ಸುಳ್ಯ: ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಸುಳ್ಯ: ಕಾರು ಮತ್ತು ಬೈಕ್ ಕಳ್ಳತನದ ಆರೋಪದಲ್ಲಿ 4 ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಸುಳ್ಯ ಜಟ್ಟಿಪಳ್ಳದ ಅಶ್ರಫ್ ರಿಪ್ವಾನ್ ನನ್ನು ಕೇರಳದ ಕಣ್ಣೂರಿನಿಂದ ಪೊಲೀಸರು ಬಂಧಿಸಿದ್ದಾರೆ.
2019ರಲ್ಲಿ ಕಾರು ಮತ್ತು ಬೈಕ್ ಕಳ್ಳತನದಲ್ಲಿ ಭಾಗಿಯಾಗಿದ್ದ ಈತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಜಾಮೀನು ಪಡೆದು ಹೊರಬಂದ ಆರೋಪಿ ಮತ್ತೆ ನ್ಯಾಯಾಲಯಕ್ಕೆ ಹಾಜರಾಗದೆ ಕೇರಳಕ್ಕೆ ಹೋಗಿ ತಲೆಮರೆಸಿಕೊಂಡಿದ್ದನು. ನ್ಯಾಯಾಲಯವು ಆರೋಪಿಗೆ ಹಲವಾರು ಬಾರಿ ವಾರೆಂಟ್ ಹೊರಡಿಸಿತ್ತು. ಇದೀಗ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸುಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.
Next Story