Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ...

ಬೆಳ್ತಂಗಡಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

12 March 2023 7:51 PM IST
share
ಬೆಳ್ತಂಗಡಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

ಬೆಳ್ತಂಗಡಿ: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಕುಟುಂಬಗಳನ್ನು ಪೋಷಿಸಿಕೊಂಡಿವೆಯೇ ಹೊರತು ಕರ್ನಾಟಕದ ವಿಕಾಸ ಮಾಡಿಯೇ ಇಲ್ಲ. ಕಳೆದ ಎಂಟು ವರ್ಷಗಳಲ್ಲಿ ಕೇಂದ್ರ - ರಾಜ್ಯದ ಅಭಿವೃದ್ಧಿ ಎಲ್ಲರ ಕಣ್ಣ ಮುಂದಿದೆ. ಅದನ್ನು ಗ್ರಾಮ ಗ್ರಾಮಕ್ಕೆ ತಲುಪಿಸುವ ಕಾರ್ಯ ಆಗಬೇಕು ಎಂದು ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ ಹೇಳಿದರು.

ಅವರು ರವಿವಾರ ಬೆಳ್ತಂಗಡಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಧಾನಿ‌ ಮೋದಿ, ಯಡಿಯೂರಪ್ಪ, ಬೊಮ್ಮಾಯಿಯವರ ಸಾಧನೆಗಳಿಂದ ಮುಂದಿನ ಬಾರಿಯೂ ರಾಜ್ಯದಲ್ಲಿ ಡಬಲ್ ಇಂಜಿನ್ ಸರಕಾರ ಬರಲಿದೆ. ಹಿಂದಿನ ಯು.ಪಿ.ಎ. ಹಾಗೂ ಈಗಿನ ಎನ್.ಡಿ.ಎ. ಸರಕಾರಗಳ ತುಲನೆ ಮಾಡಿದಾಗ ಈಗಿನ  ಸರಕಾರ ಅಭಿವೃದ್ಧಿ ಕಾರ್ಯಗಳು ಹೇಗಿವೆ ಎಂಬುದು ಅರಿವಾಗುತ್ತದೆ ಎಂದರು.

ಮುಂದಿನ ಬಾರಿ ರಾಜ್ಯದಲ್ಲಿ 150 ಸೀಟು ಪಕ್ಷಕ್ಕೆ ಸಿಗಲಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ  ಉನ್ನತಿಯಾಗ ಲಿದೆ. ಕೇಂದ್ರದ ಹಾಗೂ ರಾಜ್ಯದ ರೈತರ, ಮಹಿಳೆಯರ, ಯುವಕರಿಗಾಗಿ ಮಾಡಿರುವ ಯೋಜನೆಗಳನ್ನು ಗ್ರಾಮಗಳಿಗೆ ಮುಟ್ಟಿಸುವ ಕೆಲಸವನ್ನು ಒಗ್ಗಟ್ಟಾಗಿ, ಜೊತೆಯಾಗಿ‌ ಮಾಡೋಣ, ನವಭಾರತ, ನವಕರ್ನಾಟಕ್ಕಾಗಿ ಸಂಕಲ್ಪಿಸೋಣ  ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.

ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ಅವರು, ಬೆಳ್ತಂಗಡಿಯಲ್ಲಿ ಪ್ರತಿಸ್ಪರ್ಧಿ ಚುನಾವಣೆಗೆ ನಿಲ್ಲುವ ಅವಶ್ಯಕತೆಯೇ ಇಲ್ಲ. ನಿಂತರೆ ಠೇವಣಿ ಕಳೆದುಕೊಳ್ಳುವುದು ಖಚಿತ‌. ರಾಜ್ಯದಲ್ಲಿ ಮತ್ತೊಮೆ ಬಿಜೆಪಿ ಸರಕಾರ ಬರುವುದು ಖಚಿತವಾಗಿದೆ ಎಂದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಚಿವ ಸುನಿಲ್‌ ಕುಮಾರ್ ಮಾತನಾಡಿ, ಶಾಸಕರ ಅಭಿವೃದ್ಧಿ ಕಾರ್ಯಗಳು, ಚಟುವಟಿಕೆಗಳನ್ನು ಗ್ರಾಮಗಳಿಗೆ ತಲುಪಿಸುವ ಕೆಲಸ ಕಾರ್ಯಕರ್ತರಿಂದ ಆಗಬೇಕು ಎಂದರು 

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ವಿಜಯ ಸಂಕಲ್ಪ ಯಾತ್ರೆ ನಡೆಯಿತು. 

ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ದ.ಕ.‌ಜಿಲ್ಲಾ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ವಿಜಯ ಸಂಕಲ್ಪ ಯಾತ್ರೆ ಸಹ ಸಂಚಾಲಕ ದತ್ತಾತ್ರಿ ಎಸ್., ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ್, ಪ್ರ. ಕಾರ್ಯದರ್ಶಿ ಸುಧೀರ್ ಶೆಟ್ಟಿ, ಉಪಾಧ್ಯಕ್ಷ ಕೊರಗಪ್ಪ ನಾಯ್ಕ್, ಕಾರ್ಯದರ್ಶಿ ಧನಲಕ್ಷ್ಮೀ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರ. ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್ ಮತ್ತು ಗಣೇಶ್ ಗೌಡ, ಎಸ್ ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಚೆನ್ನಕೇಶವ ಉಪಸ್ಥಿತರಿದ್ದರು.

ಇಲ್ಲಿನ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಯಾತ್ರೆಯನ್ನು ಪ್ರಾರಂಭಿಸಲಾ ಯಿತು. ಶಾಸಕ ಹರೀಶ ಪೂಂಜ ಸ್ವಾಗತಿಸಿದರು. ಬೆಳ್ತಂಗಡಿ ಮುಖ್ಯರಸ್ತೆಯಲ್ಲಿ ಯಾತ್ರೆ ಮುಂದುವರಿದು ಲಾಯಿಲದಲ್ಲಿ ಮುಕ್ತಾಯಗೊಂಡಿತು.

share
Next Story
X