ಅಕ್ರಮ ಜಾನುವಾರು ಸಾಗಾಟ: ಇಬ್ಬರ ಸೆರೆ
ಕಾರ್ಕಳ, ಜೂ.6: ಈದು ಗ್ರಾಮದ ಮುಗೇರ್ಕಳ ಎಂಬಲ್ಲಿ ಜೂ.5ರಂದು ಮಾರುತಿ ಓಮ್ನಿ ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಮೂಡಬಿದ್ರೆ ಶಿರ್ತಾಡಿಯ ಮುಹಮ್ಮದ್ ಮನ್ಸೂರ್(33) ಹಾಗೂ ಈದು ಮಠದಬೆಟ್ಟುವಿನ ಮೋನಪ್ಪಪರವ(78) ಬಂಧಿತ ಆರೋಪಿಗಳು. ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಬಂಧಿತರಿಂದ ಎರಡು ಜಾನುವಾರು ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story