ಅಬುಧಾಬಿ: ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಸ್ಥಳಕ್ಕೆ ಭೇಟಿ ನೀಡಿದ ವಿದೇಶಾಂಗ ಸಚಿವ ಎಸ್. ಜೈಶಂಕರ್

-

Photo: twitter

ಅಬುಧಾಬಿ: ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಸ್ಥಳಕ್ಕೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ (S. Jaishankar Visits Site Of Abu Dhabi's First Hindu Temple)ಬುಧವಾರ ಭೇಟಿ ನೀಡಿದರು.

ಮೊದಲ ಬಾರಿ ಅಬುಧಾಬಿಯಲ್ಲಿ ನಿರ್ಮಾಣವಾಗುತ್ತಿರುವ ದೇಗುಲವು "ಶಾಂತಿ, ಸಹಿಷ್ಣುತೆ ಮತ್ತು ಸಾಮರಸ್ಯದ ಸಂಕೇತ" ಎಂದು ಜೈಶಂಕರ್ ಬಣ್ಣಿಸಿದ್ದಾರೆ.

ಗಲ್ಫ್ ರಾಷ್ಟ್ರಕ್ಕೆ ಮೂರು ದಿನಗಳ ಭೇಟಿಗಾಗಿ ಬುಧವಾರ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಆಗಮಿಸಿದ ಎಸ್. ಜೈಶಂಕರ್ ಅವರು ದೇವಾಲಯದ ನಿರ್ಮಾಣದಲ್ಲಿ ಭಾರತೀಯರ ಶ್ರಮವನ್ನು ಶ್ಲಾಘಿಸಿದರು.

"ಗಣೇಶ ಚತುರ್ಥಿಯಂದು  ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯಕ್ಕೆ ಭೇಟಿ ನೀಡುವ ಭಾಗ್ಯ ಲಭಿಸಿದೆ. ತ್ವರಿತ ಪ್ರಗತಿಯನ್ನು ನೋಡಲು ಸಂತೋಷವಾಗುತ್ತಿದೆ. ಇದರಲ್ಲಿ ಒಳಗೊಂಡಿರುವ ಎಲ್ಲರ ಭಕ್ತಿಯನ್ನು ಆಳವಾಗಿ ಶ್ಲಾಘಿಸಿದೆ. ದೇಗುಲದ ಜಾಗದಲ್ಲಿ BAPS ತಂಡ, ಸಮುದಾಯ ಬೆಂಬಲಿಗರು  ಭಕ್ತರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಿದೆ" ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

55,000 ಚದರ ಮೀಟರ್ ಜಾಗದಲ್ಲಿ ದೇವಾಲಯ ನಿರ್ಮಾಣವಾಗಲಿದೆ. ದೇಗುಲದ ವಿನ್ಯಾಸವನ್ನು ಭಾರತೀಯ ದೇವಾಲಯದ ಕುಶಲಕರ್ಮಿಗಳು ಕೈಯಿಂದ ಕೆತ್ತಲಾಗುತ್ತದೆ ಮತ್ತು ಯುಎಇಯಲ್ಲಿ ಜೋಡಿಸಲಾಗುತ್ತದೆ. ಇದು ಮಧ್ಯಪ್ರಾಚ್ಯದಲ್ಲಿ ನಿರ್ಮಾಣವಾಗಲಿರುವ ಮೊದಲ ಸಾಂಪ್ರದಾಯಿಕ ಹಿಂದೂ ಕಲ್ಲಿನ ದೇವಾಲಯವಾಗಲಿದೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top