ಮಣಿಪಾಲ: ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಆಂಜನೇಯ ಬಸವರಾಜಪ್ಪ ಗೋಣಗೇರಿ (22) ಎಂಬವರು ಶಾಂತಿನಗರದ ಹಾಡಿಯಲ್ಲಿ ಮಾ.13ರಂದು ಬೆಳಗ್ಗೆ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.