ಫೆ.22: ಕ್ಯಾಂಪಸ್ ಫ್ರಂಟ್ ವತಿಯಿಂದ ’ಎಜುನೆಕ್ಷ್ಟ್’ ಕಾರ್ಯಗಾರ
ಮಂಗಳೂರು, ಫೆ.21: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ(ಸಿಎಫ್ಐ) ವತಿಯಿಂದ ಕೇಂದ್ರೀಯ ವಿಶ್ವವಿದ್ಯಾಲಯಗಳ ಪ್ರವೇಶ ಪ್ರಕ್ರಿಯೆ ಮತ್ತು ಉನ್ನತ ಶಿಕ್ಷಣದ ಕುರಿತು ‘ಎಜುನೆಕ್ಸ್ಟ್ ಎ ಡೋರ್ ಟು ಸೆಂಟ್ರಲ್ ಯುನಿವರ್ಸಿಟಿ’ ಕಾರ್ಯಾಗಾರವು ಫೆ.22ರಂದು ನಗರದ ಸಹೋದಯ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಅಪರಾಹ್ನ 3ಕ್ಕೆ ನಡೆಯುವ ಕಾರ್ಯಗಾರದಲ್ಲಿ ಸಿಎಫ್ಐ ರಾಷ್ಟ್ರೀಯ ಸಮಿತಿಯ ಸದಸ್ಯ ಹಾಗೂ ಜಾಮಿಯಾ ಮಿಲ್ಲಿಯಾ ವಿವಿ ವಿದ್ಯಾರ್ಥಿ ಪಿ.ವಿ.ಶುಹೈಬ್ ಮಾರ್ಗದರ್ಶನ ನೀಡುವರು. ಸಿಎಫ್ಐ ರಾಜ್ಯಾಧ್ಯಕ್ಷ ಫಯಾಝ್ ದೊಡ್ಡಮನೆ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸೈಂಟ್ ಅಲೋಶಿಯಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಜೋಯ್ಸಾ ಸಬೀನಾ ಲೋಬೋ ಮತ್ತು ಸಿಎಫ್ಐ ದ.ಕ ಜಿಲ್ಲಾಧ್ಯಕ್ಷ ಮುಹಮ್ಮದ್ ಸಾದಿಕ್ ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 7019258081ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story