ಸುಳ್ಯ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ಸುಳ್ಯ: ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಶರತ್ ಎಂಬವರ ಪತ್ನಿ ಮಲ್ಲಿಕಾ(26) ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಮಲ್ಲಿಕಾ ಅವರು ಕೆ.ವಿ.ಜಿ. ಆಯುರ್ವೇದಿಕ್ ನಲ್ಲಿ ಉದ್ಯೋಗಿಯಾಗಿದ್ದರು. ನಿನ್ನೆ ರಜೆ ಹಿನ್ನಲೆ ಮನೆಯಲ್ಲಿದ್ದರು. ಸಂಜೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ.
Next Story