ಬಿ.ಸಿ.ರೋಡ್: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬಂಟ್ವಾಳ: ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಬಿ.ಸಿ.ರೋಡಿನ ಮುಖ್ಯ ವೃತ್ತದ ಬಳಿ ಶುಕ್ರವಾರ ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಮೃತರಿಗೆ ಸುಮಾರು 55 ವರ್ಷ ವಯಸ್ಸಾಗಿರಬಹುದೆಂದು ಅಂದಾಜಿಸಲಾಗಿದೆ. ಇಂದು ಬೆಳಿಗ್ಗೆ ಸಾರ್ವಜನಿಕರು ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
Next Story