Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಬಿಐ-ಎನ್‌ಐಎ ತನಿಖೆಗೆ ಕುಟುಂಬಸ್ಥರ...

ಸಿಬಿಐ-ಎನ್‌ಐಎ ತನಿಖೆಗೆ ಕುಟುಂಬಸ್ಥರ ಆಗ್ರಹ

ಜಲೀಲ್ ಕರೋಪಾಡಿ ಹತ್ಯೆಗೆ ಒಂದು ವರ್ಷ

ವಾರ್ತಾಭಾರತಿವಾರ್ತಾಭಾರತಿ20 April 2018 11:36 AM IST
share
ಸಿಬಿಐ-ಎನ್‌ಐಎ ತನಿಖೆಗೆ ಕುಟುಂಬಸ್ಥರ ಆಗ್ರಹ

► ಆರೋಪಿಗಳನ್ನು ಬಂಧಿಸದ ಪೊಲೀಸರು

► ಆರೋಪಿಗಳ ಮೇಲಿದ್ದ ‘ಕೋಕಾ’ ರದ್ದತಿಗೆ ಅಸಮಾಧಾನ

ಮಂಗಳೂರು, ಎ.19: ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಜನಪ್ರಿಯ ಯುವ ನಾಯಕ ಎ.ಅಬ್ದುಲ್ ಜಲೀಲ್ ಕರೋಪಾಡಿ ಹತ್ಯೆಯಾಗಿ ಇಂದಿಗೆ ಒಂದು ವರ್ಷ. 2017 ಎ.20ರಂದು ಹಾಡ ಹಗಲೇ ಕರೋಪಾಡಿ ಗ್ರಾಪಂ ಕಚೇರಿಯ ಒಳಗೆ ನುಗ್ಗಿದ ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ನಡೆಸಿತ್ತು. ಸರ್ವ ಜಾತಿ, ಧರ್ಮ, ಪಕ್ಷ, ಸಂಘಟನೆಗಳ ಜನರೊಂದಿಗೆ ಆತ್ಮೀಯತೆಯಿಂದಿದ್ದ ಹಾಗೂ ರಾಜಕೀಯ ವಾಗಿ ಬೆಳೆಯುತ್ತಿದ್ದ ಜಲೀಲ್ ಅವರ ಬರ್ಬರ ಹತ್ಯೆ ಇಡೀ ದ.ಕ. ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿತ್ತು. ಅಲ್ಲದೆ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹಾಗೂ ಗುಪ್ತಚರ ಇಲಾಖೆಯ ಕಾರ್ಯವೈಖರಿಯ ಬಗ್ಗೆಯೂ ಸಾರ್ವತ್ರಿಕ ಅಸಮಾಧಾನ ವ್ಯಕ್ತವಾಗಿತ್ತು. ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹಲವು ನಾಟಕೀಯ ಪ್ರಸಂಗಗಳ ಬಳಿಕ ಕೊನೆಗೂ ಪೊಲೀಸರು 12 ಆರೋಪಿ ಗಳನ್ನು ಬಂಧಿಸಿದ್ದರು. ಆದರೆ ಜಲೀಲ್ ಹತ್ಯೆಯ ಹಿಂದೆ ಪ್ರಭಾವಿ ವ್ಯಕ್ತಿಗಳಿರುವುದಾಗಿ ಆರೋಪಿಸಿದ ಅವರ ಕುಟುಂಬಸ್ಥರು, ಅಭಿಮಾನಿಗಳು ಹಾಗೂ ಗ್ರಾಮಸ್ಥರು ಸೂಕ್ತ ತನಿಖೆಗೆ ಪ್ರಕರಣವನ್ನು ಸಿಐಡಿ ಅಥವಾ ಸಿಬಿಐಗೆ ಒಪ್ಪಿಸುವಂತೆ ಆಗ್ರಹಿಸಿದ್ದರು.

