Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರಿ...

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರಿ ರಂಗಕ್ಕೆ ಶಕ್ತಿ ತುಂಬಿದ 'ಪವರ್ ಸ್ಟಾರ್': ಒಡಿಯೂರುಶ್ರೀ

ಸಹಕಾರ ರತ್ನ'ಡಾ.ರಾಜೇಂದ್ರ ಕುಮಾರ್ ರ 74ನೇ ಹುಟ್ಟುಹಬ್ಬ-ಅಭಿವಂದನಾ ಕಾರ್ಯಕ್ರಮ

24 Feb 2023 5:18 PM IST
share
ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರಿ ರಂಗಕ್ಕೆ ಶಕ್ತಿ ತುಂಬಿದ ಪವರ್ ಸ್ಟಾರ್: ಒಡಿಯೂರುಶ್ರೀ
ಸಹಕಾರ ರತ್ನ'ಡಾ.ರಾಜೇಂದ್ರ ಕುಮಾರ್ ರ 74ನೇ ಹುಟ್ಟುಹಬ್ಬ-ಅಭಿವಂದನಾ ಕಾರ್ಯಕ್ರಮ

ಮಂಗಳೂರು, ಫೆ.24: ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರಿ ರಂಗಕ್ಕೆ, ಜನಸಾಮಾನ್ಯರಿಗೆ ಶಕ್ತಿ ನೀಡಿದ 'ಪವರ್ ಸ್ಟಾರ್' ಎಂದು ಒಡಿಯೂರು ಮಠದ ಶ್ರೀ ಗುರುದೇವಾನಂದ ಸ್ವಾಮೀಜಿ ಶ್ಲಾಘಿಸಿದರು.

ಅವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, 'ಸಹಕಾರ ರತ್ನ' ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 74ನೇ ಹುಟ್ಟುಹಬ್ಬ ದಿನದ ಅಂಗವಾಗಿ ನಗರದ ಎಸ್‌ಸಿಡಿಸಿಸಿ ಬ್ಯಾಂಕ್  ಸಭಾಂಗಣದಲ್ಲಿಂದು ಹಮ್ಮಿಕೊಂಡಿದ್ದ ಅಭಿವಂದನಾ ಕಾರ್ಯಕ್ರಮ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡುತ್ತಿದ್ದರು.

ದೇಶದ ಮೌಲ್ಯ ಎಂದರೆ ತ್ಯಾಗ ಮತ್ತು ಸಮರ್ಪಣೆ ಈ ನಿಟ್ಟಿನಲ್ಲಿ ರಾಜೇಂದ್ರ  ಕುಮಾರ್  ಸಹಕಾರಿ ರಂಗದಲ್ಲಿ ಕಾರ್ಯ ನಿರ್ವಹಿಸಿದವರು. ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಬೆಳೆಯಬೇಕೆಂದು ಬಯಸಿ ಅವರಿಗೆ ಸೌಲಭ್ಯ ತಲುಪಿಸಲು ಯತ್ನಿಸಿದವರು. ಸಹಕಾರಿ ರಂಗದಲ್ಲಿ ಪರಸ್ಪರ ಸಹಾರದೊಂದಿಗೆ ಬೆಳೆಯಬೇಕು ಎನ್ನುವ ಆದರ್ಶ ದೊಂದಿಗೆ ರಾಜೇಂದ್ರ ಕುಮಾರ್  ಸಾಧನೆ ಮಾಡಿದ್ದಾರೆ. ಅವರಿಂದ ಸಮಾಜಕ್ಕೆ ಇನ್ನಷ್ಟು ಕೊಡುಗೆ ಸಿಗುವಂತಾಗಲಿ ಎಂದು ಒಡಿಯೂರುಶ್ರೀ ಹಾರೈಸಿದರು.

