ಉಜಿರೆ : ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ; ದೂರು ದಾಖಲು
ಬೆಳ್ತಂಗಡಿ: ಉಜಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆಯಾದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾಪತ್ತೆಯಾಗಿರುವ ವಿದ್ಯಾರ್ಥಿನಿ ದೀಕ್ಷಿತಾ (18) ಎಂದು ಗುರುತಿಸಲಾಗಿದೆ. ಈಕೆ ಹಾಸ್ಟೆಲ್ ನಲ್ಲಿ ಕಲಿಯುತ್ತಿದ್ದಳು. ಹಾಸ್ಟೆಲ್ ನಿಂದ ಮನೆಗೆಂದು ಹೋದವಳು ಮನೆಗೆ ಹೋಗದೆ ನಾಪತ್ತೆಯಾಗಿದ್ದಾಳೆ ಎಂದು ದೂರಲಾಗಿದೆ.
ಮಗಳು ನಾಪತ್ತೆಯಾಗಿರುವ ಬಗ್ಗೆ ಆಕೆಯ ತಂದೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಕೆಯ ಬಗ್ಗೆ ಯಾವುದಾದರೂ ಮಾಹಿತಿ ಸಿಕ್ಕಿದಲ್ಲಿ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ.
Next Story