ಮಂಗಳೂರು: ಬ್ಯಾನರ್ ತೆರವು ವೇಳೆ ಅಧಿಕಾರಿಗಳಿಗೆ ನಿಂದನೆ ಆರೋಪ; ಪ್ರಕರಣ ದಾಖಲು
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಗಳು ಬ್ಯಾನರ್ ತೆರವುಗೊಳಿಸುತ್ತಿದ್ದಾಗ ಯುವಕರ ತಂಡವೊಂದು ನಿಂದನೆ ಮಾಡಿದ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರವೀಂದ್ರ ಎಂಬವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಂದಾಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಜಿಲ್ಲಾಧಿಕಾರಿಯ ಸೂಚನೆಯಂತೆ ಮಾ.24ರಂದು ರಾತ್ರಿ 9.30ಕ್ಕೆ ಅತ್ತಾವರ ಚಕ್ರಪಾಣಿ ದೇವಸ್ಥಾನದ ಹತ್ತಿರವಿರುವ ಅನಧಿಕೃತ ಬ್ಯಾನರ್ ತೆರವುಗೊಳಿಸುತ್ತಿದ್ದಾಗ ಅಲ್ಲಿಗೆ ಬಂದ ನಾಲ್ಕು ಮಂದಿ ಅಪರಿಚಿತರು ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ರವೀಂದ್ರ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
Next Story