Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೈಗಾರಿಕಾ ಮಾಲಿನ್ಯ, ಉದ್ಯೋಗ ನಿರಾಕರಣೆ...

ಕೈಗಾರಿಕಾ ಮಾಲಿನ್ಯ, ಉದ್ಯೋಗ ನಿರಾಕರಣೆ ವಿರೋಧಿಸಿ MRPL ಮುಂಭಾಗ ಪ್ರತಿಭಟನೆ

ಶಾಸಕರು ದ್ವೇಷ ಭಾಷಣಗಳನ್ನು ಮಾಡಿ ಯುವಕರನ್ನು ಹಿಂಸೆಗೆ ಪ್ರಚೋದಿಸುತ್ತಿದ್ದಾರೆ: ಮುನೀರ್ ಕಾಟಿಪಳ್ಳ ಆರೋಪ

24 Jan 2023 8:27 PM IST
share
ಕೈಗಾರಿಕಾ ಮಾಲಿನ್ಯ, ಉದ್ಯೋಗ ನಿರಾಕರಣೆ ವಿರೋಧಿಸಿ MRPL ಮುಂಭಾಗ ಪ್ರತಿಭಟನೆ
ಶಾಸಕರು ದ್ವೇಷ ಭಾಷಣಗಳನ್ನು ಮಾಡಿ ಯುವಕರನ್ನು ಹಿಂಸೆಗೆ ಪ್ರಚೋದಿಸುತ್ತಿದ್ದಾರೆ: ಮುನೀರ್ ಕಾಟಿಪಳ್ಳ ಆರೋಪ

ಸುರತ್ಕಲ್‌: ಬಾಕಿ ಇರುವ 27ಎಕರೆ ಹಸಿರು ವಲಯ ತಕ್ಷಣ ನಿರ್ಮಿಸಬೇಕು. ಭೂ ಸಂತ್ರಸ್ತರಿಗೆ ನಿಯಮದಂತೆ ಪರಿಹಾರ ಒದಗಿಸಬೇಕು. ಪರಿಸರ ಮಾಲಿನ್ಯ ಶೂನ್ಯಮಟ್ಟಕ್ಕೆ ಇಳಿಸುವುದು ಹಾಗೂ ಕಂಪೆನಿಯ ಉದ್ಯೋಗದಲ್ಲಿ ಸ್ಥಳಿಯರಿಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕೆಂದು ಒತ್ತಾಯಿಸಿ ನಾಗರಿಕ ಹೋರಾಟ ಸಮಿತಿ ಜೋಕಟ್ಟೆ ಮಂಗಳವಾರ ಎಂಆರ್‌ಪಿಎಲ್‌ನ (MRPL) ಮುಖ್ಯದ್ವಾರದ ಎದುರು ಪ್ರತಿಭಟನೆ ನಡೆಸಿತು.

ಈ ವೇಳೆ ಮಾತನಾಡಿದ ಹೋರಾಟ ಸಮಿತಿ ಜೋಕಟ್ಟೆ ಇದರ ಸಂಚಾಲಕ ಮುನೀರ್‌ ಕಾಟಿಪಳ್ಳ, ಸಾರ್ವಜನಿಕ ರಂಗದ ಪ್ರತಿಷ್ಠಿತ ಕಂಪೆನಿಯಾಗಿರುವ ಎಮ್ಆರ್ಪಿಎಲ್ ಪರಿಸರ, ಉದ್ಯೋಗದ ವಿಷಯದಲ್ಲಿ ಖಾಸಗಿ ಕಾರ್ಪೊರೇಟ್ ಕಂಪೆನಿಗಳಿಗಿಂತಲೂ ಕೆಟ್ಟದಾಗಿ ವರ್ತಿಸುತ್ತಿದೆ. ಹಸಿರು ವಲಯ ನಿರ್ಮಾಣದ ಕಡ್ಡಾಯ ನಿಯಮವನ್ನೂ ಉಲ್ಲಂಘಿಸಿದೆ ಎಂದು ಆರೋಪಿಸಿದ್ದಾರೆ.

