ಆ.31ರಂದು ಬಿ.ಎಂ.ಹನೀಫ್ ರ 'ಸೆಕ್ಯುಲರ್ ಸೇನಾನಿ ಸುಭಾಷ್ ಚಂದ್ರ ಬೋಸ್' ಪುಸ್ತಕ ಬಿಡುಗಡೆ
ಮಂಗಳೂರು, ಆ.30: ಪತ್ರಕರ್ತ, ಲೇಖಕ ಬಿ.ಎಂ.ಹನೀಫ್ ಅವರ 'ಸೆಕ್ಯುಲರ್ ಸೇನಾನಿ ಸುಭಾಷ್ ಚಂದ್ರ ಬೋಸ್' ಪುಸ್ತಕ ಬಿಡುಗಡೆ ಸಮಾರಂಭ ಆ.31ರಂದು ಶನಿವಾರ ಸಂಜೆ 4 ಗಂಟೆಗೆ ನಗರದ ಶ್ರೀನಿವಾಸ ಹೊಟೇಲ್ ಸಭಾಂಗಣದಲ್ಲಿ ನಡೆಯಲಿದೆ.
ವಿಶ್ರಾಂತ ಕುಲಪತಿ ಬಿ.ಎ.ವಿವೇಕ ರೈ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ವಹಿಸಲಿದ್ದಾರೆ.
ಸಮಾರಂಭದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್, ಜೆಪ್ಪು ಸೈಂಟ್ ಜೋಸೆಫ್ ಸೆಮಿನರಿಯ ಧರ್ಮಗುರು ವಂ. ನೆಲ್ಸನ್ ಅಲ್ಮೇಡಾ, ಲೇಖಕ ಬಿ.ಎಂ.ಹನೀಫ್ ಉಪಸ್ಥಿತರಿರುವರು ಎಂದು ಪ್ರಕಟನೆ ತಿಳಿಸಿದೆ.
Next Story