ದ್ವಿತೀಯ ಪಿಯುಸಿ ಪರೀಕ್ಷೆ: ದ.ಕ.ಜಿಲ್ಲೆಯಲ್ಲಿ 340 ವಿದ್ಯಾರ್ಥಿಗಳು ಗೈರು
ಮಂಗಳೂರು, ಮಾ.20: ದ.ಕ.ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ಸೋಮವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 340 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಭೌತಶಾಸ್ತ್ರ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 13,921 ರೆಗ್ಯುಲರ್ ವಿದ್ಯಾರ್ಥಿಗಳ ಪೈಕಿ 13,892 ವಿದ್ಯಾರ್ಥಿಗಳು ಹಾಜರಾಗಿದ್ದರೆ, 29 ಮಂದಿ ಗೈರಾಗಿದ್ದಾರೆ. ಭೌತಶಾಸ್ತ್ರ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 198 ಪುನರಾವರ್ತಿತ ವಿದ್ಯಾರ್ಥಿಗಳ ಪೈಕಿ 156 ಮಂದಿ ಹಾಜರಾಗಿದ್ದರೆ, 42 ಮಂದಿ ಗೈರಾಗಿದ್ದಾರೆ.
ಇತಿಹಾಸ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 11,092 ರೆಗ್ಯುಲರ್ ವಿದ್ಯಾರ್ಥಿಗಳ ಪೈಕಿ 10,863 ವಿದ್ಯಾರ್ಥಿಗಳು ಹಾಜರಾಗಿದ್ದರೆ, 229 ಮಂದಿ ಗೈರಾಗಿದ್ದಾರೆ. 246 ಪುನರಾವರ್ತಿತ ವಿದ್ಯಾರ್ಥಿಗಳ ಪೈಕಿ 206 ವಿದ್ಯಾರ್ಥಿಗಳು ಹಾಜರಾಗಿದ್ದು, 40 ಮಂದಿ ಗೈರಾಗಿದ್ದಾರೆ ಎಂದು ಡಿಡಿಪಿಯು ಪ್ರಕಟನೆ ತಿಳಿಸಿದೆ.
Next Story