ಬೈಕಂಪಾಡಿ: ಮೇಲ್ಛಾವಣಿಯಿಂದ ಬಿದ್ದು ಯುವಕ ಮೃತ್ಯು
ಮಂಗಳೂರು: ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವರ್ಕ್ಶಾಪ್ವೊಂದರ ಮೇಲ್ಛಾವಣಿಯಿಂದ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಗುರುವಾರ ನಡೆದಿದೆ.
ನಗರ ಹೊರವಲಯದ ಎಕ್ಕೂರುಗುಡ್ಡೆ ನಿವಾಸಿ ವರುಣ್(25)ಮೃತಪಟ್ಟ ಯುವಕ. ಗುರುವಾರ ಸಂಜೆ 5ಕ್ಕೆ ವರ್ಕ್ಶಾಪ್ನ ಮೇಲ್ಛಾವಣಿಯ ಶೀಟ್ ಮೇಲೆ ಸೋಲಾರ್ ಪ್ಯಾನಲ್ಗೆ ವಯರಿಂಗ್ ಮತ್ತು ಪ್ಲಂಬಿಂಗ್ ಕೆಲಸ ಮಾಡುತ್ತಿದ್ದಾಗ ಶೀಟ್ ತುಂಡಾದ ಪರಿಣಾಮ ವರುಣ್ ಬಿದ್ದಿದ್ದು, ಇದರಿಂದ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ವರುಣ್ನನ್ನು ನಗರದ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಗುತ್ತಿಗೆದಾರ ಸೂಕ್ತ ಸುರಕ್ಷತಾ ಕ್ರಮ ವಹಿಸಿಲ್ಲ ಎಂದು ಆರೋಪಿಸಿ ಗುತ್ತಿಗೆದಾರನ ವಿರುದ್ಧ ಪಣಂಬೂರು ಠಾಣೆಯಲ್ಲಿ ದೂರು ದಾಖಲಾಗಿದೆ.
Next Story