Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪತ್ನಿ, ಇಬ್ಬರು ಮಕ್ಕಳನ್ನು ಕೊಂದು...

ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ

ಮೈಸೂರಿನಿಂದ ಮಂಗಳೂರಿಗೆ ಆಗಮಿಸಿದ್ದ ಕುಟುಂಬ

31 March 2023 9:27 AM IST
share
ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ
ಮೈಸೂರಿನಿಂದ ಮಂಗಳೂರಿಗೆ ಆಗಮಿಸಿದ್ದ ಕುಟುಂಬ

ಮಂಗಳೂರು, ಮಾ.31: ಸಾಲ ತೀರಿಸಲಾಗದ ಹತಾಶೆಯಿಂದ ಉದ್ಯಮಿಯೊಬ್ಬರು ತನ್ನ ಪತ್ನಿ ಮತ್ತು ಅವಳಿ-ಜವಳಿ ಮಕ್ಕಳನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಗರದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಮೈಸೂರಿನ ವಿಜಯನಗರ ವಾಣಿ ವಿಲಾಸ  ಬಡಾವಣೆಯ ನಿವಾಸಿ ಉದ್ಯಮಿ ದೇವೇಂದ್ರ (48) ಎಂಬವರು ತನ್ನ ಪತ್ನಿ  ನಿರ್ಮಲಾ (45) ಮತ್ತು ಅವಳಿ-ಜವಳಿ ಪುತ್ರಿಯರಾದ ಚೈತ್ರಾ (9) ಹಾಗೂ ಚೈತನ್ಯಾ (9) ಅವರಿಗೆ ವಿಷವುಣಿಸಿ ಅಥವಾ ಕತ್ತು ಹಿಸುಕಿ ಕೊಂದು, ಬಳಿಕ ತಾನು ನೇಣುಬಿಗಿದು ಆತ್ಮಹತ್ಯೆಗೈದಿರಬೇಕು ಎಂದು ಶಂಕಿಸಲಾಗಿದೆ.

