ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ಮುಸ್ತಫಾ
ಬಂಟ್ವಾಳ, ಮಾ. 17: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ಪಾಣೆಮಂಗಳೂರು ಪೌರ ಸಮಿತಿ ಸಂಚಾಲಕ ಯು. ಮುಸ್ತಫಾ ಆಲಡ್ಕ ಅವರು ನೇಮಕಗೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ನಿರ್ದೇಶನದ ಮೇರೆಗೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ ಅವರು ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್ ಪ್ರಕಟನೆ ತಿಳಿಸಿದೆ.
Next Story