ಡಾ.ರಾಜೇಂದ್ರ ಕುಮಾರ್‌ ರನ್ನು ಅಭಿನಂದಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ,  ರಾಜೇಂದ್ರ ಕುಮಾರ್ ಓರ್ವ ವ್ಯಕ್ತಿ ಯಲ್ಲ, ಅವರೊಂದು ಶಕ್ತಿ. ಸಮಾಜದ ಎಲ್ಲಾ ಜನರ ಶ್ರೇಯೋಭಿ ವೃದ್ಧಿಗಾಗಿ ಶ್ರಮಿಸಿ ಸಹಕಾರಿ ರಂಗದಲ್ಲಿ ಮಹತ್ವದ ಸಾಧನೆಯನ್ನು ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಅಭಿವಂದನಾ ಭಾಷಣ ಮಾಡಿದ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ನಿಕಟಪೂರ್ವ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ, ಸಮಾಜಮುಖಿ ಕೆಲಸಗಳ ಮೂಲಕ ಸಹಕಾರಿ ಭೀಷ್ಮ ಮೊಳಹಳ್ಳಿ ಶಿವರಾಯರ ಸಹಕಾರಿ ಚಳವಳಿಯನ್ನು ಜನ ಸಾಮಾನ್ಯರ ಬಳಿ ಕೊಂಡೊಯ್ದು ಸಹಕಾರಿ ಸಂಸ್ಥೆಗಳಿಗೆ ಡಾ.ರಾಜೇಂದ್ರ ಕುಮಾರ್ ಶಕ್ತಿ ತುಂಬಿದ್ದಾರೆ. ಸಹಕಾರಿ ಸಂಸ್ಥೆಯೊಂದು ಬಹುರಾಷ್ಟ್ರೀಯ ಸಂಸ್ಥೆಗೂ ಕಡಿಮೆ ಇಲ್ಲದ ರೀತಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ ಮಾಡಬಹುದು ಎನ್ನುವುದನ್ನು ಅವರು ತೋರಿಸಿಕೊಟ್ಟಿದ್ದಾರೆ ಎಂದು ಶುಭ ಹಾರೈಸಿದರು.

ಇದೇವೇಳೆ 74 ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆಗೆ ಚಾಲನೆ ನೀಡಿದ ದ.ಕ. ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್, ಉತ್ತಮ ನಾಯಕತ್ವದ ಮೂಲಕ ಸಹಕಾರಿ ರಂಗದಲ್ಲಿ ಡಾ.ಎಂಎನ್ ರಾಜೇಂದ್ರ ಕುಮಾರ್ ಅವರ ಸಾಧನೆ ರಾಜ್ಯದ ಇನ್ನಷ್ಟು ಜನರಿಗೆ ದೊರೆಯುವಂತಾಗಲಿ ಎಂದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ  ಐಕಳ ಹರೀಶ್ ಶೆಟ್ಟಿ ಮಾತನಾಡಿ, ಡಾ.ರಾಜೇಂದ್ರ ಕುಮಾರ್ ಸಮಾಜದಲ್ಲಿ ಅಶಕ್ತರ ಪಾಲಿಗೆ ದೇವರಂತೆ ಸ್ಥೈರ್ಯ ನೀಡಿ ಸಹಕಾರಿ ರಂಗದಲ್ಲಿ ಸಾಧನೆ ಮಾಡಿದ್ದಾರೆ. ಅವರಿಂದ ಸಮಾಜಕ್ಕೆ ಇನ್ನಷ್ಟು ಸೇವೆ ಸಿಗುವಂತಾಗಲಿ ಎಂದರು.