ಘಟನೆಯ ವಿವರ: ದೇವೇಂದ್ರ ಮೈಸೂರಿನಲ್ಲಿ ಅಟೋಮೊಬೈಲ್ ಲೇತ್ ಉದ್ಯಮವನ್ನು ನಡೆಸುತ್ತಿದ್ದರು. ಉದ್ಯಮದ ವೃದ್ಧಿಗೆ ಸಾಕಷ್ಟು ಸಾಲವನ್ನು ಮಾಡಿದ್ದ ದೇವೇಂದ್ರ ವ್ಯವಹಾರದಲ್ಲಿ ಭಾರೀ ನಷ್ಟ ಉಂಟಾದ ಕಾರಣ ತುಂಬಾ ಹತಾಶೆಯಲ್ಲಿದ್ದರು ಎನ್ನಲಾಗಿದೆ. ದೇವೇಂದ್ರ ತನ್ನ ಪತ್ನಿ ಮತ್ತು ಮಕ್ಕಳೊಂದಿಗೆ ಮಾ.27ರಂದು ಮಂಗಳೂರಿಗೆ ಆಗಮಿಸಿ ನಗರದ ಕೆ.ಎಸ್. ರಾವ್ ರಸ್ತೆಯ ಲಾಡ್ಜ್‌ನಲ್ಲಿ ರೂಂ ಪಡೆದು ಮಾ.30ರ ಸಂಜೆ ತೆರವು ಮಾಡುವುದಾಗಿ ತಿಳಿಸಿದ್ದರು. ಆದರೆ ಗುರುವಾರ ಸಂಜೆಯಾದರೂ ತೆರಳದೆ ಅದೇ ರೂಂನಲ್ಲಿ ವಾಸ್ತವ್ಯ ಹೂಡಿದ್ದರು. ಶುಕ್ರವಾರ ಬೆಳಗ್ಗೆ ಲಾಡ್ಜ್‌ನ ಸಿಬ್ಬಂದಿಯು ಬಾಗಿಲು ಬಡಿದಾಗ ಒಳಗಿನಿಂದ ಯಾವುದೇ ಸೂಚನೆ ಬರಲಿಲ್ಲ. ಸಂಶಯಗೊಂಡ ಸಿಬ್ಬಂದಿ ರೂಮಿನ ಇನ್ನೊಂದು ಕೀಯನ್ನು ಬಳಸಿ ಬಾಗಿಲು ತೆರೆದಾಗ ನಾಲ್ವರು ಮೃತಪಟ್ಟಿರುವುದು ಕಂಡು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದೇವೇಂದ್ರರ ಕುಟುಂಬಸ್ಥರು ಮೈಸೂರಿನಿಂದ ಮಂಗಳೂರಿಗೆ ಆಗಮಿಸಿ ಲಾಡ್ಜ್‌ನಲ್ಲಿ ಪರಿಶೀಲನೆ ನಡೆಸಿದರು. ಬಳಿಕ ಪೊಲೀಸರು ಅವರ ಸಮ್ಮುಖ ಮೃತದೇಹದ ಮಹಜರು ಮಾಡಿದರು. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಘಟನಾ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ನಗರದ ಕಾನೂನು ಸುವ್ಯವಸ್ಥಾ ವಿಭಾಗದ ಡಿಸಿಪಿ ಅಂಶುಕುಮಾರ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್, ಕೇಂದ್ರ ಉಪವಿಭಾಗದ ಎಸಿಪಿ ಮಹೇಶ್ ಕುಮಾರ್, ಬಂದರು ಪೊಲೀಸ್ ಇನ್‌ಸ್ಪೆಕ್ಟರ್ ರಾಘವೇಂದ್ರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಮದುವೆಯಾಗಿ ಇಪ್ಪತ್ತು ವರ್ಷಗಳಾದರೂ ಮಕ್ಕಳಾಗದ ಚಿಂತೆಯಲ್ಲಿದ್ದರು. ಚಿಕಿತ್ಸೆಯ ಬಳಿಕ ಅವಳಿ ಹೆಣ್ಣು ಮಕ್ಕಳು ಹುಟ್ಟಿದ್ದು ತುಂಬಾ ಸಂತೋಷದಲ್ಲಿದ್ದರು. ಅಣ್ಣ ಮತ್ತು ಅತ್ತಿಗೆ ತುಂಬಾ ಅನ್ಯೋನ್ಯವಾಗಿದ್ದರು. ಇತ್ತಿಚೆಗಷ್ಟೇ ಮಕ್ಕಳ ಹುಟ್ಟುಹಬ್ಬವನ್ನು ಮನೆಯಲ್ಲೇ ಆಚರಿಸಿದ್ದರು. ದೇವೇಂದ್ರ ಮೈಸೂರಿನಲ್ಲಿ ಲೇತ್ ಹಾಗೂ ಷಟರ್ ಫ್ಯಾಕ್ಟರಿ ಹೊಂದಿದ್ದು, ಆತನ ಕೈಕೆಳಗೆ 8 ಮಂದಿ ಕೆಲಸ ಮಾಡುತ್ತಿದ್ದರು. ಅವರಿಗೆ ಆರ್ಥಿಕ ಸಂಕಷ್ಟ ಇರುವ ಬಗ್ಗೆ ನಮಗೆ ಹೇಳಿರಲಿಲ್ಲ ಎಂದು ಮೃತ ದೇವೇಂದ್ರರ ಸಹೋದರ ರವಿ ಹೇಳಿದ್ದಾರೆ.

ಕಳೆದ 15ದಿನಗಳಿಂದ ಫ್ಯಾಕ್ಟರಿಗೆ ಬಂದಿರಲಿಲ್ಲ. ಫ್ಯಾಕ್ಟರಿಗೆ ಕೆಲವರು ಬರುತ್ತಾ ಇದ್ದರು. ಆದರೆ ಯಾಕೆ ಬರುತ್ತಿದ್ದರು ಅಂತ ಗೊತ್ತಾಗುತ್ತಿರಲಿಲ್ಲ. ಫ್ಯಾಕ್ಟರಿ ನಷ್ಟದಲ್ಲಿದ್ದು, ಕೆಲವೇ ಸಮಯದಲ್ಲಿ ಎಲ್ಲಾ  ಸರಿ ಆಗಬಹುದು ಅಂತ ಹೇಳಿದ್ದ. ಇವತ್ತು ಮುಂಜಾನೆ  ಫ್ಯಾಕ್ಟರಿ ಓಪನ್ ಮಾಡಿದಾಗ ಆತ್ಮಹತ್ಯೆಯ ಸುದ್ದಿ ತಿಳಿದು ಆಘಾತಕ್ಕೀಡಾದೆ ಎಂದು ರವಿ ನುಡಿದರು.

share
Next Story
X