ಜನವಸತಿ ಪ್ರದೇಶದಲ್ಲಿ ಮಾರಣಾಂತಿಕ ಪೆಟ್ ಕೋಕ್ ಮಾಲಿನ್ಯ ತಡೆಯಲು 27 ಎಕರೆ ಹಸಿರು ವಲಯ ನಿರ್ಮಿಸುವ ಸರಕಾರಿ ಆದೇಶದಂತೆ ಭೂಮಿ ಗುರುತಿಸಲಾಗಿದ್ದರೂ ಕಂಪೆನಿ ಕುಂಟುನೆಪಗಳನ್ನು ಮುಂದಿಟ್ಟು ಕಾಲಹರಣ ಮಾಡುತ್ತಿದೆ. ಇದರಿಂದ ಜೋಕಟ್ಟೆ, ಕಳವಾರು ಗ್ರಾಮಗಳು ರೋಗಗ್ರಸ್ತಗೊಂಡಿವೆ. ಕಂಪೆನಿಯ ಮಾಲಿನ್ಯದಿಂದ ಪಲ್ಗುಣಿ ನದಿಯಲ್ಲಿ ಮೀನುಗಳ ಮಾರಣಹೋಮ ನಡೆದಿದೆ. ಸಮುದ್ರದಲ್ಲಿ ಮೀನುಗಳ ಸಂತತಿ ಕಡಿಮೆಯಾಗುತ್ತಿದೆ. ಕಂಪೆನಿಯ ಉದ್ಯೋಗ ನೇಮಕಾತಿಯಲ್ಲಿ ಸ್ಥಳೀಯರನ್ನು ಮುಲಾಜಿಲ್ಲದೆ ಹೊರಗಿಡಲಾಗುತ್ತಿದೆ. ಈ ಕುರಿತು ಸ್ಥಳೀಯ ಶಾಸಕರಾದ ಉಮಾನಾಥ ಕೋಟ್ಯಾನ್, ಭರತ್ ಶೆಟ್ಟಿ ತಲೆ ಕೆಡಿಸಿಕೊಳ್ಳುತ್ತಿಲ್ಲ. ಕಂಪೆನಿಯ ಹಿತಗಳ ಕುರಿತು ಹೆಚ್ಚು ಆಸಕ್ತರಾಗಿವ ಬಿಜೆಪಿ ಸಂಸದ, ಶಾಸಕರಿಗೆ ಕಂಪೆನಿಯ ಗುತ್ತಿಗೆ, ಸಿಎಸ್ಆರ್ ನಿಧಿಯೇ ಹೆಚ್ಚು ಹತ್ತಿರ, ಯುವಜನರ ಉದ್ಯೋಗ, ಮಾಲಿನ್ಯದಂತಹ ಗಂಭೀರ ಪ್ರಶ್ನೆಗಳ ಕುರಿತು ಮಾತಾಡಬೇಕಾದ ಶಾಸಕರು ಧರ್ಮದ್ವೇಷದ ಭಾಷಣಗಳನ್ನು ಮಾಡಿ ಯುವಕರನ್ನು ಹಿಂಸೆಗೆ ಪ್ರಚೋದಿಸುವುದರಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮುನೀರ್ ಕಾಟಿಪಳ್ಳ ಆರೋಪಿಸಿದರು‌.