ಕರೋಪಾಡಿ ಗ್ರಾಪಂ ಉಪಾಧ್ಯಕ್ಷ ಸ್ಥಾನ ಸಿಗದ ದ್ವೇಷದಿಂದ ಈ ಕೊಲೆ ನಡೆದಿದೆ ಎಂದು ಅಂದಿನ ಐಜಿಪಿ ಹರಿಶೇಖರನ್‌ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದರು. ಅಲ್ಲದೆ ಪ್ರಕರಣದ ಎಫ್‌ಐಆರ್‌ನಲ್ಲಿ ಭೂಗತ ಪಾತಕಿ ವಿಕ್ಕಿ ಶೆಟ್ಟಿ, ಕರೋಪಾಡಿ ಗ್ರಾಪಂ ಸದಸ್ಯ ದಿನೇಶ್ ಶೆಟ್ಟಿ (ಗ್ರಾಪಂ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು), ಪ್ರದೀಪ್ ಶೆಟ್ಟಿ, ವಿನೋದ್ ಶೆಟ್ಟಿ ಸಹಿತ ಒಟ್ಟು 17 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಎಫ್‌ಐಆರ್‌ನಲ್ಲಿ ಹೆಸರಿದ್ದರೂ ಆರೋಪಿ ಗಳಾದ ದಿನೇಶ್ ಶೆಟ್ಟಿ, ಪ್ರದೀಪ್ ಶೆಟ್ಟಿ, ವಿನೋದ್ ಶೆಟ್ಟಿಯನ್ನು ಪೊಲೀಸರು ಬಂಧಿಸದಿರುವ ಬಗ್ಗೆ ಪಕ್ಷದೊಳಗೆಯೇ ಅಸಮಾಧಾನ ಉಂಟಾಗಿತ್ತು. ಆರೋಪಿಗಳ ಬಂಧನವಾಗದಂತೆ ಜಿಲ್ಲೆಯ ಪ್ರಭಾವಿ ರಾಜಕಾರಣಿಗಳು ಪೊಲೀಸರನ್ನು ತಡೆಯುತ್ತಿದ್ದಾರೆ ಎಂಬ ಆರೋಪವೂ ಸಾಮಾಜಿಕ ಜಾಲತಾಣ ಗಳಲ್ಲಿ ವ್ಯಕ್ತವಾಗಿತ್ತು. ‘‘2018 ಜನವರಿ 1ರಂದು ಹೈಕೋರ್ಟ್ ಈ ಮೂವರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೂಡಾ ವಜಾ ಮಾಡಿತ್ತು.

ಇದೊಂದು ಸಂಘಟಿತ ಕೃತ್ಯವಾಗಿದ್ದು, ಈ ಮೂವರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಸರಿ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ ಆರೋಪಿಗಳ ಬಂಧನ ಆಗಬೇಕೆಂದು ಹೇಳಿತ್ತು. ಆದರೆ ಊರಿನಲ್ಲಿ ರಾಜಾರೋಷವಾಗಿ ತಿರುಗುತ್ತಿದ್ದ, ಗ್ರಾಪಂ ಸಭೆಯಲ್ಲಿ ಕೂಡಾ ಭಾಗವಹಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಲೇ ಇಲ್ಲ. ಆರೋಪಿಗಳನ್ನು ಬಂಧಿಸುವಂತೆ ಸ್ವಂತ ಡಿಜಿಪಿಯನ್ನು ಕೂಡಾ ಭೇಟಿ ಮಾಡಿ ಮನವಿ ಮಾಡಿದ್ದೆ. ಆದರೂ ಆರೋಪಿಗಳ ಬಂಧನ ಆಗಿಲ್ಲ. ಇದೀಗ 2018 ಮಾರ್ಚ್ 26ರಂದು ಸುಪ್ರೀಂ ಕೋರ್ಟ್ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನೀಡಿದೆ’’ ಎಂದು ಜಲೀಲ್ ಅವರ ತಂದೆ, ತಾಲೂಕು ಪಂಚಾಯತ್ ಹಿರಿಯ ಸದಸ್ಯ ಉಸ್ಮಾನ್ ಕರೋಪಾಡಿ ಬೇಸರ ವ್ಯಕ್ತಪಡಿಸುತ್ತಾರೆ. ಎಫ್‌ಐಆರ್‌ನಲ್ಲಿ ಹೆಸರಿರುವ 17 ಆರೋಪಿಗಳ ಪೈಕಿ 12 ಆರೋಪಿಗಳ ವಿರುದ್ಧ ಮಾತ್ರ ಸಿಐಡಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ವಿಕ್ಕಿ ಶೆಟ್ಟಿ, ದಿನೇಶ್ ಶೆಟ್ಟಿ, ವಿನೋದ್ ಶೆಟ್ಟಿ, ಪ್ರದೀಪ್ ಶೆಟ್ಟಿ ಸಹಿತ ಐವರ ಹೆಸರನ್ನು ಚಾರ್ಜ್ ಶೀಟ್‌ನಲ್ಲಿ ಸೇರಿಸದ ಸಿಐಡಿ ಪೊಲೀಸರು ತನಿಖೆ ಮುಂದುವರಿಯುತ್ತಿದೆ ಎಂದು ತಿಳಿಸಿದ್ದಾರೆ. ಇದೊಂದು ಸಂಘಟಿತ ಅಪರಾಧವಾಗಿದೆ ಎಂದು ಹೈಕೋರ್ಟ್ ಕೂಡಾ ಹೇಳಿದೆ. ಆದರೆ ಆರೋಪಿಗಳ ಮೇಲೆ ಹಾಕಲಾಗಿದ್ದ ಕೋಕಾ ಕಾಯ್ದೆಯನ್ನು ಸಿಐಡಿ ಪೊಲೀಸರು ತೆಗೆದು ಹಾಕಿದ್ದಾರೆ. ಇದು ತಪ್ಪು ಎಂದು ಉಸ್ಮಾನ್ ಕರೋಪಾಡಿ ಅಭಿಪ್ರಾಯಪಟ್ಟಿದ್ದಾರೆ.

