ಕೋಡಿ: ಬ್ಯಾರೀಸ್ ಬಾಲಕಿಯರ ವಸತಿ ನಿಲಯದ ವಿಸ್ತ್ರತ ಕಟ್ಟಡ ಲೋಕಾರ್ಪಣೆ
ಕುಂದಾಪುರ, ಫೆ.21: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಬಾಲಕಿಯರ ವಸತಿ ನಿಲಯದ ವಿಸ್ತರಿತ ಎರಡು ಮಹಡಿಗಳ ಲೋಕಾರ್ಪಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕುಂದಾಪುರ ಪುರಸಭಾ ಸದಸ್ಯರಾದ ಲಕ್ಷ್ಮೀ ಹಾಗೂ ಅಶ್ಫಾಕ್ ನೂತನ ಮಹಡಿಗಳನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಅಬ್ದುರ್ರಹ್ಮಾನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಬ್ಯಾರೀಸ್ ಆಂಗ್ಲ ಮಾಧ್ಯಮ ಶಾಲೆಯ ಸಲಹೆಗಾರ ಯೂಸುಫ್, ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿವರ್ಗ, ವಸತಿ ನಿಲಯದ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕನ್ನಡ ಉಪನ್ಯಾಸಕ ಸಂದೀಪ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
Next Story