ಪುತ್ತೂರು: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ
ಪುತ್ತೂರು: ಇಲ್ಲಿನ ಕೋರ್ಟ್ ರೋಡಿನಲ್ಲಿರುವ ಅಂಗಡಿಯೊಂದರ ಮಾಲಕ ದಿವಂಗತ ವಿಠಲ್ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್ (32) ಅವರು ರವಿವಾರ ಮಧ್ಯಾಹ್ನ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಕೆಮ್ಮಿಂಜೆ ನಿವಾಸಿಯಾಗಿರುವ ಇವರು, ಕೋರ್ಟ್ ರೋಡಿನಲ್ಲಿ ಜನರಲ್ ಸ್ಟೋರ್ ನಡೆಸುತ್ತಿದ್ದರು. ಕೆಲವು ದಿನಗಳ ಹಿಂದೆಯೂ ಆತ್ಮಹತ್ಯೆಗೆ ಯತ್ನ ನಡೆಸಿದ್ದರು ಎಂದು ಹೇಳಲಾಗಿದೆ. ನೇತ್ರಾವತಿ ಸೇತುವೆಯಲ್ಲಿ ದ್ವಿಚಕ್ರ ವಾಹನ ಇಟ್ಟಿದ್ದು, ಯಾರು ಇಲ್ಲದ ಬಗ್ಗೆ ಸಂಶಯಗೊಂಡ ಸ್ಥಳೀಯ ಈಜುಗಾರರು ನದಿಯಲ್ಲಿ ಹುಡುಕಲು ಆರಂಭಿಸಿದರು.
ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story