ಪ್ರಮೋದ್ ಮುತಾಲಿಕ್ ಆರೋಪಕ್ಕೆ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ...
ಮಂಗಳೂರು: ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ ಎಂದು ನಮಗೆ ಮೊದಲೇ ಅನುಮಾನವಿತ್ತು. ಅದೀಗ ನಿಜವಾಗಿದೆ ! ಸ್ವಂತ ಬುದ್ಧಿಯಿಂದ ನೀವು ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ ಎಂದು ಸಚಿವ ವಿ ಸುನಿಲ್ ಕುಮಾರ್ ಅವರು ಪ್ರಮೋದ್ ಮುತಾಲಿಕ್ ಗೆ ತಿರುಗೇಟು ನೀಡಿದ್ದಾರೆ.
ಪ್ರಮೋದ್ ಮುತಾಲಿಕ್ ಸುದ್ದಿಗೋಷ್ಠಿಯಲ್ಲಿ ಸೋಮವಾರ ನೀಡಿರುವ ಹೇಳಿಕೆ ಸಂಬಂಧಿಸಿ ಟ್ವೀಟ್ ಮಾಡಿರುವ ಸುನೀಲ್ ಕುಮಾರ್, "ನೀವು ಕಾರ್ಕಳದಿಂದ ಸ್ಪರ್ಧೆಗೆ ಇಳಿಯುವುದನ್ನು ನಾನು ಮೊದಲೇ ಸ್ವಾಗತಿಸಿದ್ದೇನೆ. ಈಗ ನಿಮಗೆ ತನು ಮನ ಧನ ಸಹಾಯ ಮಾಡುವವರೂ ಕಾರ್ಕಳಕ್ಕೆ ಬಂದು ಪ್ರಚಾರ ಮಾಡಲಿ ಎಂದು ನಾನು ಆಶಿಸುತ್ತೇನೆ. ನಿಮ್ಮ ಸ್ಪರ್ಧೆಯ ಉದ್ದೇಶ ಏನೆಂಬುದನ್ನು ಕೆಲ ದಿನಗಳ ಹಿಂದೆ ಓಟು, ನೋಟು ಹೇಳಿಕೆಯ ಮೂಲಕ ತಿಳಿಸಿದ್ದಿರಿ. ಈಗ ತನುಮನಧನ ಸಹಾಯವಿದೆ ಎಂದು ಹೇಳುತ್ತಿದ್ದೀರಿ. ಒಟ್ಟಾರೆಯಾಗಿ ನಿಮ್ಮಈ ಸ್ಪರ್ಧೆಯ ಉದ್ದೇಶ ಕಾರ್ಕಳದ ಹಿತವಲ್ಲ, ಹಿಂದುತ್ವದ ಹಿತವಲ್ಲ, ಜನತೆಯ ಹಿತವೂ ಅಲ್ಲ. ಅದು ತನು- ಮನ-ಧನ - ನೋಟಿಗಾಗಿ ಎಂಬುದು ನಿಮ್ಮ ಹೇಳಿಕೆಯಲ್ಲೇ ಸ್ಪಷ್ಟವಾಗಿದೆ" ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ: ನನ್ನ ಮೇಲೆ 109 ಕೇಸ್ ದಾಖಲಾಗಿದ್ದು, ಇದರಲ್ಲಿ ಬಿಜೆಪಿ ಕೊಡುಗೆ ದೊಡ್ಡದು: ಪ್ರಮೋದ್ ಮುತಾಲಿಕ್
ಪ್ರಿಯ ಮುತಾಲಿಕ್ ಜೀ, ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ ಎಂದು ನಮಗೆ ಮೊದಲೇ ಅನುಮಾನವಿತ್ತು. ಅದೀಗ ನಿಜವಾಗಿದೆ !
— Sunil Kumar Karkala (@karkalasunil) February 13, 2023
ಸ್ವಂತ ಬುದ್ಧಿಯಿಂದ ನೀವು ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ. (1/3)
ಈಗ ತನುಮನಧನ ಸಹಾಯವಿದೆ ಎಂದು ಹೇಳುತ್ತಿದ್ದೀರಿ. ಒಟ್ಟಾರೆಯಾಗಿ ನಿಮ್ಮಈ ಸ್ಪರ್ಧೆಯ ಉದ್ದೇಶ ಕಾರ್ಕಳದ ಹಿತವಲ್ಲ, ಹಿಂದುತ್ವದ ಹಿತವಲ್ಲ, ಜನತೆಯ ಹಿತವೂ ಅಲ್ಲ. ಅದು " ತನು- ಮನ-ಧನ" - ನೋಟಿಗಾಗಿ ಎಂಬುದು ನಿಮ್ಮ ಹೇಳಿಕೆಯಲ್ಲೇ ಸ್ಪಷ್ಟವಾಗಿದೆ. (3/3)
— Sunil Kumar Karkala (@karkalasunil) February 13, 2023