ಡಿಕೆಶಿ ಬಂಧನ ವಿರೋಧಿಸಿ ಪ್ರತಿಭಟನೆ: ರಮಾನಾಥ ರೈ, ಐವನ್ ಡಿಸೋಜ ಸೇರಿ ಹಲವರು ಪೊಲೀಸ್ ವಶಕ್ಕೆ
ಮಂಗಳೂರು: ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ಮಂಗಳೂರಿನಲ್ಲಿ ರಸ್ತೆ ತಡೆ ನಡೆಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.
ಈ ಸಂದರ್ಭ ರಸ್ತೆ ತಡೆ, ಪ್ರಧಾನಿ ಮೋದಿ ಹಾಗು ಅಮಿತ್ ಶಾ ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿದ ಕಾರಣ ಕಾಂಗ್ರೆಸ್ ನಾಯಕರಾದ ಮಾಜಿ ಸಚಿವ ರಮಾನಾಥ ರೈ ಹಾಗು ಐವನ್ ಡಿಸೋಜ ಸೇರಿ ಹಲವು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.