ಐಜಿಪಿ ಹರಿಶೇಖರನ್ ಹೇಳಿದ ರೀತಿಯಲ್ಲಿ ತನಿಖೆ ಆಗಬೇಕು. ಆರೋಪಿಗಳ ಬಂಧನವಾಗದಿರುವುದು, ಚಾರ್ಜ್ ಶೀಟ್ ತಡಮಾಡಿರುವುದರಿಂದ ಬಂಧಿತ ಆರೋಪಿಗಳಿಗೆ ಜಾಮೀನು ಸಿಕ್ಕಿರುವುದು ಸಿಐಡಿ ತನಿಖೆಯ ಮೇಲೆ ಇದ್ದ ವಿಶ್ವಾಸ ಕಳೆದುಕೊಳ್ಳುವಂತಾಗಿದೆ. ಪ್ರಕರಣವನ್ನು ಸಿಬಿಐ ಅಥವಾ ಎನ್‌ಐಎಗೆ ಒಪ್ಪಿಸಬೇಕು. ಈ ಬಗ್ಗೆ ಮುಖ್ಯಮಂತ್ರಿ, ಗೃಹ ಸಚಿವ, ಡಿಜಿಪಿಗೆ ಮನವಿ ಮಾಡಿದ್ದೇನೆ. ಅಲ್ಲದೆ ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ ರಾಹುಲ್ ಗಾಂಧಿ ಬಳಿಯೂ ಆಗ್ರಹಿಸಿದ್ದೇನೆ. ಎಲ್ಲಾ ಆರೋಪಿಗಳ ಮೇಲೆ ಯುಎಪಿಎ ಹಾಕುವಂತೆಯೂ ಒತ್ತಾಯಿಸಿದ್ದೇನೆ ಎಂದು ಉಸ್ಮಾನ್ ಕರೋಪಾಡಿ ತಿಳಿಸಿದ್ದಾರೆ.

ಜಾಮೀನು ಸಿಕ್ಕಿದ ಎರಡೇ ದಿನದಲ್ಲಿ ಚಾರ್ಜ್ ಶೀಟ್!

