ಬೈಕ್ ಡಿವೈಡರ್ಗೆ ಢಿಕ್ಕಿ: ಯುವಕ ಮೃತ್ಯು
ಮುಲ್ಕಿ, ಮಾ.20: ಬೈಕ್ ರೋಡ್ ಡಿವೈಡರ್ ಗೆ ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಪಾವಂಜೆ ದೇವಸ್ಥಾನದ ಬಳಿ ರವಿವಾರ ತಡರಾತ್ರಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟರನ್ನು ಪಡುಬಿದ್ರೆ ಸಮೀಪದ ಕಂಚಿನಡ್ಕ ನಿವಾಸಿ ಅಕ್ಷಯ್ (21) ಎಂದು ತಿಳಿದು ಬಂದಿದೆ.
ಡಿಜೆ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಅಕ್ಷಯ್ ಮಂಗಳೂರಿನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಪಾವಂಜೆ ದೇವಸ್ಥಾನದ ಬಳಿ ರಾ.ಹೆ. ಡಿವೈಡರ್ಗೆ ಬೈಕ್ ಢಿಕ್ಕಿ ಹೊಡೆದು ಈ ಧುರ್ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಲ್ಲಿ ಹೊಟ್ಟೆ ಹಾಗೂ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದ ಅಕ್ಷಯ್ ಸ್ಥಳದಲ್ಲೇ ಸಾವನ್ನಪ್ಪಿದ್ದ ಎಂದು ತಿಳಿದು ಬಂದಿದೆ.
ಈ ಸಂಬಂಧ ಉತ್ತರ ವಲಯ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story