Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾರ್ಕಳದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ...

ಕಾರ್ಕಳದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ವಿರುದ್ಧ ಪ್ರಧಾನಿ ಮೋದಿಗೆ ದೂರು ನೀಡಲಾಗುವುದು: ಪ್ರಮೋದ್ ಮುತಾಲಿಕ್

24 March 2023 10:19 PM IST
share
ಕಾರ್ಕಳದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ವಿರುದ್ಧ ಪ್ರಧಾನಿ ಮೋದಿಗೆ ದೂರು ನೀಡಲಾಗುವುದು: ಪ್ರಮೋದ್ ಮುತಾಲಿಕ್

ಕಾರ್ಕಳ: ಕಾರ್ಕಳದಲ್ಲಿ ನಡೆಯುತ್ತಿರುವ ಎಲ್ಲಾ ಭ್ರಷ್ಟಾಚಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ದೂರು ನೀಡಲಾಗುವುದು ಎಂದು ಶ್ರೀ ರಾಮ ಸೇನೆಯ ರಾಷ್ಟ್ರೀಯ  ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಅವರು ಕಾರ್ಕಳದಲ್ಲಿ ಸುದ್ದಿಗೋಷ್ಠಿಯಲ್ಲಿ ಭ್ರಷ್ಟಾಚಾರದ ದಾಖಲೆಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಪೊಟ್ಟುಕೆರೆ ಅಭಿವೃದ್ಧಿಗೆ ಕಣಂಜಾರು ಸಮೀಪದ ಕೊಡಿಲುಕಟ್ಟೆ ಎಂಬಲ್ಲಿ ಹತ್ತು ಸಾವಿರ ರೂ. ಕೆಲಸಕ್ಕೆ ಸರಕಾರದಿಂದ ಹತ್ತು ಲಕ್ಷ ರೂ. ಬಿಲ್ ಮಾಡಲಾಗಿದ್ದು ಮತ್ತೆ ಹದಿನೈದು ಲಕ್ಷ ರೂ.ಗೆ ಬೇಡಿಕೆ ಸಲ್ಲಿಸಲಾಗಿದೆ. ಬೋಗಸ್ ಕೆಲಸದಲ್ಲಿ ಲಕ್ಷ ಲಕ್ಷ ರೂ. ಲೂಟಿ ಮಾಡಲಾಗಿದೆ ಈ ಮೂಲಕ ಸುನೀಲ್ ಭ್ರಷ್ಟಾಚಾರ ಮೇಲುನೋಟಕ್ಕೆ ಸಾಬೀತಾಗಿದೆ ಎಂದು ಮುತಾಲಿಕ್ ಹೇಳಿದರು.

ಎರಡನೇ ದಾಖಲೆ ಬಿಡುಗಡೆಗೊಳಿಸಿದ ಮುತಾಲಿಕ್ ಪುರಾತನ ಊರಿಗೆ ನೀರುಣಿಸುತಿದ್ದ ಜಡ್ಡಿನಕಟ್ಟೆ ಕೆರೆಯನ್ನು ಮುಚ್ಚಿ ತೀರ್ಥಹಳ್ಳಿಯ ಷರೀಫ್ ಅಕ್ರಮ ಕ್ರಷರ್  ಮಾಡುತಿದ್ದರು ಅದನ್ನು ಮನಗಂಡು ಸಂಘಟನೆ ಪ್ರಮುಖರಾದ ದಿವ್ಯ ಹಾಗು ಇತರರ ಹೋರಾಟದ ಫಲವಾಗಿ ಗಣಿಗಾರಿಕೆ‌ ನಿಲುಗಡೆಯಾಗಿದೆ‌. ಈಗ ಸ್ಥಾಪಿತಹಿತಾಸಕ್ತರ ಕುಮ್ಮಕ್ಕಿನಿಂದ ಆ ಗಣಿಗಾರಿಕೆ ಆರಂಭಕ್ಕೆ ತಯಾರಿ ನಡೆಸಲಾಗುತ್ತಿದೆ. ಇದಕ್ಕೆ ಸಚಿವರ ಒತ್ತಡವೇ ಕಾರಣವಾಗಿದೆ ಎಂದು ಹೇಳಿದರು.

ನೀರೆ ಬೈಲೂರಿನಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆಗೆ ಅಂದಿನ ತಹಶೀಲ್ದಾರ್ ಹಾಗೂ ಉಪತಹಶೀಲ್ದಾರ್ ನೇತೃತ್ವದಲ್ಲಿ ಕಂದಾಯ ಇಲಾಖೆ ದಾಳಿ ನಡೆಸಿ ಕಲ್ಲುತುಂಬಿದ ಎರಡು ಲಾರಿಗಳನ್ನು ವಶಪಡಿಸಿ ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು. ಇದಾದ ಕೆಲ ಹೊತ್ತಿನಲ್ಲಿ ರಾಜಕೀಯ ಪ್ರಭಾವ ಬಳಸಿಕೊಂಡು ಆ ಎರಡು ಲಾರಿಗಳನ್ನು ಬಿಡುಗಡೆಗೊಳಿಸಲಾಗಿತ್ತು. ಈ ಎಲ್ಲಾ ಬೆಳವಣಿಯ ಬೆನ್ನಲ್ಲೇ ಜಿಲ್ಲಾಡಳಿತವು ಆ ಉಪತಹಶೀಲ್ದಾರ್ ಅವರನ್ನು ಕಾಪುವಿಗೆ ವರ್ಗಾವಹಿಸಿದ್ದರು. ಇದು ಕಾನೂನು ಸಮ್ಮತವಲ್ಲ. ಅದೇ ಉಪತಹಶೀಲ್ದಾರ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಎಂದರು.

ನೀರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೇಂದ್ರ ಸರಕಾರದ ಜಲಜೀವನ್ ಯೋಜನೆ ದುರುಪಯೋಗವಾಗಿದೆ. ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಟ್ಯಾಂಕಿನ ಕಳಪೆ ಕಾಮಗಾರಿಯಿಂದಾಗಿ ಒಂದು ಹನಿ ನೀರು ನಿಲ್ಲದೇ ಇದೀಗ ಟ್ಯಾಂಕ್ ದುರಸ್ಥಿ ನೆಪದಲ್ಲಿ ನೆಲಸಮ ಗೊಳಿಸುವ ಪ್ರಯತ್ನ ನಡೆಯುತ್ತಿದೆ. ಅಲ್ಲಿ ನಡೆದಿರುವ ಕಳಪೆ ಕಾಮಗಾರಿಯ ರೂವಾರಿಯಾಗಿರುವ ಗುತ್ತಿಗೆದಾರನೇ ಆ ಹಣವನ್ನು ಭರಿಸಿಸಬೇಕೆಂದು ಒತ್ತಾಯಿಸಿದರು.

ಭಾರತೀಯ ಪುರಾತತ್ವ ಸರ್ವೇ ಕ್ಷಣ ಇಲಾಖೆಯ ವ್ಯಾಪ್ತಿಯೊಳಪಟ್ಟ ಧಾರ್ಮಿಕ ಕ್ಷೇತ್ರ 150 ಮೀಟರ್ ಪರಿಧಿಯೊಳಗೆ ಬಹುಮಹಡಿ ಕಟ್ಟಡ ನಿರ್ಮಾಣವಾಗುತ್ತಿದ್ದು, ಕಾರ್ಕಳ ಪುರಸಭೆಯಿಂದ ನಾಲ್ಕು ಬಾರಿ ನೋಟೀಸ್ ಜಾರಿಗೊಂಡರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.

ಭ್ರಷ್ಟಾಚಾರ ಹಾಗೂ ಡೋಂಗಿ ಹಿಂದುತ್ವದ ವಿರುದ್ಧ ಸ್ವರ್ಧೆಗೆ ಇಳಿದಿದ್ದೇನೆ. ಮೋದಿ, ಯೋಗಿ ಮಾದರಿಯಲ್ಲಿ ಅಭಿವೃದ್ಧಿ ಹಾಗೂ ಆಡಳಿತ ನಡೆಸುವುದೇ ನನ್ನ ಗುರಿ. ಬಿಜೆಪಿಯ ಸಿದ್ಧಾಂತದೊಂದಿಗೆ ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡಲಾಗುವುದು.

