Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿವಿ: ಕಸಾಪದಿಂದ ವಿಶೇಷೋಪನ್ಯಾಸ

ಮಂಗಳೂರು ವಿವಿ: ಕಸಾಪದಿಂದ ವಿಶೇಷೋಪನ್ಯಾಸ

ಕರಾವಳಿಯ ಅಡ್ಡಹೆಸರುಗಳ ಬಗೆಗೆ ಅಧ್ಯಯನ ನಡೆಯಲಿ: ಪ್ರೊ. ವಿ.ಎಲ್ ಪಾಟೀಲ್

31 Jan 2023 4:50 PM IST
share
ಮಂಗಳೂರು ವಿವಿ: ಕಸಾಪದಿಂದ ವಿಶೇಷೋಪನ್ಯಾಸ
ಕರಾವಳಿಯ ಅಡ್ಡಹೆಸರುಗಳ ಬಗೆಗೆ ಅಧ್ಯಯನ ನಡೆಯಲಿ: ಪ್ರೊ. ವಿ.ಎಲ್ ಪಾಟೀಲ್

ಕೊಣಾಜೆ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕದ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದಲ್ಲಿ ಕುಲನಾಮಗಳ ಅಧ್ಯಯನ ಸ್ವರೂಪ ಮತ್ತು ಸಾಧ್ಯತೆ ಎಂಬ ವಿಷಯದ ಕುರಿತು ಉಪನ್ಯಾಸ   ಕಾರ್ಯಕ್ರಮ ಸೋಮವಾರ ನಡೆಯಿತು.

ಧಾರವಾಡ ಕರ್ನಾಟಕ ವಿಶ್ವವಿದ್ಯಾನಿಲಯದ ಜಾನಪದ ವಿಭಾಗದ ಪ್ರಾಧ್ಯಾಪಕರಾಗಿರುವ ಪ್ರೊ. ವಿ. ಎಲ್. ಪಾಟೀಲ್ ಅವರು ಮಾತನಾಡಿ, ವ್ಯಕ್ತಿಗಳ ಹೆಸರಿನ ಜೊತೆಗಿರುವ ಅಡ್ಡಹೆಸರುಗಳ ಹಿಂದೆ ಸಾಂಸ್ಕೃತಿಕ ಮಹತ್ವದ ಕಥನಗಳಿವೆ. ಇವುಗಳ ಅಧ್ಯಯನ ಸ್ವಾರಸ್ಯಪೂರ್ಣ ವಿಚಾರಗಳನ್ನು ಮುನ್ನೆಲೆಗೆ ತರುತ್ತದೆ. ಕರಾವಳಿಯ ಅಡ್ಡಹೆಸರುಗಳ ಬಗೆಗೆ ಅಧ್ಯಯನ ನಡೆಯಲಿ ಎಂದು ಅಭಿಪ್ರಾಯಪಟ್ಟರು. 

ಹೆಸರಿನ ಜೊತೆಗೆ ಜಾತಿಯನ್ನು ಸೇರಿಸಿಕೊಳ್ಳುವ, ಊರನ್ನು ಸೇರಿಸಿಕೊಳ್ಳುವ, ತಂದೆಯ ಹೆಸರನ್ನು ಸೇರಿಸಿಕೊಳ್ಳುವ ಕ್ರಮವಿದ್ದು ಅದರಲ್ಲಿ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದಲ್ಲಿ ವ್ಯತ್ಯಾಸಗಳಿವೆ. ವೃತ್ತಿ ಕೇಂದ್ರಿತವಾಗಿ, ದೇಹದ ಸ್ವರೂಪವನ್ನು ಗುರುತಿಸಿ, ಊರಿನ ಸಂಸ್ಕೃತಿಯ ಕಾರಣಕ್ಕಾಗಿ ಅಡ್ಡಹೆಸರುಗಳು ಸೃಷ್ಟಿಯಾಗುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಮಂಗಳೂರು ವಿವಿ ಕನ್ನಡ ವಿಭಾಗದ ಅಧ್ಯಕ್ಷರಾಗಿರುವ ಪ್ರೊ. ಸೋಮಣ್ಣ ಹೊಂಗಳ್ಳಿ ಅವರು ಮಾತನಾಡಿ ಸಾಮಾಜಿಕವಾಗಿ ಜಾತಿಯನ್ನು ಗುರುತಿಸಿಕೊಳ್ಳುವ ಕ್ರಮ ಇತ್ತೀಚೆಗೆ ಹೆಚ್ಚಾಗಿದೆ. ಜಾತಿಯನ್ನು ಬಿಟ್ಟು ಊರ ಹೆಸರನ್ನು ತಮ್ಮ ಹೆಸರಿನ ಜೊತೆಗೆ ಜೋಡಿಸಿಕೊಳ್ಳುವುದರಲ್ಲಿ ಸಾಮಾಜಿಕ ಮೇಲರಿಮೆ, ಕೀಳರಿಮೆಗಳು ಕಾರಣವಾಗಿವೆ ಎಂದರು.