ಜಲೀಲ್ ಕೊಲೆ ಪ್ರಕರಣದ ಆರೋಪಿಗಳಿಗೆ ಸುಲಭವಾಗಿ ಜಾಮೀನು ಸಿಗದ ಹಾಗೆ ಕುಟುಂಬಸ್ಥರು ಕಾನೂನು ಹೋರಾಟ ನಡೆಸುತ್ತಾ ಬಂದಿದ್ದರು. ಆದರೆ ನಿಗದಿತ ಅವಧಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸದ ಹಿನ್ನೆಲೆಯಲ್ಲಿ ಬಂಧಿತ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿತ್ತು. ಆರೋಪಿಗಳಿಗೆ ಜಾಮೀನು ಸಿಕ್ಕಿದ ಎರಡೇ ದಿನದಲ್ಲಿ ತನಿಖಾ ತಂಡ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿತ್ತು. ಆರೋಪಿಗಳಿಗೆ ಸುಲಭವಾಗಿ ಜಾಮೀನು ಸಿಗುವಂತಾಗಲು ತನಿಖಾ ತಂಡ ಉದ್ದೇಶಪೂರ್ವಕವಾಗಿ ಚಾರ್ಜ್ ಶೀಟ್ ಸಲ್ಲಿಸುವುದನ್ನು ತಡ ಮಾಡಿತ್ತು ಎಂಬ ಆರೋಪ ಸಾಮಾಜಿಕ ಜಾಲ ತಾಣಗಳಲ್ಲಿ ಕೇಳಿ ಬಂದಿತ್ತು. ಅಲ್ಲದೆ ಈ ಬಗ್ಗೆ ಮೌನವಾಗಿದ್ದ ಆಡಳಿತ ಪಕ್ಷದ ಜನಪ್ರತಿನಿಧಿಗಳು ಮತ್ತು ಮುಸ್ಲಿಮ್ ಮುಖಂಡರ ವಿರುದ್ಧ ಸಮಾನ ಮನಸ್ಕರು ಅಸಮಾಧಾನ ವ್ಯಕ್ತಪಡಿಸಿದ್ದರು. 

ನನ್ನ ಮಗನ ಹತ್ಯೆ ಪ್ರಕರಣ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ. ಆರೋಪಿಗಳ ವಿರುದ್ಧ್ದ ಐಜಿಪಿ ಹಾಕಿದ್ದ ಕೋಕಾ ಕಾಯ್ದೆಯನ್ನು ಭಡ್ತಿ ಪಡೆದ ಒಬ್ಬ ಡಿವೈಎಸ್ಪಿ ತೆಗೆದು ಹಾಕಿದ್ದಾರೆ ಎಂದರೆ ಈ ಪ್ರಕರಣ ಎಲ್ಲಿಗೆ ತಲುಪಿದೆ ಎಂಬುದು ಅರ್ಥವಾಗುತ್ತಿದೆ. ಸಿಐಡಿ ತನಿಖೆಯ ಮೇಲಿದ್ದ ವಿಶ್ವಾಸವೂ ಕಳೆದು ಹೋಗಿದೆ. ಅಂದಿನ ಐಜಿಪಿ ಹರಿಶೇಖರನ್ ಹೇಳಿದ ರೀತಿಯಲ್ಲಿ ತನಿಖೆ ನಡೆಯಬೇಕು ಎಂಬುದು ನನ್ನ ಒತ್ತಾಯ. ಈ ಪ್ರಕರಣದಲ್ಲಿ ಇನ್ನೂ ಕೆಲವು ಆರೋಪಿಗಳಿದ್ದಾರೆ. ತನಿಖೆಯಿಂದ ಅವರನ್ನು ಪತ್ತೆ ಹಚ್ಚಿ ಬಂಧಿಸಬೇಕು. ಅದಕ್ಕಾಗಿ ಈ ಪ್ರಕರಣವನ್ನು ಸಿಬಿಐ ಅಥವಾ ಎನ್‌ಐಎ ತನಿಖೆಗೆ ಒಪ್ಪಿಸಬೇಕು. ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯೊಂದಿಗೆ ಯುಎಪಿಎ ಅನ್ನೂ ಹಾಕಬೇಕು. ಒಟ್ಟಿನಲ್ಲಿ ನಮಗೆ ನ್ಯಾಯ ಬೇಕು.

- ಉಸ್ಮಾನ್ ಕರೋಪಾಡಿ, ಜಲೀಲ್ ಕರೋಪಾಡಿಯ ತಂದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X