ಮಾಜಿ ಶಾಸಕ ಮೊಯ್ದಿನ್ ಬಾವಾ ಮಾತನಾಡಿ, ಕಾಂಗ್ರೆಸ್ ಸರಕಾರ ಇದ್ದಾಗ ಪರಿಸರ ಮಾಲಿನ್ಯದಿಂದ ಆಗಿರುವ ಹಾನಿ ಸರಿಪಡಿಸಲು ಆರು ಅಂಶಗಳ ಪರಿಹಾರ ಕ್ರಮ ಜಾರಿಗೊಳಿಸುವಂತೆ ಎಮ್ಆರ್ ಪಿಎಲ್ ಗೆ ಆದೇಶಿಸಿತ್ತು. ನಾನು ಶಾಸಕನಾಗಿದ್ದಾಗ ಪರಿಸರ ಮಾಲಿನ್ಯ ಕಂಡು ಹಿಡಿಯಲು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರತಿ ತಿಂಗಳು ಇಡೀ ಸುರತ್ಕಲ್ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದೆ. ಈಗಿನ ಶಾಸಕ ಭರತ್ ಶೆಟ್ಟಿ 'ಲವ್ ಜಿಹಾದ್', ಮಸೀದಿ ಮಂದಿರ ಎಂದು ಭಾಷಣ ಮಾಡುವುದರಲ್ಲೇ ಜನರನ್ನು ದಾರಿತಪ್ಪಿಸುತ್ತಿದ್ದಾರೆ. ಇಂತಹ ಶಾಸಕರಿಂದಾಗಿ ಕಂಪೆನಿಗಳಿಗೆ ಯಾರ ಭಯವೂ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಝ್, ಮಾಜಿ ಉಪಮೇಯರ್ ಗಳಾದ ಮುಹಮ್ಮದ್ ಕುಂಜತ್ತಬೈಲ್, ಪುರುಷೋತ್ತಮ ಚಿತ್ರಾಪುರ, ಸಾಮಾಜಿಕ ಮುಂದಾಳುಗಳಾದ ಮಂಜುಳಾ ನಾಯಕ್, ಸುಂದರ ಶೆಟ್ಟಿ, ನಾಗರಿಕ ಹೋರಾಟ ಸಮಿತಿಯ ಅಬೂಬಕ್ಕರ್ ಬಾವಾ, ಸಿಲ್ವಿಯಾ ಜೋಕಟ್ಟೆ, ಶರೀಫ್ ನಿರ್ಮುಂಜೆ, ಶೇಖರ ನಿರ್ಮುಂಜೆ, ರಾಜು ಜೋಕಟ್ಟೆ, ಚಂದ್ರಶೇಖರ ಜೋಕಟ್ಟೆ, ಸೀತಾರಾಮ ಆಚಾರ್ಯ, ಇಕ್ಬಾಲ್ ಜೋಕಟ್ಟೆ, ಯಮುನಾ ಕೆಂಜಾರು, ಡಿವೈಎಫ್ಐ ಮುಖಂಡರಾದ ಶ್ರೀನಾಥ್ ಕುಲಾಲ್, ಬಿ ಕೆ ಮಕ್ಸೂದ್, ಪ್ರಮೀಳಾ, ಸಲೀಂ ಶ್ಯಾಡೋ, ಸಮರ್ಥ್ ಭಟ್ ಸಹಿತ ಹಲವು ಮುಖಂಡರು ಉಪಸ್ಥಿತರಿದ್ದರು.

ಆರಂಭದಲ್ಲಿ ಎಚ್ ಪಿಸಿಎಲ್ ಪ್ರಧಾನ ದ್ವಾರದಿಂದ ಎಮ್ಆರ್ ಪಿಎಲ್ ಪ್ರಧಾನ ದ್ವಾರದವರಗೆ ಬೃಹತ್ ಮೆರವಣಿಗೆ ನಡೆಯಿತು‌. ಬಳಿಕ ಎಂಆರ್‌ಪಿಎಲ್‌ ಅಧಿಕಾರಿಯನ್ನು ಸ್ಥಳಕ್ಕೆ ಕರೆಸಿದ ಪ್ರತಿಭಟನಾ ನಿರತರು, ಶೀಘ್ರ ಸೂಕ್ತ ಕ್ರಮಗಳನ್ನು ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

share
Next Story
X