Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ.ಜಿಲ್ಲೆಗೆ 1,040 ಕೋಟಿ ರೂ....

ದ.ಕ.ಜಿಲ್ಲೆಗೆ 1,040 ಕೋಟಿ ರೂ. ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ: ಸುನಿಲ್ ಕುಮಾರ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ 74ನೇ ಗಣರಾಜ್ಯೋತ್ಸವ ಆಚರಣೆ

26 Jan 2023 11:28 AM IST
share
ದ.ಕ.ಜಿಲ್ಲೆಗೆ 1,040 ಕೋಟಿ ರೂ. ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ: ಸುನಿಲ್ ಕುಮಾರ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ 74ನೇ ಗಣರಾಜ್ಯೋತ್ಸವ ಆಚರಣೆ

ಮಂಗಳೂರು, ಜ. 26: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,040 ಕೋಟಿ ರೂ. ವೆಚ್ಚದಲ್ಲಿ 7 ಹೊಸ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿ, ದ.ಕ ಜಿಲ್ಲೆ ರಾಷ್ಟ್ರೀಯತೆಯ ಪ್ರಯೋಗ ಶಾಲೆ ಎಂದರು.

ಭಾರತ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನವನ್ನು ಹೊಂದಿದೆ. ಅಂಬೇಡ್ಕರ್ ರವರ ನೇತೃತ್ವದಲ್ಲಿ ರಚಿತವಾದ ಈ ಸಂವಿಧಾನ ಸಾಮಾನ್ಯರು ದೇಶದ ಉನ್ನತ ಸ್ಥಾನಕ್ಕೆ ಏರುವ ಅವಕಾಶ ಕಲ್ಪಿಸಿದೆ  ಸಂವಿಧಾನದ ತಳಹದಿಯ ಮೂಲಕ ಪ್ರಜಾಪ್ರಭುತ್ವವನ್ನು ಇನ್ನಷ್ಟು ಬಲಿಷ್ಠಗೊಳಿಸೋಣ ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ.

ಅಮೃತ ಮಹೋತ್ಸವದ ಅಂಗವಾಗಿ ಅಮೃತ ಗ್ರಾಮ ಪಂಚಾಯತ್, ಅಮೃತ ಅಂಗನವಾಡಿ, ಅಮೃತ ಆರೋಗ್ಯ, ಅಮೃತ ಶಾಲೆ, ಅಮೃತ ಸ್ವಸಹಾಯ ಈ ಶೀರ್ಷಿಕೆಯಡಿ ಜಿಲ್ಲೆಗೆ ಸುಮಾರು ಒಟ್ಟು ರೂ. 18,00 ಕೋಟಿ ರೂ. ಬಿಡುಗಡೆಗೊಳಸಲಾಗಿದೆ ಎಂದು ಅವರು ಹೇಳಿದರು.

ಪ್ರಧಾನ ಮಂತ್ರಿ ಕಿಸಾನ್ ಸಮ್ಮನ್ ಯೋಜನೆಯಡಿ ಜಿಲ್ಲೆಯ 1,39,992 ರೈತರಿಗೆ ಒಟ್ಟು 125 ಕೋಟಿ ರೂ. ಮೊತ್ತವನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ. ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮದಡಿ 37,000 ವಿದ್ಯಾರ್ಥಿಗಳಿಗೆ 18.02 ಕೋಟಿ ರೂ. ವಿದ್ಯಾರ್ಥಿ ವೇತನವಾಗಿ ನೀಡಲಾಗಿದೆ. ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣ ಉದ್ದಿಮೆ ಯೋಜನೆಯಡಿ ಜಿಲ್ಲೆಯಲ್ಲಿ 66 ಉದ್ದಿಮೆಗಳಿಗೆ ರೂ. 8.83 ಕೋಟಿ ಮೊತ್ತದ ಸಾಲವನ್ನು ಮಂಜೂರು ಮಾಡಲಾಗಿದೆ. ಶಾಲೆಗಳ ದುರಸ್ತಿಗಾಗಿ ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ ತಲಾ 50 ಲಕ್ಷದಂತೆ 4.90 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಲಾಗಿದೆ. ಪ್ರಾಕೃತಿಕವಿಕೋಪ ಪರಿಹಾರ ಅನುದಾನದಡಿ 289 ಪ್ರಾಥಮಿಕ ಶಾಲೆಗಳ ದುರಸ್ತಿಗಾಗಿ 5.54 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ.  ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ದೃಷ್ಟಿಯಿಂದ ಒಟ್ಟು ರೂ. 900 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಅವರು ಹೇಳಿದರು.

ಆರೋಗ್ಯ ಸೇವೆಗಳು ಮನೆಯ ಬಾಗಿಲನಲ್ಲೇ ದೊರಕಬೇಕು ಎನ್ನುವ ಉದ್ದೇಶದಿಂದ `ನಮ್ಮ ಕ್ಲಿನಿಕ್ ಯೋಜನೆಯನ್ನು ನಮ್ಮ ಸರ್ಕಾರ ಅನುಷ್ಠಾನಗೊಳಿಸಿದ್ದು, ಇದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ನಮ್ಮ ಕ್ಲಿನಿಕ್‌ಗಳನ್ನು ಸ್ಥಾಪಿಸಲಾಗಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಸುಮಾರು 33,000 ಫಲಾನುಭವಿಗಳಿಗೆ 65.63 ಕೋಟಿ ರೂ. ಮೊತ್ತವನ್ನುವೈದ್ಯಕೀಯ ವೆಚ್ಚವನ್ನು ಬಳಸಲಾಗಿದೆ. ಲೇಡಿಗೋಷನ್ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯ ವಿಭಾಗದಲ್ಲಿ 60 ಬೆಡ್ ಸಾಮಾರ್ಥ್ಯ ಇರುವ ಸುಮಾರು 12 ಕೋಟಿ ರೂ.ವೆಚ್ಚದಲ್ಲಿ ಕಾಮಗಾರಿ ನಿರ್ಮಾಣಗೊಂಡಿದೆ. ಜಲಜೀವನ್ ಮಿಷನ್ ಯೋಜನೆ ಯಡಿ ರೂ. 576 ಕೋಟಿ ಮೊತ್ತದಲ್ಲಿ ಒಂದು ಲಕ್ಷಕ್ಕೂ ಅಧಿಕ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ.

ಸಂಸದರಾದ ನಳಿನ್ ಕುಮಾರ್ ಕಟೀಲು, ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಪಶ್ಚಿಮ ವಲಯ ಐಜಿಪಿ ಡಾ. ಚಂದ್ರಗುಪ್ತ, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರದ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಮೊದಲಾದವರು ಉಪಸ್ಥಿತರಿದ್ದರು.

ಪೊಲೀಸ್ ಬ್ಯಾಂಡ್, ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯ ಕ್ರಮ, ಪ್ರತಿಭಾ ಪುರಸ್ಕಾರ, ಕವಾಯತು, ವಿಂಟೇಜ್ ಕಾರುಗಳ ಪ್ರದರ್ಶನ ಏರ್ಪಡಿಸಲಾಗಿತ್ತು.

share
Next Story
X