ಕಸಾಪ ಉಳ್ಳಾಲ ಘಟಕದ ಅಧ್ಯಕ್ಷರಾಗಿರುವ ಡಾ. ಧನಂಜಯ ಕುಂಬ್ಳೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.. ಘಟಕದ ಕಾರ್ಯದರ್ಶಿಗಳಾಗಿರುವ ರವೀಂದ್ರ ರೈ ಕಲ್ಲಿಮಾರು ವಂದಿಸಿದರು. ಮಾಡಿದರು. ಕಾರ್ಯದರ್ಶಿ ಎಡ್ವರ್ಡ್ ಲೋಬೋ, ಕೋಶಾಧಿಕಾರಿಗಳಾಗಿರುವ ಲಯನ್ ಚಂದ್ರಹಾಸ ಶೆಟ್ಟಿ ದೇರಳಕಟ್ಟೆ, ಪದಾಧಿಕಾರಿಗಳಾಗಿರುವ ಗುಣಾಜೆ ರಾಮಚಂದ್ರ ಭಟ್, ತೋನ್ಸೆ ಪುಷ್ಕಳ ಕುಮಾರ್, ಡಾ.ನವೀನ್ ಗಟ್ಟಿ, ಡಾ.ಅರುಣ್ ಉಳ್ಳಾಲ ಮಂಜುಳ ರಾವ್ ಇರಾ, ಕುಸುಮ ಅಂಬ್ಲಮೊಗರು, ಅಮಿತ ಆಳ್ವ, ಅಶ್ವಿನಿ ಕುರ್ನಾಡು,ರವಿ ಕೋಡಿ, ರಮೇಶ್ ತೊಕ್ಕೊಟ್ಟು, ಅಚ್ಯುತ ಗಟ್ಟಿ,ರಾಧಾಕೃಷ್ಣ ರಾವ್, ತ್ಯಾಗಂ ಹರೇಕಳ  ಕನ್ನಡ ವಿಭಾಗದ ಡಾ.ನಾಗಪ್ಪ ಗೌಡ ಉಪಸ್ಥಿತರಿದ್ದರು.

ಕನ್ನಡ  ವಿಭಾಗದ ವಿದ್ಯಾರ್ಥಿಗಳು , ಸಂಶೋಧಕರು, ವಿವಿಧ ಪೀಠಗಳ ಸಂಶೋಧಕರು ಭಾಗವಹಿಸಿದ್ದರು. 
ಇದೇ ಸಂದರ್ಭದಲ್ಲಿ ಅಗಲಿದ ಕನ್ನಡದ ಕವಿ ಭಾಷಾವಿಜ್ಞಾನಿ ಡಾ.ಕೆ.ವಿ ತಿರುಮಲೇಶ್ ಇವರಿಗೆ ಕಸಾಪ ಉಳ್ಳಾಲ ತಾಲೂಕು ಘಟಕದ ವತಿಯಿಂದ ಶ್ರದ್ಧಾಂಜಲಿ ಸಮರ್ಪಿಸಲಾಯಿತು.

share
Next Story
X