Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ರಸ್ತೆ ಅಪಘಾತ: ಸ್ಥಳೀಯಾಡಳಿತ,...

ಮಂಗಳೂರು ರಸ್ತೆ ಅಪಘಾತ: ಸ್ಥಳೀಯಾಡಳಿತ, ಪೊಲೀಸ್‌ ಇಲಾಖೆ ವಿರುದ್ಧ ಸಾರ್ವಜನಿಕರ ಪ್ರತಿಭಟನೆ

ಕಂಕನಾಡಿ ಸಿಗ್ನಲ್‌ ತೆರವುಗೊಳಿಸುವಂತೆ ನಾಗರಿಕರ ಪಟ್ಟು

ಇಸ್ಮಾಯಿಲ್ ಝೌರೇಝ್ಇಸ್ಮಾಯಿಲ್ ಝೌರೇಝ್30 March 2023 5:39 PM IST
share
ಮಂಗಳೂರು ರಸ್ತೆ ಅಪಘಾತ: ಸ್ಥಳೀಯಾಡಳಿತ, ಪೊಲೀಸ್‌ ಇಲಾಖೆ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಕಂಕನಾಡಿ ಸಿಗ್ನಲ್‌ ತೆರವುಗೊಳಿಸುವಂತೆ ನಾಗರಿಕರ ಪಟ್ಟು

ಮಂಗಳೂರು: ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ನಿರ್ವಹಣೆ ಮತ್ತು ನಿಯಂತ್ರಣದಲ್ಲಿ ವಿಫಲವಾಗಿರುವ ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತದ ವಿರುದ್ಧ ಮಂಗಳೂರಿನ ಸ್ಥಳೀಯರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ. ನಗರದ ಬೆಂದೂರ್‌ವೆಲ್‌ ಜಂಕ್ಷನ್‌ನಲ್ಲಿ ಖಾಸಗಿ ಬಸ್‌ ಹರಿದು 55 ವರ್ಷದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆಕ್ರೋಶಗೊಂಡ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.

ಕಂಕನಾಡಿ ಜಂಕ್ಷನ್‌ನಲ್ಲಿ ಸಿಗ್ನಲ್ ಅಳವಡಿಕೆ, ಜೀಬ್ರಾ ಕ್ರಾಸಿಂಗ್ ಮತ್ತು ಸ್ಪೀಡ್ ಬ್ರೇಕರ್‌ಗಳನ್ನು ಹಾಕಬೇಕು ಎಂದು ಆಗ್ರಹಿಸಿರುವ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ತಕ್ಷಣವೇ ಈಡೇರಿಸದಿದ್ದರೆ ಬೆಂದೋರ್‌ವೆಲ್ ಜಂಕ್ಷನ್ ಮತ್ತು ಕಂಕನಾಡಿ ಜಂಕ್ಷನ್ ಅನ್ನು ನಿರ್ಬಂಧಿಸುವುದಾಗಿ ಎಚ್ಚರಿಸಿದ್ದಾರೆ.

ನೂತನ ಪೊಲೀಸ್ ಕಮಿಷನರ್ ಅಧಿಕಾರ ವಹಿಸಿಕೊಂಡ ಬಳಿಕ ಕಂಕನಾಡಿ ಜಂಕ್ಷನ್‌ನಲ್ಲಿ ಸಿಗ್ನಲ್ ಅನ್ನು ಅವೈಜ್ಞಾನಿಕವಾಗಿ ಅಳವಡಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಹಲವಾರು ರಸ್ತೆ ತಿರುವುಗಳು ಮತ್ತು ಸಂಚಾರ ನಿಯಮಗಳು ಅವೈಜ್ಞಾನಿಕವಾಗಿರುವುದರಿಂದ ರಸ್ತೆ ಅಪಘಾತಗಳ ಹೆಚ್ಚಳಕ್ಕೆ ಕಾರಣವಾಗಿವೆ ಎಂದು ಅವರು ಹೇಳಿದ್ದಾರೆ.

ಮಂಗಳೂರಿನಲ್ಲಿ ಒಂದು ವಾರದಲ್ಲಿ ಎರಡು ಇಂತಹ ಸಾವುಗಳು ಸಂಭವಿಸಿದ್ದು,  ಈ ಹಿಂದೆ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ 11 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿತ್ತು.

