ಉಳ್ಳಾಲ ದರ್ಗಾದ ಆಡಳಿತಾಧಿಕಾರಿಯಾಗಿ ಹಾಜಿ ಇಬ್ರಾಹಿಂ ಗೂನಡ್ಕ ನೇಮಕ
ಮಂಗಳೂರು, ನ. 23: ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕೇಂದ್ರ ಮಂಗಳೂರಿನ ಉಳ್ಳಾಲ ಸಯ್ಯದ್ ಮದನಿ ದರ್ಗಾ ಹಾಗೂ ಅದರ ಅಧೀನದ ಸಂಸ್ಥೆಗಳಿಗೆ ಆಡಳಿತಾಧಿಕಾರಿಯಾಗಿ ನಿವೃತ್ತ ಸರ್ಕಾರಿ ಅಧಿಕಾರಿ ಹಾಜಿ ಇಬ್ರಾಹಿಂ ಗೂನಡ್ಕರವರನ್ನು ನೇಮಕಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಮಂಗಳೂರು, ಪುತ್ತೂರು ಸೇರಿದಂತೆ ವಿವಿಧ ತಾಲೂಕುಗಳ ಕ್ಷೇತ್ರಾಭಿವೃದ್ಧಿ ಅಧಿಕಾರಿಯಾಗಿ, ಸಾರಿಗೆ ಸಚಿವಾಲಯದ ವಿಶೇಷಾಧಿಕಾರಿಯಾಗಿ, ಕಾರ್ಮಿಕ ಇಲಾಖೆಯ ಉಪಕಾರ್ಯದರ್ಶಿಯಾಗಿ, ರಾಜ್ಯ ಅಂಗವಿಕಲರ ಅಧಿನಿಯಮದ ಸಹಾಯಕ ಆಯುಕ್ತರಾಗಿ, ಬೆಂಗಳೂರು ನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾಗಿ ಇಬ್ರಾಹಿಂ ಗೂನಡ್ಕರವರು ಸೇವೆಯನ್ನು ಸಲ್ಲಿಸಿದ್ದಾರೆ.
Next Story