ಸಂಘಟನೆಯ ಮೂಲಕ ಎಲ್ಲಾ ಜಿಲ್ಲೆಯ ಮೂಲೆ ಮೂಲೆಗಳಲ್ಲಿ ಹೋರಾಟ ನಡೆಸಿ ಭಾಷಣ ಬಿಗಿಯುತ್ತಿದ್ದಾಗ ಮುತಾಲಿಕ್ ಎಲ್ಲರಿಗೂ ಬೇಕಾಗಿದ್ದರು. ಲಾಭ ಪಡೆದರು. ಇಲ್ಲಿಗೆ ಯಾಕೆ ಬಂದರೆಂಬ ಪ್ರಶ್ನೆ ಕೇಳಲಿಲ್ಲ. ಈಗ ನನ್ನ ಸ್ವರ್ಧೆಯ ಕುರಿತು ಪ್ರಶ್ನಿಸುತ್ತಿದ್ದಾರೆ. 25 ಮಂದಿ ಹಿಂದುತ್ವವಾದಿಗಳಿಗೆ ಬಿಜೆಪಿಯಲ್ಲಿ ಸ್ವರ್ಧಿಸಲು ಅವಕಾಶ ಕೇಳಿದರೂ, ಕಡೆಗಣಿಸಿದ ಬಿಜೆಪಿ ನಾಯಕರಿಕಗೆ ಈಗ ನನ್ನ ಸ್ವರ್ಧೆಯಿಂದ ಕಾಲಬುಡಕ್ಕೆ ಬಿಸಿನೀರು ಬಂದತಾಗಿದೆ ಎಂದು ಲೇವಡಿ ಮಾಡಿದರು.

ಉಳ್ಳಾಲದಲ್ಲಿ  ಸ್ಪರ್ಧಿಸುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುತಾಲಿಕ್  ಸ್ಪರ್ಧಿಸುವುದಾದರೆ  ಸುನೀಲ್‌ ಕುಮಾರ್ ಉಳ್ಳಾಲದಲ್ಲೆ ಸ್ಪರ್ಧಿಸಲಿ ಎಂದು ಹೇಳಿದರು.

ಬೇನಾಮಿ ಹೆಸರಿನಲ್ಲಿ ಆಸ್ತಿ ಬಗ್ಗೆ ಸಚಿವ ಸುನೀಲ್ ಕುಮಾರ್  ಸ್ಪಷ್ಟನೆ ಕೊಟ್ಟಿಲ್ಲ. ತಾಕತ್ ಇದ್ದರೆ  ದಾಖಲೆಗಳಿಗೆ ಸಚಿವ ಸುನೀಲ್ ಕುಮಾರ್ ಉತ್ತರಿಸಲಿ ಎಂದು ಮುತಾಲಿಕ್ ಗುಡುಗಿದರು.

ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರ ರಹಿತ ಶುದ್ಧ ಹಸ್ತದಲ್ಲಿರುವ ವ್ಯಕ್ತಿ. ಆದರೆ ಅವರ ಹೆಸರಿನಲ್ಲಿ ಸುನೀಲ್ ಕುಮಾರ್ ಭ್ರಷ್ಟಾಚಾರ ಮಾಡುತ್ತಿದ್ದಾರೆ. ಇಂಧನ ಇಲಾಖೆಯಲ್ಲಿ  ಸಾಕಷ್ಟು ಭ್ರಷ್ಟಾಚಾರ ಬ್ರಹ್ಮಾಂಡವಿದೆ ಎಂದು ಹೇಳಿದರು.

ಈ ಸಂದರ್ಭ ಮಹಿಳಾ ಘಟಕದ ಮುಖ್ಯಸ್ಥೆ ದಿವ್ಯಾ, ಮುತಾಲಿಕ್ ಅಭಿಮಾನಿ ಬಳಗದ ಅಧ್ಯಕ್ಷ ಹರೀಶ್ ಅಧಿಕಾರಿ ಉಪಸ್ಥಿತರಿದ್ದರು.

share
Next Story
X