ಕಂಕನಾಡಿ ಜಂಕ್ಷನ್‌ನಲ್ಲಿನ ಸಿಗ್ನಲ್‌ ತಪ್ಪಿಸಿಕೊಳ್ಳಲು ಖಾಸಗಿ ಬಸ್ ಚಾಲಕರು ಬೆಂದೂರ್‌ವೆಲ್ ಜಂಕ್ಷನ್ ಮೂಲಕ ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನಗಳನ್ನು ಗಣನೆಗೆ ತೆಗೆದುಕೊಳ್ಳದೆ ಸಂಚರಿಸುತ್ತಿದ್ದಾರೆ, ಕೂಡಲೇ ಕಂಕನಾಡಿ ಜಂಕ್ಷನ್‌ನಲ್ಲಿರುವ ಸಿಗ್ನಲ್ ತೆಗೆದು ಹಾಕಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. 

“ಚುನಾವಣೆ ಸಮಯದಲ್ಲಿ ಮತ ಭಿಕ್ಷೆಗೆ ಬರುತ್ತಾರೆ, ಆದರೆ ನಮ್ಮ ಬೇಡಿಕೆಗಳನ್ನು ಆಲಿಸಲು ಇದುವರೆಗೂ ಯಾರೂ ಬಂದಿಲ್ಲ, ಜನರ ಕುಂದುಕೊರತೆಗಳ ಬಗ್ಗೆ ಅವರು ಕಾಳಜಿ ವಹಿಸುವುದಿಲ್ಲ, ನಾವು ನಮ್ಮ ಸುರಕ್ಷತೆ ಬಗ್ಗೆ ಕಳವಳ ಹೊಂದಿದ್ದೇವೆ, ಖಾಸಗಿ ಬಸ್‌ಗಳಡಿಗೆ ಬೀಳುವ ಭಯದೊಂದಿಗೆ ನಾವು ರಸ್ತೆಯಲ್ಲಿ ಓಡಾಡಬೇಕೇ ಎಂದು ಧರನಿನಿರತ ವ್ಯಕ್ತಿಯೊಬ್ಬರು ಜನಪ್ರತಿನಿಧಿಗಳ ಮೇಲೆ ಆಕ್ರೋಶ ಹೊರಹಾಕಿದ್ದಾರೆ. 

"ಈ ಸಾವುಗಳಿಗೆ ಪೊಲೀಸ್ ಇಲಾಖೆ ಮತ್ತು ಅಧಿಕಾರಿಗಳನ್ನು ಮಾತ್ರ ಹೊಣೆಯಾಗಿಸಬೇಕು. ಕಳೆದ ಆರು ತಿಂಗಳಲ್ಲಿ ಈ ಜಂಕ್ಷನ್‌ನಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ" ಎಂದು ಅವರು ಹೇಳಿದರು.

ಪೊಲೀಸ್ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ತಮ್ಮ ಕುಂದುಕೊರತೆಗಳನ್ನು ಪರಿಶೀಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಮಾಜಿ ಶಾಸಕ ಮೊಯ್ದಿನ್ ಬಾವಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರಿಗೆ ಮತ್ತು ಅವರ ಬೇಡಿಕೆಗಳಿಗೆ ಬೆಂಬಲ ವ್ಯಕ್ತಪಡಿಸಿದರು. ಬಾವಾ ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ನಂತರ ಬಾವಾ ಅವರು ಪೊಲೀಸ್ ಆಯುಕ್ತರೊಂದಿಗೆ ಸಭೆ ನಡೆಸಿದರು.

ಪೊಲೀಸ್ ಆಯುಕ್ತರು ಮತ್ತು ಇತರ ಉನ್ನತ ಅಧಿಕಾರಿಗಳು ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವ ಕಾರಣ ಸಂಜೆ 6 ಗಂಟೆಗೆ ಪ್ರತಿಭಟನಾ ಸ್ಥಳಕ್ಕೆ ಬರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ಎಸಿಪಿ ಮಹೇಶ್ ಕುಮಾರ್ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಕುಮಾರ್ ಪ್ರತಿಭಟನಾಕಾರರ ಎಲ್ಲಾ ಬೇಡಿಕೆಗಳನ್ನು ಗಮನಿಸಿ ಅವರ ಬೇಡಿಕೆಗಳನ್ನು ಪರಿಗಣಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

share
ಇಸ್ಮಾಯಿಲ್ ಝೌರೇಝ್
ಇಸ್ಮಾಯಿಲ್ ಝೌರೇಝ್
Next Story
X