗೊಂಡ ಅಧಿಕಾರಿಗಳ ತಂಡ ಗುರುವಾರ ರಾತ್ರಿ ಡಿಢೀರ್ ದಾಳಿ ನಡೆಸಿ ಆಹಾರ ಖಾದ್ಯಗಳ ತಪಾಸಣೆ ನಡೆಸಿತು. ಮಾಂಸ ಸಂಗ್ರಹಣಾ ಫ್ರಿಡ್ಜ್‌ಗಳನ್ನು ಪರಿಶೀಲಿಸಿತು. ಕೆಲವೊಂದು ಖಾದ್ಯಗಳ ಸ್ಯಾಂಪಲ್ ಗಳನ್ನು  ಪರೀಕ್ಷಾಕೇಂದ್ರಕ್ಕೆ ಕಳುಹಿಸಲು  ಸಂಗ್ರಹಿಸಲಾಯಿತು.

ಈ ವೇಳೆ ಹೋಟೇಲ್ ಉದ್ಯಮಕ್ಕೆ ಸಂಬಂಧಿಸಿ ಪಂಚಾಯತ್ ಪರವಾನಿಗೆ, ಆಹಾರ ವಿಭಾಗದ ಪರವಾನಿಗೆ, ಆರೋಗ್ಯ ಇಲಾಖಾ ಪರವಾನಿಗೆಯನ್ನು ಹೊಂದದೇ ಇರುವುದು ಕಂಡು ಬಂದಾಗ ತಹಶೀಲ್ದಾರ್  ಹೊಟೇಲನ್ನು ಮುಚ್ಚಿಸಲು  ನಿರ್ದೇಶನ ನೀಡಿದರು. ಅದರಂತೆ ಅಧಿಕಾರಿಗಳು ಹೊಟೇಲನ್ನು ಬಂದ್ ಮಾಡಿಸಿದರು.
ದಾಳಿ ವೇಳೆ ಸ್ಥಳೀಯ ಪೊಲೀಸರು ಸೂಕ್ತ ಬಂದೋ ಬಸ್ತು ಕೈಗೊಂಡಿದ್ದರು.

share
Next Story
X