ಅದಾನಿ ಸಮೂಹ ಸಂಸ್ಥೆಗಳ ದಕ್ಷಿಣ ಭಾರತದ ಅಧ್ಯಕ್ಷ ಕಿಶೋರ್ ಆಳ್ವ ಮಾತನಾಡಿ, ರಾಜೇಂದ್ರ ಕುಮಾರ್ ಸಹಕಾರಿ ರಂಗ ಮಾತ್ರವಲ್ಲ ಜಿಲ್ಲೆಯ ಬ್ಯಾಂಕಿಂಗ್ ಕ್ಷೇತ್ರದಲ್ಲಿ  ಮಹತ್ವದ ಸಾಧನೆ ಮಾಡಿದ ಮುಲ್ಕಿ ಸುಂದರಾಮ ಶೆಟ್ಟಿ ಯವರಂತಹ ಸಾಧಕರಾಗಿದ್ದಾರೆ ಅವರ ಸೇವೆ ಜಿಲ್ಲೆಯ ಇನ್ನಷ್ಟು ದೊರೆಯುವಂತಾಗಲಿ ಎಂದು ಶುಭ ಹಾರೈಸಿದರು.

ಸನ್ಮಾನ ಸ್ವೀಕರಿಸಿದ ಡಾ.ಎಂ.ಎನ್.ರಾಜೇಂದ್ರ  ಕುಮಾರ್ ಮಾತನಾಡಿ, ಜನರ ಪ್ರೀತಿ ವಿಶ್ವಾಸ ತನ್ನನ್ನು  ಸಹಕಾರಿ ರಂಗದಲ್ಲಿ ಸಾಧನೆ ಮಾಡಲು ಕಾರಣವಾಗಿದೆ. ಅದಕ್ಕಾಗಿ ಆ ಜನರಿಗೆ ಸಹಾಯ ಮಾಡುವುದು ನನ್ನ ಕರ್ತವ್ಯ ಎನ್ನುವ ನೆಲೆಯಲ್ಲಿ ನಾನು ಕಾರ್ಯ ನಿರ್ವಹಿಸಿದ್ದೇನೆ. ತಾನು ಒಂದು ಜಮೀನ್ದಾರಿ ಕುಟುಂಬದಿಂದ ಬಂದವ. ಉದ್ಯೋಗದ ನಿಮಿತ್ತ ಮುಂಬೈಗೆ ತೆರಳಿದವ ಅಲ್ಲಿಂದ ಮರಳಿದ ಬಳಿಕ ಸಹಕಾರಿ ರಂಗದಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆಯಿತು. ಹುಟ್ಟು ಸಾವು ನಡುವೆ ನಾಲ್ಕು ಜನರಿಗೆ ಸಹಾಯ ಮಾಡುವ ಉದ್ದೇಶ ತಾನು ಹೊಂದಿದ್ದೆ. ಸಹಕಾರಿ  ರಂಗದಲ್ಲಿ ಅದಕ್ಕೆ ಸಾಕಷ್ಟು ಅವಕಾಶ ದೊರೆಯಿತು ಎಂದರು.

 ಜನರಿಗೆ ಸಹಾಯ ಮಾಡಲು ಅಧಿಕಾರ, ಹುದ್ದೆಗಳ ಅಗತ್ಯವಿಲ್ಲ. ನಮ್ಮ ಸಂಸ್ಥೆಗಳ ಮೂಲಕ ಕರ್ನಾಟಕದ ಬಹುತೇಕ ಜಿಲ್ಲೆಯ ಜನರಿಗೆ ಸೇವೆ ನೀಡಲು ಸಾಧ್ಯವಾಗಿದೆ. ಜನರ ಕಷ್ಟಗಳನ್ನು ನಾನು ಹತ್ತಿರದಿಂದ ನೋಡಿದ್ದೇನೆ. ನಾನು ಜಾತಿಯ ಆಧಾರದಲ್ಲಿ  ಕಾರ್ಯ ನಿರ್ವಹಿಸದೆ, ಎಲ್ಲ ಜಾತಿ, ಧರ್ಮದವರ ಬಗ್ಗೆ ಗೌರವ  ಭಾವನೆ ಹೊಂದಿದ್ದೇನೆ. ಯಾವುದೇ ಜಾತಿ, ಧರ್ಮ, ನೋಡದೆ ಸಮಾಜದ ಎಲ್ಲಾ ಮಹಿಳೆಯರು, ರೈತರಿಗೆ ಸಹಕಾರಿ ರಂಗದ ಮೂಲಕ ಪಕ್ಷಾತೀತವಾಗಿ ಅವರಾಗಿಯೇ ಬೆಳೆಯಲು ಸಹಾಯ ಮಾಡಿದ  ತೃಪ್ತಿ ತನಗಿದೆ ಎಂದರು.

ಸಹಕಾರಿ ತತ್ವದಂತೆ ಪರಸ್ಪರ ಸಹಕಾರ. ನಾನು ಬದುಕುವುದು ಇತರರನ್ನು ಬದುಕಲು ಬಿಡುವುದು. ಯಾವುದೇ ಒಂದು ಜಾತಿ,ಧರ್ಮ ಕ್ಕಿಂತ ಮುಖ್ಯ ವಾಗಿ ಮಾನ ವೀಯತೆಯೇ ಶ್ರೇಷ್ಠ ಧರ್ಮ ಎಂದು ತಾನು ನಂಬಿ ಕಾರ್ಯನಿರ್ವಹಿಸಿದ್ದೇನೆ ಅದು ನನಗೆ ಶ್ರೀರಕ್ಷೆಯಾಗಿದೆ ಎಂದವರು ತಿಳಿಸಿದ್ದಾರೆ.

ಸಮಾರಂಭದಲ್ಲಿ ಮಾಜಿ ಸಚಿವ ಕೆ.ಅಭಯ ಚಂದ್ರ ಜೈನ್ , ರಾಜ್ಯ ಸಹಕಾರಿ ಮಹಾ ಮಂಡಳದ ಆಡಳಿತ ನಿರ್ದೇಶಕ ಬಾಲಶೇಖರ ಕೆ., ದ.ಕ ಜಿಲ್ಲಾ ಕೆಎಂಎಫ್ ಅಧ್ಯಕ್ಷ  ಸುಚರಿತ ಶೆಟ್ಟಿ,  ಅಭಿನಂದನಾ ಸಮಿತಿಯ ಕಾರ್ಯಾಧ್ಯಕ್ಷ ಶಶಿಕುಮಾರ್ ರೈ ಬಾಲ್ಯೋಟ್ಟು, ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಎಸ್. ಕೋಟ್ಯಾನ್, ಬ್ಯಾಂಕ್ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ಬ್ಯಾಂಕ್ ನಿರ್ದೇಶಕ ರುಗಳಾದ ಬಿ.ನಿರಂಜನ್, ಟಿ.ಜಿ. ರಾಜಾರಾಮ ಭಟ್, ಎಂ.ವಾದಿರಾಜ ಶೆಟ್ಟಿ, ರಾಜು ಪೂಜಾರಿ, ಎಂ.ಮಹೇಶ್ ಹೆಗ್ಡೆ, ಎಸ್.ಬಿ. ಜಯರಾಮ್ ರೈ,  ಮೋನಪ್ಪ ಶೆಟ್ಟಿ, ಹರಿಶ್ಚಂದ್ರ, ಕೆ.ಜೈರಾಜ್ ಬಿ. ರೈ, ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪ ನಿಬಂಧಕ ರಮೇಶ್ ಎಚ್.ಎನ್., ಉಡುಪಿ ಜಿಲ್ಲೆಯ ಉಪನಿಬಂಧಕ ಲಕ್ಷ್ಮೀ ನಾರಾಯಣ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಮಹಾಪ್ರಬಂಧಕ ಅಶೋಕ್ ಕುಮಾರ್, ಉಡುಪಿ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮೊದಲಾದವರು ಉಪಸ್ಥಿತರಿದ್ದರು.

ಅಭಿವಂದನಾ ಸಮಿತಿಯ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿದರು. ನಿತೀಶ್ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.

share
Next Story
X